CIMS Chikkamagaluru Recruitment 2023: ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 35 ಸ್ಟಾಫ್ ನರ್ಸ್ (Staff Nurse) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 10, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಉದ್ಯೋಗಾಂಕ್ಷಿಗಳು ಆಫ್ಲೈನ್ (Offline) ಮೂಲಕ ಅರ್ಜಿ ಸಲ್ಲಿಸಬೇಕು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಕೆಲಸ ಹುಡುಕುತ್ತಿರುವ ಸ್ಥಳೀಯ ಅಭ್ಯರ್ಥಿಗಳಿಗೆ (Local Candidates) ಇದೊಂದು ಸುವರ್ಣಾವಕಾಶವಾಗಿದೆ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ |
ಹುದ್ದೆ | ಸ್ಟಾಫ್ ನರ್ಸ್ |
ಒಟ್ಟು ಹುದ್ದೆ | 35 |
ವಿದ್ಯಾರ್ಹತೆ | ಬಿಎಸ್ಸಿ ನರ್ಸಿಂಗ್ |
ವೇತನ | ಮಾಸಿಕ ₹ 20,000 |
ಉದ್ಯೋಗದ ಸ್ಥಳ | ಚಿಕ್ಕಮಗಳೂರು |
ಅರ್ಜಿ ಸಲ್ಲಿಸಲು ಕೊನೆಯ ದಿನ | ಏಪ್ರಿಲ್ 10, 2023 |
ಇದನ್ನೂ ಓದಿ: KSP Recruitment 2023: ಪೊಲೀಸ್ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ- ಮೈಸೂರಿನಲ್ಲಿ ಪೋಸ್ಟಿಂಗ್
ವಯೋಮಿತಿ:
ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 38 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
SC/ST/ ಪ್ರವರ್ಗ- 1 ಅಭ್ಯರ್ಥಿಗಳು- 5 ವರ್ಷ
ಪ್ರವರ್ಗ- 2ಎ/ 2ಬಿ/ 3ಎ & 3ಬಿ ಅಭ್ಯರ್ಥಿಗಳು- 2 ವರ್ಷ
ಅನುಭವ:
ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಕನಿಷ್ಠ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕು.
ಅರ್ಜಿ ಶುಲ್ಕ:
SC/ST/ ಪ್ರವರ್ಗ- 1 ಅಭ್ಯರ್ಥಿಗಳು- 250 ರೂ.
ಸಾಮಾನ್ಯ ಅಭ್ಯರ್ಥಿಗಳು- 500 ರೂ.
ಪಾವತಿಸುವ ಬಗೆ- ಡಿಮ್ಯಾಂಡ್ ಡ್ರಾಫ್ಟ್
ವೇತನ:
ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 20,000 ಸಂಬಳ ಕೊಡಲಾಗುತ್ತದೆ.
ಇದನ್ನೂ ಓದಿ: Post Office Jobs: 8ನೇ ಕ್ಲಾಸ್ ಪಾಸಾಗಿದ್ರೆ ಪೋಸ್ಟ್ ಆಫೀಸ್ ಉದ್ಯೋಗ- ತಿಂಗಳಿಗೆ 63,000 ಸಂಬಳ
ಉದ್ಯೋಗದ ಸ್ಥಳ:
ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಚಿಕ್ಕಮಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ನಿರ್ದೇಶಕರ ಕಛೇರಿ
ಹಳೆಯ PWD ಕಟ್ಟಡ
ಆಜಾದ್ ಪಾರ್ಕ್ ಹತ್ತಿರ
ಚಿಕ್ಕಮಗಳೂರು-577101
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 23/03/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಏಪ್ರಿಲ್ 10, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ