• Home
  • »
  • News
  • »
  • jobs
  • »
  • DHFWS ಬೆಂಗಳೂರಿನಲ್ಲಿ 45,000 ಸಂಬಳದ ಉದ್ಯೋಗ- ಜ.31 ಕ್ಕೆ ಸಂದರ್ಶನ

DHFWS ಬೆಂಗಳೂರಿನಲ್ಲಿ 45,000 ಸಂಬಳದ ಉದ್ಯೋಗ- ಜ.31 ಕ್ಕೆ ಸಂದರ್ಶನ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಆಸಕ್ತರು ಸಂದರ್ಶನದಲ್ಲಿ(Interview) ಪಾಲ್ಗೊಂಡು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

  • News18 Kannada
  • 5-MIN READ
  • Last Updated :
  • Bangalore [Bangalore], India
  • Share this:

DHFWS Bangalore Recruitment 2023: ಬೆಂಗಳೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ (District Health and Family Welfare Society Bangalore) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಜೂನಿಯರ್ ಲೀಗಲ್ ಅಡ್ವೈಸರ್(Junior Legal Advisor)​ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜನವರಿ 31, 2023 ರಂದು ಸಂದರ್ಶನ ನಡೆಯಲಿದೆ. ಆಸಕ್ತರು ಸಂದರ್ಶನದಲ್ಲಿ(Interview) ಪಾಲ್ಗೊಂಡು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಬೆಂಗಳೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ
ಹುದ್ದೆಜೂನಿಯರ್ ಲೀಗಲ್ ಅಡ್ವೈಸರ್
ಒಟ್ಟು ಹುದ್ದೆ1
ವಿದ್ಯಾರ್ಹತೆಎಲ್​ಎಲ್​ಬಿ
ವೇತನಮಾಸಿಕ ₹ 45,000
ಉದ್ಯೋಗದ ಸ್ಥಳಬೆಂಗಳೂರು
ಸಂದರ್ಶನ ನಡೆಯುವ ದಿನಜನವರಿ 31, 2023

ವಿದ್ಯಾರ್ಹತೆ:
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಯ/ಮಂಡಳಿಯಿಂದ ಕಡ್ಡಾಯವಾಗಿ ಎಲ್​ಎಲ್​ಬಿ(LLB) ಪೂರ್ಣಗೊಳಿಸಿರಬೇಕು.


ಇದನ್ನೂ ಓದಿ: Job Alert: ತಿಂಗಳಿಗೆ 20 ಲಕ್ಷ ಸಂಬಳ- ಜಲ ಅಭಿವೃದ್ದಿ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಹಾಕಿ


ವಯೋಮಿತಿ:
ಅಭ್ಯರ್ಥಿಗಳ ವಯಸ್ಸು ಗರಿಷ್ಠ 40 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ವೇತನ: ಮಾಸಿಕ ₹ 45,0000


ಆಯ್ಕೆ ಪ್ರಕ್ರಿಯೆ:
ಶೈಕ್ಷಣಿಕ ಅರ್ಹತೆ
ಅನುಭವ
ಕಂಪ್ಯೂಟರ್ & ಟೈಪಿಂಗ್ ಜ್ಞಾನ




ಸಂದರ್ಶನ ನಡೆಯುವ ಸ್ಥಳ:


ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ
ಆರೋಗ್ಯ ಸೌಧ
ಬೆಂಗಳೂರು - 23
6 ನೇ ಮಹಡಿ
ನಿರ್ದೇಶಕರ ಕಚೇರಿ ಸಭಾಂಗಣ


ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 20/01/2023
ಸಂದರ್ಶನ ನಡೆಯುವ ದಿನಾಂಕ: ಜನವರಿ 31, 2023

Published by:Latha CG
First published: