DHFWS Belagavi Recruitment 2023: ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ, ಬೆಳಗಾವಿ(District Health & Family Welfare Society Belagavi) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 36 ಸ್ಪೆಷಲಿಸ್ಟ್ ಡಾಕ್ಟರ್, ಮೆಡಿಕಲ್ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾರ್ಚ್ 3, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಅಭ್ಯರ್ಥಿಗಳು ಆಫ್ಲೈನ್/ ಪೋಸ್ಟ್(Offline) ಮೂಲಕ ಅರ್ಜಿ ಹಾಕಬೇಕು. ಸ್ಥಳೀಯ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ, ಬೆಳಗಾವಿ |
ಹುದ್ದೆ | ಸ್ಪೆಷಲಿಸ್ಟ್ ಡಾಕ್ಟರ್, ಮೆಡಿಕಲ್ ಆಫೀಸರ್ |
ಒಟ್ಟು ಹುದ್ದೆ | 36 |
ವೇತನ | ಮಾಸಿಕ ₹ 50,000-₹ 1,10,000 |
ಉದ್ಯೋಗದ ಸ್ಥಳ | ಬೆಳಗಾವಿ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಮಾರ್ಚ್ 3, 2023 |
ಇದನ್ನೂ ಓದಿ: BMTC Recruitment 2023: ಬಿಎಂಟಿಸಿಯಲ್ಲಿ 636 ಹುದ್ದೆಗಳು ಖಾಲಿ, ಯಾವುದೇ ಎಕ್ಸಾಂ ಇಲ್ಲ- ಈಗಲೇ ಅಪ್ಲೈ ಮಾಡಿ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 22/02/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್ 3, 2023
ವೇತನ:
ಸ್ಪೆಷಲಿಸ್ಟ್ ಡಾಕ್ಟರ್- ಮಾಸಿಕ ₹ 1,10,000
ಮೆಡಿಕಲ್ ಆಫೀಸರ್- ಮಾಸಿಕ ₹ 50,000
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಹಾಕುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
NHM ವಿಭಾಗ
ಲಸಿಕಾ ಸಂಸ್ಥೆ ಆವರಣ
2ನೇ ರೈಲ್ವೆ ಗೇಟ್ ಹತ್ತಿರ
ಬೆಳಗಾವಿ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ