• Home
  • »
  • News
  • »
  • jobs
  • »
  • SSC Recruitment: 990 ಸೈಟಿಂಸ್ಟ್​ ಹುದ್ದೆ ನೇಮಕಾತಿ; ಬೇಗ ಅರ್ಜಿ ಸಲ್ಲಿಸಿ

SSC Recruitment: 990 ಸೈಟಿಂಸ್ಟ್​ ಹುದ್ದೆ ನೇಮಕಾತಿ; ಬೇಗ ಅರ್ಜಿ ಸಲ್ಲಿಸಿ

 ಹುದ್ದೆಗಳಿಗೆ ಅರ್ಜಿ ಹಾಕಿ

ಹುದ್ದೆಗಳಿಗೆ ಅರ್ಜಿ ಹಾಕಿ

ಡಿಪ್ಲೊಮಾ ಮತ್ತು ಪದವೀಧರ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಆನ್​ಲೈನ್​ ಮೂಲಕ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್​ 18 ಆಗಿದೆ.

  • Share this:

    ಸ್ಟಾಫ್ ಸೆಲೆಕ್ಷನ್ ಕಮಿಷನ್ (Staff Selection Commission) 990 ಸೈಟಿಂಸ್ಟ್​ ಸಹಾಯಕ (Scientist Assistant) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆಯಲ್ಲಿ (IMD) ಈ ನೇಮಕಾತಿ ನಡೆಯಲಿದೆ. ಗ್ರೂಪ್​​ ಬಿ ನಾನ್​ ಗೆಜೆಟ್​ ಹುದ್ದೆಗಳು ಇವಾಗಿವೆ. ಡಿಪ್ಲೊಮಾ ಮತ್ತು ಪದವೀಧರ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಆನ್​ಲೈನ್​ ಮೂಲಕ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್​ 18 ಆಗಿದೆ.


    ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.


    ಹುದ್ದೆ ಮಾಹಿತಿಹುದ್ದೆ ವಿವರ
    ಸಂಸ್ಥೆಯ ಹೆಸರುಸಿಬ್ಬಂದಿ ಆಯ್ಕೆ ಆಯೋಗ (SSC)
    ಹುದ್ದೆಯ ಹೆಸರುವೈಜ್ಞಾನಿಕ ಸಹಾಯಕ
    ಹುದ್ದೆಗಳ ಸಂಖ್ಯೆ990
    ಉದ್ಯೋಗ ಸ್ಥಳಅಖಿಲ ಭಾರತ
    ವೇತನಎಸ್‌ಎಸ್‌ಸಿ ನಿಯಮಗಳ ಪ್ರಕಾರ


    ಶೈಕ್ಷಣಿಕ ಅರ್ಹತೆ: ಎಸ್‌ಎಸ್‌ಸಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯುನಿಕೇಶನ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ,  ವಿಜ್ಞಾನ/ಕಂಪ್ಯೂಟರ್ ಸೈನ್ಸ್/ಮಾಹಿತಿ ತಂತ್ರಜ್ಞಾನ/ಕಂಪ್ಯೂಟರ್ ಅಪ್ಲಿಕೇಶನ್‌ಗಳಲ್ಲಿ ಪದವಿ ಪೂರ್ಣಗೊಳಿಸಿರಬೇಕು.


    ಇದನ್ನು ಓದಿ: ಜಲ ಸಂಪನ್ಮೂಲ ಇಲಾಖೆಯಲ್ಲಿ 169 ಜೆಇ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ


    ವಯಸ್ಸಿನ ಮಿತಿ: ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 30 ವರ್ಷಗಳು ಮೀರಿರಬಾರದು.


    ವಯೋಮಿತಿ ಸಡಿಲಿಕೆ:
    ಒಬಿಸಿ ಅಭ್ಯರ್ಥಿಗಳು: 03 ವರ್ಷಗಳು
    ಪ.ಜಾ, ಪ.ಪಂ ಅಭ್ಯರ್ಥಿಗಳು: 05 ವರ್ಷಗಳು
    ವಿಕಲಚೇತನ ಅಭ್ಯರ್ಥಿಗಳು: 10 ವರ್ಷಗಳು


    ಅರ್ಜಿ ಶುಲ್ಕ:
    ಮಹಿಳೆಯರು, ಪ.ಜಾ, ಪ. ಪಂ ಮತ್ತು ವಿಕಲಚೇತನ ಅಭ್ಯರ್ಥಿಗಳು: ಶುಲ್ಕ ವಿನಾಯಿತಿ
    ಸಾಮಾನ್ಯ ಅಭ್ಯರ್ಥಿಗಳು: 100 ರೂ.
    ಪಾವತಿ ವಿಧಾನ: ಆನ್‌ಲೈನ್​ ಅಥವಾ ಚಲನ್


    ಆಯ್ಕೆ ಪ್ರಕ್ರಿಯೆ:
    ಕಂಪ್ಯೂಟರ್ ಆಧಾರಿತ ಪರೀಕ್ಷೆ , ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆ


    ಪ್ರಮುಖ ದಿನಾಂಕಗಳು:
    ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 29 ಸೆಪ್ಟೆಂಬರ್​ 2022
    ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20 ಅಕ್ಟೋಬರ್ 2022


    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: kshrc.karnataka.gov.in


    ಇದನ್ನು ಓದಿ: ಬೆಸ್ಕಾಂನಲ್ಲಿ 400 ಅಪ್ರೆಂಟಿಸ್​ ಹುದ್ದೆಗೆ ಅರ್ಜಿ ಆಹ್ವಾನ


    ಅರ್ಜಿ ಸಲ್ಲಿಕೆ ವಿಧಾನ


    -ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.


    -ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.


    - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.


    -ಅನ್ವಯಿಸಿದರೆ, ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ.
    ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್​ ಕ್ಲಿಕ್​ ಮಾಡಿ.

    Published by:Seema R
    First published: