DHFWS Chitradurga Recruitment 2023: ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಸೊಸೈಟಿ ಚಿತ್ರದುರ್ಗ(District Health & Family Welfare Society Chitradurga) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 22 ಸ್ಟಾಫ್ ನರ್ಸ್(Staff Nurse) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದೇ ಫೆಬ್ರವರಿ 22, 2023, ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಅಭ್ಯರ್ಥಿಗಳು ಆಫ್ಲೈನ್/ ಪೋಸ್ಟ್(Offline) ಮೂಲಕ ಅರ್ಜಿ ಹಾಕಬೇಕು.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಸೊಸೈಟಿ ಚಿತ್ರದುರ್ಗ |
ಹುದ್ದೆ | ಸ್ಟಾಫ್ ನರ್ಸ್ |
ಒಟ್ಟು ಹುದ್ದೆ | 22 |
ವಿದ್ಯಾರ್ಹತೆ | ಜಿಎನ್ಎಂ ನರ್ಸಿಂಗ್ |
ವೇತನ | ಮಾಸಿಕ 13,225 ರೂ |
ಉದ್ಯೋಗದ ಸ್ಥಳ | ಚಿತ್ರದುರ್ಗ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಫೆಬ್ರವರಿ 22, 2023 |
ಇದನ್ನೂ ಓದಿ: HAL ಬೆಂಗಳೂರಿನಲ್ಲಿ ಕೆಲಸ ಖಾಲಿ ಇದೆ- ಆಸಕ್ತರು ಈಗಲೇ Apply ಮಾಡಿ
ಅನುಭವ:
ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಸೊಸೈಟಿ ಚಿತ್ರದುರ್ಗ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಸಂಬಂಧಿತ ಕ್ಷೇತ್ರದಲ್ಲಿ ಕಡ್ಡಾಯವಾಗಿ 2 ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕು.
ವಯೋಮಿತಿ:
ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಸೊಸೈಟಿ ಚಿತ್ರದುರ್ಗ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 45 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಸೊಸೈಟಿ ಚಿತ್ರದುರ್ಗ ನೇಮಕಾತಿ ಅಧಿಸೂಚನೆ ಪ್ರಕಾರ, ಸ್ಟಾಫ್ ನರ್ಸ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 13,225 ರೂ. ವೇತನ ಕೊಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಮೆರಿಟ್ ಲಿಸ್ಟ್
ಲಿಖಿತ ಪರೀಕ್ಷೆ
ಸಂದರ್ಶನ
ಇದನ್ನೂ ಓದಿ: Government Job: ಕೃಷಿ ವಿಮಾ ಕಂಪನಿಯಲ್ಲಿ ಡಿಗ್ರಿ ಆದವರಿಗೆ ಉದ್ಯೋಗ- ತಿಂಗಳಿಗೆ 60 ಸಾವಿರ ಸಂಬಳ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 03/02/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 22, 2023 (ನಾಳೆ)
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಜಿಲ್ಲಾ ಯೋಜನಾ ನಿರ್ವಹಣಾ ಘಟಕ (N.H.M)
ಜಿಲ್ಲಾ ಪ್ರಯೋಗಾಲಯ ಆವರಣ
ಜಿಲ್ಲಾ ಆಸ್ಪತ್ರೆ ಹಿಂಭಾಗ
ಚಿತ್ರದುರ್ಗ
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂಬರ್ 9449843104 ಗೆ ಕರೆ ಮಾಡಿ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ