SSC Recruitment: ಸ್ಟಾಫ್​ ಸೆಲೆಕ್ಷನ್​ ಕಮಿಷನ್​ನಿಂದ 20,000 ಹುದ್ದೆಗಳ ಭರ್ತಿಗೆ ಅಧಿಸೂಚನೆ

ಕೇಂದ್ರ ಸರ್ಕಾರದ ವಿವಿಧ ಇಲಾಖೆ, ಸಚಿವಾಲಯ ಸೇರಿದಂತೆ ಆಡಳಿತದಲ್ಲಿ ಈ ಹುದ್ದೆಗಳ ಭರ್ತಿ ಪ್ರಕ್ರಿಯೆ ನಡೆಯಲಿದೆ.

 ಹುದ್ದೆಗಳಿಗೆ ಅರ್ಜಿ ಹಾಕಿ

ಹುದ್ದೆಗಳಿಗೆ ಅರ್ಜಿ ಹಾಕಿ

  • Share this:
    ಸ್ಟಾಫ್​ ಸೆಲೆಕ್ಷನ್​ ಕಮಿಷನ್​ನಿಂದ (Staff Selection Commission) ಬರೋಬ್ಬರಿ 20,000 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಗ್ರೂಪ್​ ಬಿ ಮತ್ತು ಸಿ ಹುದ್ದೆಗಳ ಭರ್ತಿಗೆ ಎಸ್​ಎಸ್​ಸಿ ಸಿಜಿಎಲ್ (SSC CGL)​ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ. ಕೇಂದ್ರ ಸರ್ಕಾರದ ವಿವಿಧ ಇಲಾಖೆ, ಸಚಿವಾಲಯ ಸೇರಿದಂತೆ ಆಡಳಿತದಲ್ಲಿ ಈ ಹುದ್ದೆಗಳ ಭರ್ತಿ ಪ್ರಕ್ರಿಯೆ ನಡೆಯಲಿದೆ. ಆಸಕ್ತಿ ಹಿಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್​ 8 ಆಗಿದೆ.



























    ಹುದ್ದೆಗಳ ಮಾಹಿತಿಹುದ್ದೆಗಳ ವಿವರ
    ಸಂಸ್ಥೆಯ ಹೆಸರುಸ್ಟಾಫ್ ಸೆಲೆಕ್ಷನ್ ಕಮಿಷನ್ ಕಂಬೈನ್ಡ್ ಗ್ರಾಜುಯೇಟ್ ಲೆವೆಲ್ ಎಕ್ಸಾಮಿನೇಷನ್
    ಹುದ್ದೆಯ ಹೆಸರುಗ್ರೂಪ್​ ಬಿ ಮತ್ತು ಸಿ
    ಹುದ್ದೆಗಳ ಸಂಖ್ಯೆ20000
    ಉದ್ಯೋಗ ಸ್ಥಳಅಖಿಲ ಭಾರತ
    ವೇತನ 44900-142400 ರೂ. ಪ್ರತಿ ತಿಂಗಳು

    ಶೈಕ್ಷಣಿಕ ಅರ್ಹತೆ:  ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಯಾವುದೇ ವಿಷಯದಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕು.

    ಇದನ್ನು ಓದಿ: ಕರ್ನಾಟಕ ಆಂಟಿಬಯಾಟಿಕ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್​​ನಲ್ಲಿದೆ ಉದ್ಯೋಗ

    ವಯೋಮಿತಿ: ಅಧಿಕೃತ ಅಧಿಸೂಚನೆ ಅನುಸಾರ ಅಭ್ಯರ್ಥಿಯು ಕನಿಷ್ಟ 18ರಿಂದ ಗರಿಷ್ಟ 32 ವರ್ಷ ವಯೋಮಿತಿಯನ್ನು ಹೊಂದಿರಬೇಕು.

    ವಯೋಮಿತಿ ಸಡಿಲಿಕೆ:
    ಒಬಿಸಿ ಅಭ್ಯರ್ಥಿಗಳು: 3 ವರ್ಷಗಳು
    ಪ.ಜಾ, ಪ.ಪಂ  ಅಭ್ಯರ್ಥಿಗಳು: 5 ವರ್ಷಗಳು
    ವಿಕಲಚೇತನ ಅಭ್ಯರ್ಥಿಗಳು: 10 ವರ್ಷಗಳು

    ಅರ್ಜಿ ಶುಲ್ಕ:
    ಮಹಿಳೆಯರು, ಪ.ಜಾ, ಪ.ಪಂ ಮತ್ತು ವಿಕಲಚೇತನ ಅಭ್ಯರ್ಥಿಗಳು: ಶುಲ್ಕ ವಿನಾಯಿತಿ
    ಎಲ್ಲಾ ಇತರ ಅಭ್ಯರ್ಥಿಗಳು: 100 ರೂ.

    ಪಾವತಿ ವಿಧಾನ: ಆನ್‌ಲೈನ್ ಅಥವಾ ಚಲನ್

    ಆಯ್ಕೆ ಪ್ರಕ್ರಿಯೆ:
    ಶ್ರೇಣಿ-I, II ಮತ್ತು ಶ್ರೇಣಿ-III ಪರೀಕ್ಷೆಗಳು, ಕೌಶಲ್ಯ ಪರೀಕ್ಷೆ, ಯೋಗ್ಯತೆ

    ಇದನ್ನು ಓದಿ: ನಬಾರ್ಡ್​ನಲ್ಲಿ 177 ಹುದ್ದೆಗೆ ಅರ್ಜಿ ಸಲ್ಲಿಕೆ ಇಂದಿನಿಂದ ಆರಂಭ

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 17 ಸೆಪ್ಟೆಂಬರ್​​ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮತ್ತು ಆಫ್‌ಲೈನ್ ಚಲನ್‌ನ ರಚನೆ: 08 ಅಕ್ಟೋಬರ್​ 2022
    ಆನ್‌ಲೈನ್ ಶುಲ್ಕ ಪಾವತಿಗೆ ಕೊನೆಯ ದಿನಾಂಕ: 09 ಅಕ್ಟೋಬರ್ 2022
    ಚಲನ್ ಮೂಲಕ ಪಾವತಿಗೆ ಕೊನೆಯ ದಿನಾಂಕ: 10 ಅಕ್ಟೋಬರ್​​ 2022

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: ssc.nic.in

    ಅರ್ಜಿ ಸಲ್ಲಿಕೆ ಪ್ರಕ್ರಿಯೆ

    ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

    -ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ

    - ಅರ್ಜಿಯಲ್ಲಿ ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ಸೇರಿದಂತೆ ಇನ್ನಿತರ ಅಗತ್ಯ ದಾಖಲೆಗಳ ಮಾಹಿತಿ ಭರ್ತಿ ಮಾಡಿ.

    -ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ.  ಬಳಿಕ ಅರ್ಜಿ ಸಲ್ಲಿಸು ಬಟನ್​ ಕ್ಲಿಕ್​ ಮಾಡಿ
    Published by:Seema R
    First published: