BMRCL Recruitment 2023: ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್(Bengaluru Metro Rail Corporation Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 4 ಚೀಫ್ ಜನರಲ್ ಮ್ಯಾನೇಜರ್, ಜನರಲ್ ಮ್ಯಾನೇಜರ್, ಚೀಫ್ ಎಂಜಿನಿಯರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈಗಲೇ ಅರ್ಜಿ ಸಲ್ಲಿಸಿ. ಜನವರಿ 7, 2023 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆಫ್ಲೈನ್(Offline) ಮೂಲಕ ಅರ್ಜಿ ಸಲ್ಲಿಸಬೇಕು. ಫೆಬ್ರವರಿ 6, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ(Last Date)ವಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ಮೆಟ್ರೋದ ಅಧಿಕೃತ ವೆಬ್ಸೈಟ್ bmrc.co.inಗೆ ಭೇಟಿ ನೀಡಬಹುದು.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುಲರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ |
ಹುದ್ದೆ | ಚೀಫ್ ಜನರಲ್ ಮ್ಯಾನೇಜರ್, ಜನರಲ್ ಮ್ಯಾನೇಜರ್, ಚೀಫ್ ಎಂಜಿನಿಯರ್ |
ಒಟ್ಟು ಹುದ್ದೆ | 4 |
ವೇತನ | ಮಾಸಿಕ ₹ 37,400- 67,000 |
ಉದ್ಯೋಗದ ಸ್ಥಳ | ಬೆಂಗಳೂರು |
ಇದನ್ನೂ ಓದಿ: ಇಂದಿರಾ ಗಾಂಧಿ ರಾಷ್ಟ್ರೀಯ ಕಲಾ ಕೇಂದ್ರದಲ್ಲಿ ಉದ್ಯೋಗಾವಕಾಶ- ಡಿಗ್ರಿ ಆದವರು ಅರ್ಜಿ ಹಾಕಿ
ವಿದ್ಯಾರ್ಹತೆ:
ಚೀಫ್ ಜನರಲ್ ಮ್ಯಾನೇಜರ್/ ಜನರಲ್ ಮ್ಯಾನೇಜರ್/ ಚೀಫ್ ಎಂಜಿನಿಯರ್- ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಎಂಜಿನಿಯರಿಂಗ್ನಲ್ಲಿ ಬಿ.ಇ/ ಬಿ.ಟೆಕ್
ಚೀಫ್ ಜನರಲ್ ಮ್ಯಾನೇಜರ್/ ಜನರಲ್ ಮ್ಯಾನೇಜರ್ (HR)- ಎಂಬಿಎ, HR ನಲ್ಲಿ ಸ್ನಾತಕೋತ್ತರ ಪದವಿ
ವಯೋಮಿತಿ:
ನಿಗದಿ ಪಡಿಸಿಲ್ಲ.
ವೇತನ:
ಮಾಸಿಕ ₹ 37,400- 67,000
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಜನರಲ್ ಮ್ಯಾನೇಜರ್ (HR)
ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್
3ನೇ ಮಹಡಿ
BMTC ಕಾಂಪ್ಲೆಕ್ಸ್
K.H. ರಸ್ತೆ
ಶಾಂತಿನಗರ
ಬೆಂಗಳೂರು - 560027
ಇದನ್ನೂ ಓದಿ: Bengaluru Metro: ಬೆಂಗಳೂರು ಮೆಟ್ರೋದಲ್ಲಿ ವಿವಿಧ ಹುದ್ದೆಗಳು ಖಾಲಿ-ತಿಂಗಳಿಗೆ 50,000-1.65 ಲಕ್ಷದವರೆಗೆ ಸಂಬಳ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 07/01/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 6, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ