Chikkaballapur DC Office Recruitment 2022: ಸರ್ಕಾರಿ ಉದ್ಯೋಗ ಹುಡುಕುತ್ತಿದ್ದರೆ ಇಲ್ಲಿದೆ ನೋಡಿ ಸುವರ್ಣಾವಕಾಶ. ನೀವು ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ್ದರೆ ನಿಮಗೆ ಸರ್ಕಾರಿ ಕೆಲಸ ಸಿಗೋದು ಪಕ್ಕಾ. ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿಪತ್ತು ನಿರ್ವಹಣಾ ಸಲಹೆಗಾರ(Disaster Management Consultant) ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಉದ್ಯೋಗ ಹುಡುಕುತ್ತಿರುವ ಸ್ಥಳೀಯ ಅಭ್ಯರ್ಥಿಗಳು(Local Candidates) ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಇವತ್ತೇ(ನವೆಂಬರ್ 28, 2022) ಕೊನೆಯ ದಿನವಾಗಿದೆ. ಆಸಕ್ತರು ಈ ಕೂಡಲೇ ಅರ್ಜಿ ಹಾಕಿ, ಈ ಅವಕಾಶವನ್ನು ಮಿಸ್ ಮಾಡಿಕೊಳ್ಳಬೇಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 14/11/2022
ಅರ್ಜಿ ಸಲ್ಲಿಸಲು ಕೊನೆ ದಿನ: 28/11/2022
ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆ ಏನಿರಬೇಕು?
ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳ ಕಚೇರಿ ನೇಮಕಾತಿ ಅಧಿಸೂಚನೆ ಪ್ರಕಾರ, ವಿಪತ್ತು ನಿರ್ವಹಣಾ ಸಲಹೆಗಾರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ವಿಜ್ಞಾನ/ಸಮಾಜ ವಿಜ್ಞಾನ/ಗ್ರಾಮೀಣಾಭಿವೃದ್ಧಿ/ಪರಿಸರ ವಿಜ್ಞಾನ/ನಿರ್ವಹಣೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.
ಹುದ್ದೆಯ ಕುರಿತಾದ ನೋಟಿಫಿಕೇಶನ್- ಇಲ್ಲಿ ಕ್ಲಿಕ್ ಮಾಡಿ
ಸಂಬಳ ಎಷ್ಟು ಕೊಡಲಾಗುತ್ತೆ?
ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳ ಕಚೇರಿ ನೇಮಕಾತಿ ಅಧಿಸೂಚನೆ ಪ್ರಕಾರ, ವಿಪತ್ತು ನಿರ್ವಹಣಾ ಸಲಹೆಗಾರ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 48,400 ರೂ. ವೇತನ ನೀಡಲಾಗುತ್ತದೆ.
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಚಿಕ್ಕಬಳ್ಳಾಪುರ |
ಹುದ್ದೆ | ವಿಪತ್ತು ನಿರ್ವಹಣಾ ಸಲಹೆಗಾರ |
ವಿದ್ಯಾರ್ಹತೆ | ಸ್ನಾತಕೋತ್ತರ ಪದವಿ |
ವೇತನ | ಮಾಸಿಕ ₹ 48,400 |
ಉದ್ಯೋಗದ ಸ್ಥಳ | ಚಿಕ್ಕಬಳ್ಳಾಪುರ |
ಆಯ್ಕೆ ಪ್ರಕ್ರಿಯೆ ಹೇಗೆ ನಡೆಯುತ್ತೆ?
ಅಭ್ಯರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆ ನೀಡಲಾಗುತ್ತದೆ. ಅದರಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಶಾರ್ಟ್ಲಿಸ್ಟ್ ಮಾಡಿ ಸಂದರ್ಶನಕ್ಕೆ ಕರೆಯಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08156-277001 ಗೆ ಕರೆ ಮಾಡಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ