• ಹೋಂ
  • »
  • ನ್ಯೂಸ್
  • »
  • Jobs
  • »
  • JOBS: ಬೆಂಗಳೂರಿನ ಡಿಸಿ ಆಫೀಸ್​​ನಲ್ಲಿ ಲೋಡರ್ಸ್​, ಕ್ಲೀನರ್ಸ್​ ಹುದ್ದೆಗಳಿಗೆ ಅರ್ಜಿ ಹಾಕಿ- ನಾಳೆಯೇ ಲಾಸ್ಟ್​ ಡೇಟ್

JOBS: ಬೆಂಗಳೂರಿನ ಡಿಸಿ ಆಫೀಸ್​​ನಲ್ಲಿ ಲೋಡರ್ಸ್​, ಕ್ಲೀನರ್ಸ್​ ಹುದ್ದೆಗಳಿಗೆ ಅರ್ಜಿ ಹಾಕಿ- ನಾಳೆಯೇ ಲಾಸ್ಟ್​ ಡೇಟ್

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಇಲ್ಲಿರುವ ಹುದ್ದೆಗಳಿಗೆ ಯಾವುದೇ ವಿದ್ಯಾರ್ಹತೆ(Education Qualification) ಅನ್ವಯಿಸುವುದಿಲ್ಲ. ಕೇವಲ ಕನ್ನಡ ಮಾತನಾಡಲು ಬಂದರೆ ಸಾಕು, ಅಂತಹ ಅಭ್ಯರ್ಥಿಗಳು ಇಲ್ಲಿ ಅರ್ಜಿ ಹಾಕಬಹುದು.

  • News18 Kannada
  • 3-MIN READ
  • Last Updated :
  • Bangalore [Bangalore], India
  • Share this:

DC Office Bengaluru Urban Recruitment 2023: ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ(DC Office Bengaluru Urban) ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಹಾಕಲು ಮಾರ್ಚ್​ 15, 2023 ಅಂದರೆ ನಾಳೆ ಕೊನೆಯ ದಿನವಾಗಿದೆ. ಇಲ್ಲಿರುವ ಹುದ್ದೆಗಳಿಗೆ ಯಾವುದೇ ವಿದ್ಯಾರ್ಹತೆ(Education Qualification) ಅನ್ವಯಿಸುವುದಿಲ್ಲ. ಕೇವಲ ಕನ್ನಡ ಮಾತನಾಡಲು ಬಂದರೆ ಸಾಕು, ಅಂತಹ ಅಭ್ಯರ್ಥಿಗಳು ಇಲ್ಲಿ ಅರ್ಜಿ ಹಾಕಬಹುದು. ಒಟ್ಟು 105 ಲೋಡರ್ಸ್, ಕ್ಲೀನರ್ಸ್ ಹುದ್ದೆಗಳು ಖಾಲಿ ಇವೆ. ಆಸಕ್ತರು ಈ ಕೂಡಲೇ ಅರ್ಜಿ ಹಾಕಿ. ಅಭ್ಯರ್ಥಿಗಳು ಆಫ್​ಲೈನ್​/ ಪೋಸ್ಟ್​ ಮೂಲಕ ಅರ್ಜಿ ಹಾಕಬೇಕು.


ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಕಚೇರಿ
ಹುದ್ದೆಲೋಡರ್ಸ್, ಕ್ಲೀನರ್ಸ್
ಒಟ್ಟು ಹುದ್ದೆ105
ವಿದ್ಯಾರ್ಹತೆಕನ್ನಡ ಮಾತನಾಡಲು ಬರಬೇಕು
ವೇತನಮಾಸಿಕ 17,000-28,950 ರೂ.
ಉದ್ಯೋಗದ ಸ್ಥಳಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನಮಾರ್ಚ್​ 15, 2023 (ನಾಳೆ)

ಎಷ್ಟೆಷ್ಟು ಹುದ್ದೆಗಳಿವೆ?
ಲೋಡರ್ಸ್​- 83
ಕ್ಲೀನರ್ಸ್- 22


ವಿದ್ಯಾರ್ಹತೆ:
ಈ ಹುದ್ದೆಗಳಿಗೆ ವಿದ್ಯಾರ್ಹತೆ ಅನ್ವಯಿಸುವುದಿಲ್ಲ. ಆದರೆ ಅಭ್ಯರ್ಥಿಗಳು ಕನ್ನಡ ಮಾತನಾಡಲು ತಿಳಿದಿರಬೇಕು.



ಅನುಭವ:
ಆಯಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಲೋಡರ್ಸ್​/ ಕ್ಲೀನರ್ಸ್​ ಹುದ್ದೆಯಲ್ಲಿ ಹಾಲಿ ಕ್ಷೇಮಾಭಿವೃದ್ಧಿ/ ದಿನಗೂಲಿ/ ಗುತ್ತಿಗೆ/ ಸಮಾನ ಕೆಲಸಕ್ಕೆ ಸಮಾನ ವೇತನ/ ಹೊರಗುತ್ತಿಗೆ ಆಧಾರದಲ್ಲಿ ಕನಿಷ್ಠ 2 ವರ್ಷಕ್ಕಿಂತ ಕಡಿಮೆಯಿಲ್ಲದಂತೆ, ನಿರಂತರವಾಗಿ ಕೆಲಸ ನಿರ್ವಹಿಸಿರಬೇಕು. ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಕಾರ್ಯನಿರ್ವಹಿಸುತ್ತಿರುವ ಲೋಡರ್ಸ್​ & ಕ್ಲೀನರ್ಸ್​ ಈ ಹುದ್ದೆಗಳಿಗೆ ಅರ್ಜಿ ಹಾಕಬಹುದು.


ವಯೋಮಿತಿ:
ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 55 ವರ್ಷ ಮೀರಿರಬಾರದು.


ವೇತನ:
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 17,000-28,950 ರೂ. ವೇತನ ಕೊಡಲಾಗುತ್ತದೆ.


ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಮಾರ್ಚ್​ 15, 2023 ಸಂಜೆ 5.30 ಗಂಟೆಯೊಳಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.


ಯೋಜನಾ ನಿರ್ದೇಶಕರು
ಜಿಲ್ಲಾ ನಗರ ಅಭಿವೃದ್ಧಿ ಘಟಕ
ಜಿಲ್ಲಾಧಿಕಾರಿಗಳ ಕಚೇರಿ
4ನೇ ಮಹಡಿ
ಬೆಂಗಳೂರು ನಗರ ಜಿಲ್ಲೆ


ಹುದ್ದೆಗೆ ಸಂಬಂಧಿಸಿದ ಅಧಿಸೂಚನೆ ಇಲ್ಲಿದೆ:


ಅಧಿಸೂಚನೆ- ಬೆಂಗಳೂರು ನಗರ ಡಿಸಿ ಕಚೇರಿ


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 08/02/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್​ 15, 2023 (ನಾಳೆ)

Published by:Latha CG
First published: