SSC Recruitment: ಪಿಯುಸಿ ಆಗಿದ್ರೆ ಪೊಲೀಸ್​ ಕಾನ್ಸ್​ಟೇಬಲ್​ ಹುದ್ದೆಗೆ ಅರ್ಜಿ ಸಲ್ಲಿಸಿ; 1411 ಹುದ್ದೆಗೆ ಅರ್ಜಿ ಆಹ್ವಾನ

ಮೇಲ್ಕಂಡ ಹುದ್ದೆಗೆ ದೇಶದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಅವರಿಗೆ ಎಸ್​ಎಸ್​ಸಿ ಮೂಲಕ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುವುದು.

 ಹುದ್ದೆಗಳಿಗೆ ಅರ್ಜಿ ಹಾಕಿ

ಹುದ್ದೆಗಳಿಗೆ ಅರ್ಜಿ ಹಾಕಿ

  • Share this:
    ಸಿಬ್ಬಂದಿ ಸೇವಾ ಆಯೋಗ (Staff Selection Commission) 1411 ಪೊಲೀಸ್​​ ಕಾನ್ಸ್​ಟೇಬಲ್​ (ಡ್ರೈವರ್​) (Police Constable (Driver) ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ದೆಹಲಿಯಲ್ಲಿ ಅಭ್ಯರ್ಥಿಗಳು ಕಾರ್ಯ ನಿರ್ವಹಣೆ ಮಾಡಲಿದ್ದು, ಈ ನೇಮಕಾತಿ ಸಂಬಂಧ ಅಧಿಸೂಚನೆ ಪ್ರಕಟಿಸಿದೆ. ದ್ವಿತೀಯ ಪಿಯುಸಿ ಅಥವಾ ಅದಕ್ಕೆ ತತ್ಸಮಾನವಾದ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಅರ್ಜಿಯನ್ನು ಆನ್​ಲೈನ್​ ಮೂಲಕ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ29 ಆಗಿದೆ.

    ಮೇಲ್ಕಂಡ ಹುದ್ದೆಗೆ ದೇಶದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಅವರಿಗೆ ಎಸ್​ಎಸ್​ಸಿ ಮೂಲಕ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುವುದು. ಅಭ್ಯರ್ಥಿಗಳು ಭಾರೀ ವಾಹನ ಚಾಲನೆ ಮಾಡುವ ಅರ್ಹತೆಯನ್ನು ಹೊಂದಿರಬೇಕು. ಈ ಹುದ್ದೆಗಳು ಪುರಷ ಅಭ್ಯರ್ಥಿಗಳಿಗೆ ಮಾತ್ರ ಮೀಸಲಾಗಿದೆ.



























    ಹುದ್ದೆ ಮಾಹಿತಿಹುದ್ದೆ ವಿವರ
    ಸಂಸ್ಥೆಸಿಬ್ಬಂದಿ ಸೇವಾ ಆಯೋಗ (SSC)
    ಹುದ್ದೆಕಾನ್ಸ್​ಟೇಬಲ್​ (ಡ್ರೈವರ್​)
    ಒಟ್ಟು ಹುದ್ದೆ1411
    ಕಾರ್ಯ ನಿರ್ವಹಣೆ ಸ್ಥಳದೆಹಲಿ
    ವೇತನ21700- 69100 ರೂ ಮಾಸಿಕ

    ವಿದ್ಯಾರ್ಹತೆ: ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 10+2 ಅಥವಾ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.
    ಅಭ್ಯರ್ಥಿಯು ಇಂಗ್ಲಿಷ್​​ ಮತ್ತು ಹಿಂದಿಯಲ್ಲಿ ಮಾತ್ರ ಕಂಪ್ಯೂಟರ್​ ಆಧಾರಿತ ಪರೀಕ್ಷೆಯನ್ನು ಅಭ್ಯರ್ಥಿಗಳಿಗೆ ನಡೆಸಲಾಗುವುದು.
    ಅಭ್ಯರ್ಥಿಗಳು ಭಾರೀ ವಾಹನವನ್ನು ಚಾಲನೆ ಮಾಡುವ ಸಾಮರ್ಥ್ಯವನ್ನು ಹೊಂದಿರಬೇಕು.

    ಇದನ್ನು ಓದಿ: ಕೆನರಾ ಬ್ಯಾಂಕ್​ನಲ್ಲಿದೆ ಉದ್ಯೋಗಾವಕಾಶ; ಬೆಂಗಳೂರಿನಲ್ಲಿ ಕೆಲಸ

    ವಯೋಮಿತಿ : ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಆಗಿದ್ದು, ಗರಿಷ್ಠ 30 ವರ್ಷ ಮೀರಿರಬಾರದು.

    ವಯೋಮಿತಿ ಸಡಿಲಿಕೆ
    ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ
    ಹಿಂದುಳಿದ ಅಭ್ಯರ್ಥಿಗಳಿಗೆ 3 ವರ್ಷ
    ನಿವೃತ್ತ ಸೇವಾ ಅಧಿಕಾರಿಗೆ: 3 ವರ್ಷ
    ನ್ಯಾಷನಲ್​ ಲೇವಲ್​ ಕ್ರೀಡಾಪಟು: 5 ವರ್ಷ

    ಅರ್ಜಿ ಸಲ್ಲಿಕೆ ವಿಧಾನ
    ಆನ್​ಲೈನ್​

    ಅರ್ಜಿ ಶುಲ್ಕ
    ಸಾಮಾನ್ಯ, ಹಿಂದುಳಿದ ಅಭ್ಯರ್ಥಿಗಳಿಗೆ 100 ರೂ
    ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಶುಲ್ಕದ ವಿನಾಯಿತಿ ನೀಡಲಾಗಿದೆ.

    ಇದನ್ನು ಓದಿ: ಅಜೀಂ ಪ್ರೇಮ್​ಜೀ ಫೌಂಡೇಶನ್​ನಲ್ಲಿದೆ ಉದ್ಯೋಗ; ಪದವಿ ಆದವರಿಗೆ ಅವಕಾಶ

    ಪ್ರಮುಖ ದಿನಾಂಕ
    ಅರ್ಜಿ ಸಲ್ಲಿಕೆ ಆರಂಭ : 8 ಜುಲೈ 2022
    ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ: 29 ಜುಲೈ 2022
    ಅರ್ಜಿ ಶುಲ್ಕ ಕಟ್ಟಲು ಕಡೆಯ ದಿನಾಂಕ: 30 ಜುಲೈ
    ಆಫ್​ಲೈನ್ ಶುಲ್ಕ ಕಟ್ಟಲು ಕಡೆಯ ದಿನಾಂಕ: 30 ಜುಲೂ 2022
    ಅರ್ಜಿ ತಿದ್ದುಪಡಿ ದಿನಾಂಕ: 2 ಆಗಸ್ಟ್​ 2022

    ಪ್ರಮುಖ ಲಿಂಕ್​
    ಅಧಿಕೃತ ಅಧಿಸೂಚನೆಗೆ ಇಲ್ಲಿ ಕ್ಲಿಕ್​ ಮಾಡಿ
    ಅಧಿಕೃತ ವೆಬ್​ಸೈಟ್: ssc.nic.in

    ಅರ್ಜಿ ಸಲ್ಲಿಕೆ ಪ್ರಕ್ರಿಯೆ
    -ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ
    -ಆನ್‌ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
    -  ಹುದ್ದೆಗೆ ಅರ್ಜಿ ಸಲ್ಲಿಕೆ ಲಿಂಕ್​ ಅನ್ನು ಕ್ಲಿಕ್​ ಮಾಡಿ ಆನ್‌ಲೈನ್‌ನಲ್ಲಿ ಅನ್ವಯಿಸಿ -
    ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. - ನಿಮ್ಮ ಇತ್ತೀಚಿನ ಫೋಟೋಗ್ರಾಫ್ ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.
    - ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.
    ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಅನ್ನು ಕೊನೆಯದಾಗಿ ಕ್ಲಿಕ್ ಮಾಡಿ.
    Published by:Seema R
    First published: