BSCL Recruitment 2023: ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್(Belagavi Smart City Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಎಕ್ಸಿಕ್ಯೂಟಿವ್ ಎಂಜಿನಿಯರ್, ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಳಗಾವಿಯಲ್ಲಿ(Belagavi) ಪೋಸ್ಟಿಂಗ್ ನೀಡಲಾಗುತ್ತದೆ. ಮಾರ್ಚ್ 21, 2023 ಅಂದರೆ ಇಂದು ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್ಲೈನ್/ ಪೋಸ್ಟ್ (Post) ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ತಡಮಾಡದೇ ಈಗಲೇ ಅರ್ಜಿ(Application) ಹಾಕಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್ |
ಹುದ್ದೆ | ಎಕ್ಸಿಕ್ಯೂಟಿವ್ ಎಂಜಿನಿಯರ್, ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್ |
ಒಟ್ಟು ಹುದ್ದೆ | 2 |
ವಿದ್ಯಾರ್ಹತೆ | ಪದವಿ, ಸ್ನಾತಕೋತ್ತರ ಪದವಿ |
ವೇತನ | ನಿಗದಿಪಡಿಸಿಲ್ಲ |
ಉದ್ಯೋಗದ ಸ್ಥಳ | ಬೆಳಗಾವಿ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಮಾರ್ಚ್ 21, 2023 (ಇಂದು) |
ಇದನ್ನೂ ಓದಿ: KPSC ನೇರ ನೇಮಕಾತಿ: 53 ಗ್ರೂಪ್-C ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ವಿದ್ಯಾರ್ಹತೆ:
ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸಿವಿಲ್ ಎಂಜಿನಿಯರಿಂಗ್ನಲ್ಲಿ ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 65 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಇದನ್ನೂ ಓದಿ: RDPR Karnataka: ಓಂಬುಡ್ಸ್ಪರ್ಸನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆ
ವೇತನ:
ನಿಗದಿಪಡಿಸಿಲ್ಲ
ಉದ್ಯೋಗದ ಸ್ಥಳ:
ಬೆಳಗಾವಿ
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ವ್ಯವಸ್ಥಾಪಕ ನಿರ್ದೇಶಕರು
ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್
ಬೆಳಗಾವಿ
ಕರ್ನಾಟಕ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 13/03/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್ 21, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ