SSLR Recruitment 2023: ಸರ್ವೇ ಸೆಟಲ್ಮೆಂಟ್ & ಲ್ಯಾಂಡ್ ರೆಕಾರ್ಡ್ಸ್ ಕರ್ನಾಟಕ (Survey Settlement and Land Records Karnataka) ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಿಸಿದೆ. ಈ ಮೊದಲು ಫೆಬ್ರವರಿ 20, 2023 ಅರ್ಜಿ ಹಾಕಲು ಕೊನೆಯ ದಿನವಾಗಿತ್ತು. ಈಗ ಆ ದಿನಾಂಕವನ್ನು ಮಾರ್ಚ್ 10ರವರೆಗೆ ವಿಸ್ತರಿಸಿದೆ. ಒಟ್ಟು 2000 ಲೈಸೆನ್ಸ್ಡ್ ಲ್ಯಾಂಡ್ಲಾರ್ಡ್ಸ್ (Licensed Landlords) ಹುದ್ದೆಗಳು ಖಾಲಿ ಇದ್ದು, ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಪಿಯುಸಿ, ಡಿಪ್ಲೋಮಾ, ಬಿಇ, ಬಿ.ಟೆಕ್ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್ಲೈನ್ (Online) ಮೂಲಕ ಅರ್ಜಿ ಸಲ್ಲಿಸಬೇಕು. ಕರ್ನಾಟಕ ರಾಜ್ಯ ಕಂದಾಯ ಇಲಾಖೆಯಲ್ಲಿ ಕೆಲಸ ಮಾಡಲು ಇಚ್ಛಿಸುವ ಅಭ್ಯರ್ಥಿಗಳು ಈಗಲೇ ಅರ್ಜಿ ಹಾಕಿ. ಮಾರ್ಚ್ 10, 2023 ಅರ್ಜಿ ಹಾಕಲು ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಸರ್ವೇ ಸೆಟಲ್ಮೆಂಟ್ & ಲ್ಯಾಂಡ್ ರೆಕಾರ್ಡ್ಸ್ ಕರ್ನಾಟಕ |
ಹುದ್ದೆ | ಲೈಸೆನ್ಸ್ಡ್ ಲ್ಯಾಂಡ್ಲಾರ್ಡ್ಸ್ |
ಒಟ್ಟು ಹುದ್ದೆ | 2000 |
ವಿದ್ಯಾರ್ಹತೆ | ಪಿಯುಸಿ, ಡಿಪ್ಲೋಮಾ, ಬಿಇ, ಬಿ.ಟೆಕ್ |
ವೇತನ | ನಿಗದಿಪಡಿಸಿಲ್ಲ |
ಉದ್ಯೋಗದ ಸ್ಥಳ | ಕರ್ನಾಟಕ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಮಾರ್ಚ್ 10, 2023 |
ಇದನ್ನೂ ಓದಿ: KMF SHIMUL Recruitment 2023: ಕೆಎಂಎಫ್ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ನಾಳೆಯೊಳಗೆ ಅರ್ಜಿ ಹಾಕಿ
ಶೈಕ್ಷಣಿಕ ಅರ್ಹತೆ:
ಲೈಸೆನ್ಸ್ಡ್ ಲ್ಯಾಂಡ್ಲಾರ್ಡ್ಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಡ್ಡಾಯವಾಗಿ ಪಿಯುಸಿ, ಡಿಪ್ಲೋಮಾ, ಬಿಇ/ಬಿ.ಟೆಕ್, ಐಟಿಐ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಲೈಸೆನ್ಸ್ಡ್ ಲ್ಯಾಂಡ್ಲಾರ್ಡ್ಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಫೆಬ್ರವರಿ 20, 2023ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 65 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಅನುಭವ:
ಅಭ್ಯರ್ಥಿಗಳು ಕರ್ನಾಟಕ ಸರ್ಕಾರದ ಲ್ಯಾಂಡ್ ಸರ್ವೇ ರೆವೆನ್ಯೂ ಸಿಸ್ಟಮ್ನಲ್ಲಿ ಕನಿಷ್ಠ 10 ವರ್ಷಗಳ ಕಾಲ ಕೆಲಸ ಮಾಡಿದ ಅನುಭವ ಹೊಂದಿರಬೇಕು.
ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳು 1000 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಪಾವತಿಸುವ ವಿಧಾನ- ಆನ್ಲೈನ್
ಇದನ್ನೂ ಓದಿ: Karnataka Water Resources Department Recruitment 2023: ಜಲಸಂಪನ್ಮೂಲ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಇತರೆ ಶುಲ್ಕ:
ಟ್ರೈನಿಂಗ್ ಶುಲ್ಕ- 5000 ರೂ. (ಡಿಮ್ಯಾಂಡ್ ಡ್ರಾಫ್ಟ್)
ಲೈಸೆನ್ಸ್ ಶುಲ್ಕ- 3000 ರೂ.
ಆಯ್ಕೆ ಪ್ರಕ್ರಿಯೆ:
ಆನ್ಲೈನ್ ಟೆಸ್ಟ್
ಲಿಖಿತ ಪರೀಕ್ಷೆ
ವೇತನ:
ನಿಗದಿಪಡಿಸಿಲ್ಲ
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 02/02/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್ 10, 2023
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಫೋನ್ ನಂಬರ್- 080-22221038 ಗೆ ಬೆಳಗ್ಗೆ 10 ಗಂಟೆಯಿಂದ ಸಂಜೆ 5.30ರೊಳಗೆ ಕರೆ ಮಾಡಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ