DC Office Bengaluru Urban Recruitment 2023: ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಕಚೇರಿಯು(DC Office Bengaluru Urban) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಇಲ್ಲಿರುವ ಹುದ್ದೆಗಳಿಗೆ ಯಾವುದೇ ವಿದ್ಯಾರ್ಹತೆ(Education Qualification) ಅನ್ವಯಿಸುವುದಿಲ್ಲ. ಕೇವಲ ಕನ್ನಡ ಮಾತನಾಡಲು ಬಂದರೆ ಸಾಕು, ಅಂತಹ ಅಭ್ಯರ್ಥಿಗಳು ಇಲ್ಲಿ ಅರ್ಜಿ ಹಾಕಬಹುದು. ಒಟ್ಟು 105 ಲೋಡರ್ಸ್, ಕ್ಲೀನರ್ಸ್ ಹುದ್ದೆಗಳು ಖಾಲಿ ಇವೆ. ಆಸಕ್ತರು ಈ ಕೂಡಲೇ ಅರ್ಜಿ ಹಾಕಿ.
ಮಾರ್ಚ್ 15, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆಫ್ಲೈನ್/ ಪೋಸ್ಟ್ ಮೂಲಕ ಅರ್ಜಿ ಹಾಕಬೇಕು. ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಕಚೇರಿ |
ಹುದ್ದೆ | ಲೋಡರ್ಸ್, ಕ್ಲೀನರ್ಸ್ |
ಒಟ್ಟು ಹುದ್ದೆ | 105 |
ವಿದ್ಯಾರ್ಹತೆ | ಯಾವುದೇ ವಿದ್ಯಾರ್ಹತೆ ಇಲ್ಲ |
ವೇತನ | ಮಾಸಿಕ 17,000-28,950 ರೂ |
ಉದ್ಯೋಗದ ಸ್ಥಳ | ಬೆಂಗಳೂರು |
ಅರ್ಜಿ ಸಲ್ಲಿಸಲು ಕೊನೆಯ ದಿನ | ಮಾರ್ಚ್ 15, 2023 |
ಇದನ್ನೂ ಓದಿ: Banking Jobs: ಬ್ಯಾಂಕ್ ಆಫ್ ಇಂಡಿಯಾದಲ್ಲಿ 500 ಪ್ರೊಬೆಷನರಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ವಿದ್ಯಾರ್ಹತೆ ಅನ್ವಯಿಸುವುದಿಲ್ಲ. ಆದರೆ ಅಭ್ಯರ್ಥಿಗಳು ಕನ್ನಡ ಮಾತನಾಡಲು ತಿಳಿದಿರಬೇಕು.
ಅನುಭವ:
ಆಯಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಲೋಡರ್ಸ್/ ಕ್ಲೀನರ್ಸ್ ಹುದ್ದೆಯಲ್ಲಿ ಹಾಲಿ ಕ್ಷೇಮಾಭಿವೃದ್ಧಿ/ ದಿನಗೂಲಿ/ ಗುತ್ತಿಗೆ/ ಸಮಾನ ಕೆಲಸಕ್ಕೆ ಸಮಾನ ವೇತನ/ ಹೊರಗುತ್ತಿಗೆ ಆಧಾರದಲ್ಲಿ ಕನಿಷ್ಠ 2 ವರ್ಷಕ್ಕಿಂತ ಕಡಿಮೆಯಿಲ್ಲದಂತೆ, ನಿರಂತರವಾಗಿ ಕೆಲಸ ನಿರ್ವಹಿಸಿರಬೇಕು.
ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಕಾರ್ಯನಿರ್ವಹಿಸುತ್ತಿರುವ ಲೋಡರ್ಸ್ & ಕ್ಲೀನರ್ಸ್ ಈ ಹುದ್ದೆಗಳಿಗೆ ಅರ್ಜಿ ಹಾಕಬಹುದು.
ಇದನ್ನೂ ಓದಿ: Railway Jobs: ಎಂಜಿನಿಯರಿಂಗ್ ಆಗಿದ್ರೆ ರೈಲ್ವೆ ಇಲಾಖೆಯಲ್ಲಿದೆ ಬಂಪರ್ ಉದ್ಯೋಗ- ಈಗಲೇ Apply ಮಾಡಿ
ವಯೋಮಿತಿ:
ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 55 ವರ್ಷ ಮೀರಿರಬಾರದು.
ವೇತನ:
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 17,000-28,950 ರೂ. ವೇತನ ಕೊಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಮಾರ್ಚ್ 15, 2023 ಸಂಜೆ 5.30 ಗಂಟೆಯೊಳಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಯೋಜನಾ ನಿರ್ದೇಶಕರು
ಜಿಲ್ಲಾ ನಗರ ಅಭಿವೃದ್ಧಿ ಘಟಕ
ಜಿಲ್ಲಾಧಿಕಾರಿಗಳ ಕಚೇರಿ
4ನೇ ಮಹಡಿ
ಬೆಂಗಳೂರು ನಗರ ಜಿಲ್ಲೆ
ಹುದ್ದೆಗೆ ಸಂಬಂಧಿಸಿದ ಅಧಿಸೂಚನೆ ಇಲ್ಲಿದೆ:
ಅಧಿಸೂಚನೆ- ಬೆಂಗಳೂರು ನಗರ ಡಿಸಿ ಕಚೇರಿ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 08/02/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್ 15, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ