SSC CGL Recruitment 2022: ಕೇಂದ್ರ ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಅವಕಾಶ; ಎಸ್​ಎಸ್​ಸಿ ಸಿಜಿಲ್​ ಅಧಿಸೂಚನೆ ಬಿಡುಗಡೆ

SSC CGL Recruitment 2022: ಕೇಂದ್ರ ಸರ್ಕಾರದ ವಿವಿಧ ಇಲಾಖೆ, ಸಚಿವಾಲಯದಲ್ಲಿ ವಿವಿಧ ಗ್ರೂಪ್ ಬಿ ಮತ್ತು ಗ್ರೂಪ್ ಸಿ ಹುದ್ದೆಗಳನ್ನು ಭರ್ತಿ ಮಾಡಲು ಎಸ್​ಎಸ್​ಸಿ ಸಿಜಿಎಲ್​ ಪರೀಕ್ಷೆ ನಡೆಸುತ್ತದೆ.

 ಹುದ್ದೆಗಳಿಗೆ ಅರ್ಜಿ ಹಾಕಿ

ಹುದ್ದೆಗಳಿಗೆ ಅರ್ಜಿ ಹಾಕಿ

  • Share this:
    ಸ್ಟಾಫ್ ಸೆಲೆಕ್ಷನ್ ಕಮಿಷನ್ (Staff Selection Commission) ಕಂಬೈನ್ಡ್ ಗ್ರಾಜುಯೇಟ್ ಲೆವೆಲ್ ಎಕ್ಸಾಮ್ (Combined Graduate Level Exam- CGL) 2022 ಪರೀಕ್ಷೆಗೆ ಇಂದು ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದೆ. ಈ ಮೂಲಕ ಕೇಂದ್ರ ಸರ್ಕಾರದ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಲಾಗಿದೆ. ಪದವಿ ಹೊಂದಿರುವ ಅರ್ಹ ಮತ್ತು ಸೂಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

    ಭಾರತ ಸರ್ಕಾರದ ವಿವಿಧ ಸಚಿವಾಲಯಗಳು, ಇಲಾಖೆಗಳು, ಸಂಸ್ಥೆಗಳು ಮತ್ತು ವಿವಿಧ ಸಾಂವಿಧಾನಿಕ ಸಂಸ್ಥೆಗಳು, ಶಾಸನಬದ್ಧ ಸಂಸ್ಥೆಗಳು, ನ್ಯಾಯಮಂಡಳಿಗಳು ಇತ್ಯಾದಿಗಳಲ್ಲಿ ವಿವಿಧ ಗ್ರೂಪ್ ಬಿ ಮತ್ತು ಗ್ರೂಪ್ ಸಿ ಹುದ್ದೆಗಳನ್ನು ಭರ್ತಿ ಮಾಡಲು ಎಸ್​ಎಸ್​ಸಿ ಸಿಜಿಎಲ್​ ಪರೀಕ್ಷೆ ನಡೆಸುತ್ತದೆ.



























    ಹುದ್ದೆ ಮಾಹಿತಿಹುದ್ದೆ ವಿವರ
    ಸಂಸ್ಥೆಯ ಹೆಸರುಸ್ಟಾಫ್ ಸೆಲೆಕ್ಷನ್ ಕಮಿಷನ್(SSC CGLE)
    ಹುದ್ದೆಯ ಹೆಸರುಗ್ರೂಪ್​ ಬಿ ಮತ್ತು ಗ್ರೂಪ್​ ಸಿ
    ಒಟ್ಟು ಹುದ್ದೆನಿಗದಿಪಡಿಸಿಲ್ಲ
    ಕಾರ್ಯ ನಿರ್ವಹಣೆ ಸ್ಥಳಅಖಿಲ ಭಾರತ
    ವೇತನಆಯೋಗದ ನಿಯಮ ಅನುಸಾರ

    ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು.

    ವಯಸ್ಸಿನ ಮಿತಿ: ಅಧಿಕೃತ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 30 ವರ್ಷಗಳನ್ನು ಹೊಂದಿರಬೇಕು.

    ಇದನ್ನು ಓದಿ: ಕೆಎಸ್​ಯುನಲ್ಲಿದೆ ಡೇಟಾ ಎಂಟ್ರಿ ಆಪರೇಟರ್ ಹುದ್ದೆ; ವಾಕ್​ ಇನ್​ನಲ್ಲಿ ಭಾಗಿಯಾಗಿ

    ವಯೋಮಿತಿ ಸಡಿಲಿಕೆ:
    ಒಬಿಸಿ ಅಭ್ಯರ್ಥಿಗಳು: 3 ವರ್ಷಗಳು
    ಪ.ಜಾ, ಪ.ಪಂ ಅಭ್ಯರ್ಥಿಗಳು: 5 ವರ್ಷಗಳು
    ವಿಕಲಚೇತನ ಅಭ್ಯರ್ಥಿಗಳು: 10 ವರ್ಷಗಳು

    ಅರ್ಜಿ ಶುಲ್ಕ:
    ಒಬಿಸಿ ಸಾಮಾನ್ಯ ಅಭ್ಯರ್ಥಿಗಳು: 100 ರೂ
    ಪ.ಜಾ, ಪ.ಪಂ ಅಭ್ಯರ್ಥಿಗಳು: ಶುಲ್ಕ ವಿನಾಯಿತಿ

    ಆಯ್ಕೆ ಪ್ರಕ್ರಿಯೆ:
    ಶ್ರೇಣಿ-I, II, ಮತ್ತು ಶ್ರೇಣಿ-III ಪರೀಕ್ಷೆಗಳು, ಕೌಶಲ್ಯ ಪರೀಕ್ಷೆ, ಯೋಗ್ಯತೆ

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಶೀಘ್ರದಲ್ಲೇ ಅಧಿಸೂಚನೆ ಹೊರಬೀಳಲಿದೆ
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಶೀಘ್ರದಲ್ಲೇ ಅಧಿಸೂಚನೆ ಹೊರಬೀಳಲಿದೆ

    ಇದನ್ನು ಓದಿ: 2500 ಸರ್ಕಾರಿ ಪ್ರೌಢ ಶಾಲಾ ಶಿಕ್ಷಕರ ನೇಮಕಾತಿ: ಶೀಘ್ರದಲ್ಲೇ ಅಧಿಸೂಚನೆ ಪ್ರಕಟ

    ಪ್ರಮುಖ ಲಿಂಕ್
    ಅಧಿಕೃತ ವೆಬ್​ಸೈಟ್​​: ssc.nic.in

    ಅರ್ಜಿ ಸಲ್ಲಿಕೆ ವಿಧಾನ

    ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.

    ಅಧಿಕೃತ ವೆಬ್​ಸೈಟ್​ ಮೂಲಕ ಅರ್ಜಿ ನಮೂನೆಯನ್ನು ಡೌನ್​ಲೋಡ್​ ಮಾಡಿ ಸ್ವಯಂ ದೃಢೀಕರಿಸಿದ ಅರ್ಜಿಗಳನ್ನು ಲಗತ್ತಿಸಿ

    ಅರ್ಜಿಜೊತೆಗೆ ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ.

    ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ.

    ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ
    Published by:Seema R
    First published: