CMFRI Recruitment 2023: ಕೇಂದ್ರ ಸಾಗರ ಮೀನುಗಾರಿಕೆ ಸಂಶೋಧನಾ ಸಂಸ್ಥೆ (Central Marine Fisheries Research Institute) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಯಂಗ್ ಪ್ರೊಫೆಶನಲ್(Young professional) ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 12, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ(Last Date). ಆಸಕ್ತರು ಇ-ಮೇಲ್ ಮಾಡುವ ಮೂಲಕ ಅಪ್ಲಿಕೇಶನ್ ಹಾಕಬೇಕು. ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗೆ ಕಾರವಾರದಲ್ಲಿ(Karwar) ಪೋಸ್ಟಿಂಗ್ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಕೇಂದ್ರ ಸಾಗರ ಮೀನುಗಾರಿಕೆ ಸಂಶೋಧನಾ ಸಂಸ್ಥೆ |
ಹುದ್ದೆ | ಯಂಗ್ ಪ್ರೊಫೆಶನಲ್ |
ಒಟ್ಟು ಹುದ್ದೆ | 1 |
ವಿದ್ಯಾರ್ಹತೆ | ಪದವಿ |
ವೇತನ | ಮಾಸಿಕ ₹ 25,000 |
ಉದ್ಯೋಗದ ಸ್ಥಳ | ಕಾರವಾರ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಫೆಬ್ರವರಿ 12, 2023 |
ಇದನ್ನೂ ಓದಿ: HLL Lifecare ಕಂಪನಿಯಲ್ಲಿ ಕೆಲಸ ಖಾಲಿ ಇದೆ- ಬೆಳಗಾವಿಯಲ್ಲಿ ಪೋಸ್ಟಿಂಗ್
ವಯೋಮಿತಿ:
ಕೇಂದ್ರ ಸಾಗರ ಮೀನುಗಾರಿಕೆ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 21 ವರ್ಷ ಮತ್ತು ಗರಿಷ್ಠ 45 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಕೇಂದ್ರ ಸಾಗರ ಮೀನುಗಾರಿಕೆ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗೆ ಮಾಸಿಕ 25,000 ರೂ. ಸಂಬಳ ಕೊಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಇದನ್ನೂ ಓದಿ: Job Alert: ರಾಯಚೂರಿನಲ್ಲಿದೆ 61 ಸಾವಿರ ಸಂಬಳದ ಉದ್ಯೋಗ- ಪದವೀಧರರು ಈಗಲೇ ಅರ್ಜಿ ಹಾಕಿ
ಉದ್ಯೋಗದ ಸ್ಥಳ
ಕಾರವಾರ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ sickrc2018@gmail.com ಗೆ ಫೆಬ್ರವರಿ 12ಕ್ಕೆ ಮುನ್ನ ಕಳುಹಿಸಬೇಕು.
ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ಆರಂಭ ದಿನಾಂಕ: 01/02/2023
ಇ-ಮೇಲ್ ಕಳುಹಿಸಲು ಕೊನೆಯ ದಿನ: ಫೆಬ್ರವರಿ 12, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ