• Home
  • »
  • News
  • »
  • jobs
  • »
  • Job Alert: ತುಮಕೂರಿನಲ್ಲಿ ರಾಜ್ಯ ಸರ್ಕಾರದ ಹುದ್ದೆಗಳಿಗೆ ಅರ್ಜಿ ಆಹ್ವಾನ- ನಾಳೆಯೇ ಸಂದರ್ಶನ

Job Alert: ತುಮಕೂರಿನಲ್ಲಿ ರಾಜ್ಯ ಸರ್ಕಾರದ ಹುದ್ದೆಗಳಿಗೆ ಅರ್ಜಿ ಆಹ್ವಾನ- ನಾಳೆಯೇ ಸಂದರ್ಶನ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ತುಮಕೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ನೇಮಕಾತಿ ಅಧಿಸೂಚನೆ ಪ್ರಕಾರ, ಜನರಲ್ ಡ್ಯೂಟಿ ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 60,000 ಸಂಬಳ ಕೊಡಲಾಗುತ್ತದೆ.

  • News18 Kannada
  • 2-MIN READ
  • Last Updated :
  • Tumkur, India
  • Share this:

DHFWS Tumkur Recruitment 2023: ತುಮಕೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ (District Health and Family Welfare Society Tumkur) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 19 ಜನರಲ್ ಡ್ಯೂಟಿ ಮೆಡಿಕಲ್ ಆಫೀಸರ್(GDMO)​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜನವರಿ 14, 2023 ರಂದು ನೋಟಿಫಿಕೇಶನ್(Notification) ಬಿಡುಗಡೆಯಾಗಿದೆ. ಅರ್ಜಿ ಹಾಕಲು ಜನವರಿ 18, 2023 ಕೊನೆಯ ದಿನವಾಗಿದೆ. ಅಂದರೆ ನಾಳೆ ಸಂದರ್ಶನ(Interview) ನಡೆಯಲಿದ್ದು, ಅಭ್ಯರ್ಥಿಗಳು ಪಾಲ್ಗೊಳ್ಳಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತುಮಕೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆತುಮಕೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ
ಹುದ್ದೆಜನರಲ್ ಡ್ಯೂಟಿ ಮೆಡಿಕಲ್ ಆಫೀಸರ್
ಒಟ್ಟು ಹುದ್ದೆ19
ವೇತನಮಾಸಿಕ ₹ 60,000
ವಿದ್ಯಾರ್ಹತೆಎಂಬಿಬಿಎಸ್
ಉದ್ಯೋಗದ ಸ್ಥಳತುಮಕೂರು
ಅರ್ಜಿ ಸಲ್ಲಿಸಲು ಕೊನೆಯ ದಿನಜನವರಿ 18, 2023


ವಿದ್ಯಾರ್ಹತೆ:
ತುಮಕೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಬಿಬಿಎಸ್ (MBBS) ಪೂರ್ಣಗೊಳಿಸಿರಬೇಕು.


ವಯೋಮಿತಿ:
ಅಭ್ಯರ್ಥಿಗಳ ವಯಸ್ಸು ಎಷ್ಟಿರಬೇಕು ಎಂದು ನಿಗದಿಪಡಿಸಿಲ್ಲ. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ಇದನ್ನೂ ಓದಿ: UIDAI Jobs: ಆಧಾರ್ ನೇಮಕಾತಿ- 9 ಹುದ್ದೆಗಳಿಗೆ ಈಗಲೇ ಅರ್ಜಿ ಹಾಕಿ


ವೇತನ:
ತುಮಕೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ನೇಮಕಾತಿ ಅಧಿಸೂಚನೆ ಪ್ರಕಾರ, ಜನರಲ್ ಡ್ಯೂಟಿ ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 60,000 ಸಂಬಳ ಕೊಡಲಾಗುತ್ತದೆ.


ಉದ್ಯೋಗದ ಸ್ಥಳ:
ತುಮಕೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ನೇಮಕಾತಿ ಅಧಿಸೂಚನೆ ಪ್ರಕಾರ, ಜನರಲ್ ಡ್ಯೂಟಿ ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತುಮಕೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.


ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ


ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 14/01/2023
ಸಂದರ್ಶನ ನಡೆಯುವ ದಿನಾಂಕ: ಜನವರಿ 18, 2023


ಸಂದರ್ಶನ ನಡೆಯುವ ಸ್ಥಳ:


ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಆವರಣ
ತುಮಕೂರು
ಕರ್ನಾಟಕ




ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂಬರ್ 9449843064 ಗೆ ಕರೆ ಮಾಡಬಹುದು.

Published by:Latha CG
First published: