DHFWS Haveri Recruitment 2023: ಹಾವೇರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ (District Health and Family Welfare Society Haveri) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 17 ಎಂಬಿಬಿಎಸ್ ಮೆಡಿಕಲ್ ಆಫೀಸರ್ಸ್(MBBS Medical Officers) ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 3, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ haveri.nic.in ಗೆ ಭೇಟಿ ನೀಡಬಹುದು.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂ8ಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಹಾವೇರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ |
ಹುದ್ದೆ | ಎಂಬಿಬಿಎಸ್ ಮೆಡಿಕಲ್ ಆಫೀಸರ್ಸ್ |
ಒಟ್ಟು ಹುದ್ದೆ | 17 |
ವಿದ್ಯಾರ್ಹತೆ | ಎಂಬಿಬಿಎಸ್ |
ವೇತನ | ಮಾಸಿಕ ₹ 60,000 |
ಉದ್ಯೋಗದ ಸ್ಥಳ | ಹಾವೇರಿ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಫೆಬ್ರವರಿ 3, 2023 |
ವಯೋಮಿತಿ:
ಅಭ್ಯರ್ಥಿಗಳ ವಯಸ್ಸು ಗರಿಷ್ಠ 50 ವರ್ಷ ಮೀರಿರಬಾರದು.
ನಿವೃತ್ತ ವೈದ್ಯರಿಗೆ- ಗರಿಷ್ಠ 65 ವರ್ಷ
ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಮಾಸಿಕ ₹ 60,000
ಉದ್ಯೋಗದ ಸ್ಥಳ: ಹಾವೇರಿ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು
ಜಿಲ್ಲಾಡಳಿತ ಭವನ
ಹಾವೇರಿ-581110
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: ಜನವರಿ 25, 2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 3, 2023
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂಬರ್ 9538440933 ಗೆ ಕರೆ ಮಾಡಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ