ಬೆಂಗಳೂರು ನಗರ ಜಿಲ್ಲೆಯ(Bengaluru City) ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಯೋಜನಾ ನಿರ್ದೇಶಕ(Programming Director) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳನ್ನು ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಹಾಕಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ |
ಹುದ್ದೆ | ಯೋಜನಾ ನಿರ್ದೇಶಕ |
ವಿದ್ಯಾರ್ಹತೆ | ಸ್ನಾತಕೋತ್ತರ ಪದವಿ |
ವೇತನ | ನಿಯಮಾನುಸಾರ |
ಅನುಭವ | 5 ವರ್ಷ |
ಅರ್ಜಿ ಸಲ್ಲಿಕೆ ಬಗೆ | ಆಫ್ಲೈನ್ |
ಹೆಚ್ಚಿನ ಮಾಹಿತಿಗಾಗಿ | 9535405935 |
ಇದನ್ನೂ ಓದಿ: JOBS: ತಿಂಗಳಿಗೆ 1.40 ಲಕ್ಷ ಸಂಬಳ- ಪದವೀಧರರಿಗೆ ಇಲ್ಲಿದೆ ಬಂಪರ್ ಉದ್ಯೋಗ
ಅನುಭವ:
ವಿವಿಧ ಸಾಮಾಜಿಕ ಕಾರ್ಯಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುವ ಕುರಿತು 5 ವರ್ಷಗಳಲ್ಲಿ ಅನುಭವ ಹೊಂದಿರಬೇಕು.
ಇತರೆ ಕೌಶಲ್ಯ:
ಕನ್ನಡ ಮತ್ತು ಇಂಗ್ಲಿಷ್ ಮಾತನಾಡುವ ಹಾಗೂ ಬರೆಯುವ ಉತ್ತಮ ಕೌಶಲ್ಯ ಹೊಂದಿರಬೇಕು.
ಕಂಪ್ಯೂಟರ್ ಜ್ಞಾನವನ್ನು ಅಗತ್ಯವಾಗಿ ಹೊಂದಿರಬೇಕು.
ಕಚೇರಿಯ ಲೆಕ್ಕಪತ್ರಗಳ ವ್ಯವಹಾರವನ್ನು ತಿಳಿದಿರಬೇಕು.
ವಯೋಮಿತಿ:
ಅಭ್ಯರ್ಥಿಗಳ ವಯಸ್ಸು ಗರಿಷ್ಠ 40 ವರ್ಷ ಮೀರಿರಬಾರದು.
ಯೋಜನಾ ನಿರ್ದೇಶಕರ ಹುದ್ದೆಯು ಖಾಯಂ ಹುದ್ದೆ ಆಗಿರುವುದಿಲ್ಲ. ಈ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗೆ ಮಾಸಿಕ ಸಂಚಿತ ಗೌರವಧನವನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ತಮ್ಮ ಪೂರ್ಣ ಹೆಸರು, ವಿಳಾಸ, ವಿದ್ಯಾರ್ಹತೆ, ಅನುಭವ ಪತ್ರ ಮತ್ತು ಇತರೆ ಮಾಹಿತಿಗಳೊಂದಿಗೆ 15 ದಿನಗಳ ಒಳಗಾಗಿ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಸಹಾಯಕ ಕಾರ್ಮಿಕ ಆಯುಕ್ತರು ಹಾಗೂ ಸದಸ್ಯ ಕಾರ್ಯದರ್ಶಿಗಳು
ಉಪವಿಭಾಗ-4
ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ
ಕೊಠಡಿ ಸಂಖ್ಯೆ: 3
ಕಾರ್ಮಿಕ ಇಲಾಖೆ
ಕಾರ್ಮಿಕ ಭವನ
ಬನ್ನೇರುಘಟ್ಟ ರಸ್ತೆ
ಬೆಂಗಳೂರು- 560029
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂಬರ್ 9535405935 ಗೆ ಸಂಪರ್ಕಿಸಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ