KFD Recruitment 2023: ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯಲ್ಲಿ(Karnataka Forest Department) ಅನೇಕ ಹುದ್ದೆಗಳು ಖಾಲಿ ಇವೆ. ಆಸಕ್ತರು ಅರ್ಜಿ ಹಾಕುವ ಮೂಲಕ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಕನ್ನಡ ಮಾತನಾಡಲು (Kannada Speaking) ಮತ್ತು ಅರ್ಥ ಮಾಡಿಕೊಳ್ಳಲು ಬಂದರೆ ಸಾಕು. ಈ ಹುದ್ದೆಗಳಿಗೆ ಅರ್ಜಿ ಹಾಕಬಹುದು. ಕೊಡಗು, ಚಾಮರಾಜನಗರ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಒಟ್ಟು 19 ಆನೆ ಕಾವಾಡಿಗ (Ane Kavadiga) ಹುದ್ದೆಗಳು ಖಾಲಿ ಇವೆ. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಅರ್ಜಿ ಹಾಕಲು ಏಪ್ರಿಲ್ 29, 2023 ಕೊನೆಯ ದಿನವಾಗಿದೆ (Last Date). ಅಭ್ಯರ್ಥಿಗಳು ಆಫ್ಲೈನ್/ ಪೋಸ್ಟ್ ಮೂಲಕ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಕರ್ನಾಟಕ ಅರಣ್ಯ ಇಲಾಖೆ |
ಹುದ್ದೆ | ಆನೆ ಕಾವಾಡಿಗ |
ಒಟ್ಟು ಹುದ್ದೆ | 19 |
ವಿದ್ಯಾರ್ಹತೆ | ಕನ್ನಡ ಭಾಷೆ ಮಾತನಾಡಲು ಬರಬೇಕು |
ವೇತನ | ಮಾಸಿಕ ₹ 18,600-32,600 |
ಉದ್ಯೋಗದ ಸ್ಥಳ | ಕರ್ನಾಟಕ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಏಪ್ರಿಲ್ 29, 2023 |
ಇದನ್ನೂ ಓದಿ: IIIT Bangaloreನಲ್ಲಿ ರಿಸರ್ಚ್ ಅಸೋಸಿಯೇಟ್ ಹುದ್ದೆಗೆ ಅರ್ಜಿ ಹಾಕಿ
ವಿದ್ಯಾರ್ಹತೆ:
ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳಿಗೆ ಕನ್ನಡ ಮಾತನಾಡಲು ಮತ್ತು ಅರ್ಥ ಮಾಡಿಕೊಳ್ಳಲು ಬಂದರೆ ಸಾಕು. ಅಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಹಾಕಬಹುದು.
ಇದನ್ನೂ ಓದಿ: Job Alert: ಮೈಸೂರಿನ CFTRIನಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನ- ತಿಂಗಳಿಗೆ 25,000 ಸಂಬಳ
ವೇತನ:
ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 18,600-32,600 ಸಂಬಳ ಕೊಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಆಯಾ ಅರಣ್ಯ ವಲಯ ಅಧಿಕಾರಿಗಳಿಗೆ (ಅಧಿಕೃತ ಅಧಿಸೂಚನೆಯ ಪ್ರಕಾರ) ಏಪ್ರಿಲ್ 29ಕ್ಕೆ ಮುನ್ನ ಕಳುಹಿಸಬೇಕು.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 15/03/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಏಪ್ರಿಲ್ 29, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ