Commercial Tax Department Karnataka Recruitment 2023: ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 477 ಕಮರ್ಷಿಯಲ್ ಟ್ಯಾಕ್ಸ್ ಆಫೀಸರ್, ಫಸ್ಟ್ ಡಿವಿಶನ್ ಅಸಿಸ್ಟೆಂಟ್ (FDA) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಹುದ್ದೆಯ ಮಾಹಿತಿ:
ವಾಣಿಜ್ಯ ತೆರಿಗೆಗಳ ಜಂಟಿ ಆಯುಕ್ತರು- 9
ವಾಣಿಜ್ಯ ತೆರಿಗೆಗಳ ಉಪ ಆಯುಕ್ತರು- 35
ವಾಣಿಜ್ಯ ತೆರಿಗೆಗಳ ಸಹಾಯಕ ಆಯುಕ್ತರು- 86
ವಾಣಿಜ್ಯ ತೆರಿಗೆ ಅಧಿಕಾರಿ- 97
ವಾಣಿಜ್ಯ ತೆರಿಗೆಗಳ ಇನ್ಸ್ಪೆಕ್ಟರ್- 150
ಪ್ರಥಮ ದರ್ಜೆ ಸಹಾಯಕ (FDA)- 100
ಇದನ್ನೂ ಓದಿ: Job Alert: ಮೇ 31ಕ್ಕೆ ಬೆಂಗಳೂರಿನಲ್ಲಿ ಉದ್ಯೋಗ ಸಂದರ್ಶನ- ಆಸಕ್ತರು ಪಾಲ್ಗೊಳ್ಳಿ, ತಿಂಗಳಿಗೆ 50,000 ಸಂಬಳ
ವೇತನ:
ವಾಣಿಜ್ಯ ತೆರಿಗೆಗಳ ಜಂಟಿ ಆಯುಕ್ತರು- ಮಾಸಿಕ ₹ 74,400-1,09,600
ವಾಣಿಜ್ಯ ತೆರಿಗೆಗಳ ಉಪ ಆಯುಕ್ತರು- ಮಾಸಿಕ ₹ 67,550-1,04,600
ವಾಣಿಜ್ಯ ತೆರಿಗೆಗಳ ಸಹಾಯಕ ಆಯುಕ್ತರು- ಮಾಸಿಕ ₹ 52,650-97,100
ವಾಣಿಜ್ಯ ತೆರಿಗೆ ಅಧಿಕಾರಿ- ಮಾಸಿಕ ₹ 43,100-83,900
ವಾಣಿಜ್ಯ ತೆರಿಗೆಗಳ ಇನ್ಸ್ಪೆಕ್ಟರ್- ಮಾಸಿಕ ₹ 33,450-62,600
ಪ್ರಥಮ ದರ್ಜೆ ಸಹಾಯಕ (FDA)- ಮಾಸಿಕ ₹ 27,650- 52,650
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ & ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಇದನ್ನೂ ಓದಿ: NIT ಕರ್ನಾಟಕದಲ್ಲಿ ಕೆಲಸ ಖಾಲಿ ಇದೆ- ಆಸಕ್ತರು ಇಂದೇ ಅರ್ಜಿ ಹಾಕಿ
ಈ ಮೇಲ್ಕಂಡ ಹುದ್ದೆಗಳಿಗೆ ಶೀಘ್ರದಲ್ಲೇ ನೋಟಿಫಿಕೇಶನ್ ಬಿಡುಗಡೆ ಮಾಡಲಾಗುತ್ತದೆ. ಬಳಿಕ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ