SSC Recruitment: ಗ್ರೂಪ್​ ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗೆ ಇನ್ನೆರಡೇ ದಿನ ಬಾಕಿ

 ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

 ಹುದ್ದೆಗಳಿಗೆ ಅರ್ಜಿ ಹಾಕಿ

ಹುದ್ದೆಗಳಿಗೆ ಅರ್ಜಿ ಹಾಕಿ

  • Share this:
    ಸ್ಟಾಫ್​ ಸೆಲೆಕ್ಷನ್​ ಕಮಿಷನ್ (Staff Selection Commission)​ ವಿವಿಧ ಸ್ಟೆನೋಗ್ರಾಫರ್ (Stenographer)​ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಪಿಯುಸಿ ಓದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಗ್ರೂಪ್​ ಸಿ ಮತ್ತು ಗ್ರೂಪ್​ ಡಿ ಹುದ್ದೆಗಳ ಭರ್ತಿಗೆ ಎಸ್​ಎಸ್​ಸಿ ಅಧಿಸೂಚನೆ ಹೊರಡಿಸಿದ್ದು, ಕೇಂದ್ರ ಸರ್ಕಾರದ ಹುದ್ದೆಗಳಿಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶ ಆಗಿದ್ದು, ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಆನ್​ಲೈನ್​ ಸಲ್ಲಿಸಲು ಕಡೆಯ ದಿನಾಂಕ ಸೆಪ್ಟೆಂಬರ್​ 5 ಆಗಿದೆ.

    ಭಾರತದ ವಿವಿಧ ಕೇಂದ್ರ ಸರ್ಕಾರದ ಇಲಾಖೆಯಲ್ಲಿ ಕಾರ್ಯ ನಿರ್ವಹಿಸಲು ಇಚ್ಛಿಸುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.




























    ಹುದ್ದೆ ಮಾಹಿತಿಹುದ್ದೆ ವಿವರ
    ಸಂಸ್ಥೆಯ ಹೆಸರುಸಿಬ್ಬಂದಿ ಆಯ್ಕೆ ಆಯೋಗ (SSC)
    ಹುದ್ದೆಯ ಹೆಸರುಸ್ಟೆನೋಗ್ರಾಫರ್
    ಹುದ್ದೆ ಸಂಖ್ಯೆನಿಗದಿಪಡಿಸಿಲ್ಲ
    ಕಾರ್ಯ ನಿರ್ವಹಣೆ ಸ್ಥಳಅಖಿಲ ಭಾರತ ಮಟ್ಟದಲ್ಲಿ
    ವೇತನಎಸ್​ಎಸ್​ಸಿ ನಿಯಮ ಅನುಸಾರ


    ಶೈಕ್ಷಣಿಕ ಅರ್ಹತೆ: ಎಸ್‌ಎಸ್‌ಸಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 12 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.

    ಇದನ್ನು ಓದಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
     ವಯೋಮಿತಿ: ಅಧಿಕೃತ ಅಧಿಸೂಚನೆ ಅನುಸಾರ ಸ್ಟೆನೋಗ್ರಾಫರ್ (ಗ್ರೇಡ್ ಸಿ)ಗೆ ಅರ್ಜಿ ಸಲ್ಲಿಸುವವರು ಕನಿಷ್ಠ18 ಗರಿಷ್ಠ30ವರ್ಷ ವಯೋಮಿತಿ ಹೊಂದಿರಬೇಕು.
    ಅಧಿಕೃತ ಅಧಿಸೂಚನೆ ಅನುಸಾರ ಸ್ಟೆನೋಗ್ರಾಫರ್ (ಗ್ರೇಡ್ ಸಿ)ಗೆ ಅರ್ಜಿ ಸಲ್ಲಿಸುವವರು ಕನಿಷ್ಠ18 ಗರಿಷ್ಠ27ವರ್ಷ ವಯೋಮಿತಿ ಹೊಂದಿರಬೇಕು.


    ವಯೋಮಿತಿ ಸಡಿಲಿಕೆ
    ಒಬಿಸಿ ಅಭ್ಯರ್ಥಿಗಳು: 03 ವರ್ಷಗಳು
    ಪ.ಜಾ, ಪ.ಪಂ ಅಭ್ಯರ್ಥಿಗಳು: 05 ವರ್ಷಗಳು
    ವಿಕಲಚೇತನ ಅಭ್ಯರ್ಥಿಗಳು: 10 ವರ್ಷಗಳು




    ಅರ್ಜಿ ಶುಲ್ಕ:
    ಮಹಿಳೆಯರು, ಪ.ಜಾ, ಪ.ಪಂ, ವಿಕಲಚೇತನ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು: ಶುಲ್ಕ ವಿನಾಯಿತಿ
    ಎಲ್ಲಾ ಇತರ ಅಭ್ಯರ್ಥಿಗಳು: 100 ರೂ.

    ಪಾವತಿ ವಿಧಾನ: ಆನ್‌ಲೈನ್/ಚಲನ್

    ಇದನ್ನು ಓದಿ: ಐಟಿಐ, ಡಿಪ್ಲೊಮಾ ಆದವರಿಗೆ ಬಿಇಎಲ್​ನಲ್ಲಿದೆ ಕೆಲಸದ ಅವಕಾಶ; ಇಲ್ಲಿದೆ ಉದ್ಯೋಗ ಮಾಹಿತಿ

    ಆಯ್ಕೆ ಪ್ರಕ್ರಿಯೆ:
    ಕಂಪ್ಯೂಟರ್ ಆಧಾರಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ, ದಾಖಲೆ ಪರಿಶೀಲನೆ

    ಪ್ರಮುಖ ದಿನಾಂಕ:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 20 ಆಗಸ್ಟ್​​ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05 ಸೆಪ್ಟೆಂಬರ್​ 2022
    ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 06 ಸೆಪ್ಟೆಂಬರ್​ 2022
    ಆಫ್‌ಲೈನ್ ಚಲನ್ ಸಲ್ಲಿಸಲು ಕೊನೆಯ ದಿನಾಂಕ: 05ನೇ ಸೆಪ್ಟೆಂಬರ್ 2022

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: ssc.nic.in

    ಅರ್ಜಿ ಸಲ್ಲಿಕೆ ಪ್ರಕ್ರಿಯೆ:

    ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

    -ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

    - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ನೀಡಿ.

    - ನಿಮ್ಮ ವರ್ಗಕ್ಕೆ ಅನುಗುಣವಾಗಿ ಶುಲ್ಕ ಪಾವತಿಸಿ, ಅದರ ಮಾಹಿತಿ ಅಪ್​ಲೋಡ್​ ಮಾಡಿ

    -ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಬಳಿಕ ಸಲ್ಲಿಸು ಬಟನ್​ ಕ್ಲಿಕ್​ ಮಾಡಿ

    Published by:Seema R
    First published: