ESIC Karnataka Recruitment 2022: ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ(Employees State Insurance Corporation Karnataka) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 9 ಸೀನಿಯರ್ ರೆಸಿಡೆಂಟ್(Senior Resident) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ (Apply)ಹಾಕಬಹುದು. ಬೆಂಗಳೂರಿನಲ್ಲಿ (Bengaluru) ಕೆಲಸ ಹುಡುಕುತ್ತಿರುವ ಉದ್ಯೋಗಾಂಕ್ಷಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ. ಡಿಸೆಂಬರ್ 7, 2022 ರಂದು ಸಂದರ್ಶನ(Interview) ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ |
ಹುದ್ದೆ | ಸೀನಿಯರ್ ರೆಸಿಡೆಂಟ್ |
ಒಟ್ಟು ಹುದ್ದೆ | 9 |
ಉದ್ಯೋಗದ ಸ್ಥಳ | ಬೆಂಗಳೂರು |
ವೇತನ | ಮಾಸಿಕ ₹ 67,700 |
ಶೈಕ್ಷಣಿಕ ಅರ್ಹತೆ:
ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಡಿ, ಡಿಎನ್ಬಿ, ಎಂಎಸ್, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ಇದನ್ನೂ ಓದಿ: Government Job: M. Sc ಆಗಿದ್ರೆ ಬೆಂಗಳೂರಿನಲ್ಲಿದೆ ಸರ್ಕಾರಿ ಉದ್ಯೋಗ- ತಿಂಗಳಿಗೆ 30 ಸಾವಿರ ಸಂಬಳ
ವಯೋಮಿತಿ:
ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಡಿಸೆಂಬರ್ 7, 2022ಕ್ಕೆ ಗರಿಷ್ಠ 45 ವರ್ಷ ಮೀರಿರಬಾರದು.
ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ ಹೇಗೆ ನಡೆಯುತ್ತೆ?
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ಡಿಸೆಂಬರ್ 7, 2022ರಂದು ನಡೆಯಲಿರುವ ಸಂದರ್ಶನದಲ್ಲಿ ಪಾಲ್ಗೊಳ್ಳಬೇಕು.
ಅರ್ಜಿ ಇಲ್ಲಿದೆ 09-Senior-Resident-Posts-Application-Form-ESIC-Karnataka:
ಸಂದರ್ಶನ ನಡೆಯುವ ಸ್ಥಳ:
ಅಕಾಡೆಮಿಕ್ ಬ್ಲಾಕ್
ESIC PGIMSR
ರಾಜಾಜಿನಗರ
ಬೆಂಗಳೂರು- 560010
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ