• Home
  • »
  • News
  • »
  • jobs
  • »
  • ನೌಕರರ ರಾಜ್ಯ ವಿಮಾ ನಿಗಮದಲ್ಲಿ ಕೆಲಸ ಖಾಲಿ ಇದೆ- ಜ.13ಕ್ಕೆ Walk-in-Interview

ನೌಕರರ ರಾಜ್ಯ ವಿಮಾ ನಿಗಮದಲ್ಲಿ ಕೆಲಸ ಖಾಲಿ ಇದೆ- ಜ.13ಕ್ಕೆ Walk-in-Interview

ESIC

ESIC

ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜನವರಿ13, 2023ಕ್ಕೆ ಗರಿಷ್ಠ 45 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

  • News18 Kannada
  • Last Updated :
  • Karnataka, India
  • Share this:

ESIC Karnataka Recruitment 2023: ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ(Employees State Insurance Corporation Karnataka) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 3 ಸೀನಿಯರ್ ರೆಸಿಡೆಂಟ್(Senior Resident) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ (Apply)ಹಾಕಬಹುದು. ಬೆಂಗಳೂರಿನಲ್ಲಿ (Bengaluru) ಕೆಲಸ ಹುಡುಕುತ್ತಿರುವ ಉದ್ಯೋಗಾಂಕ್ಷಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ. ಇದೇ ಜನವರಿ 13, 2023 ರಂದು ಸಂದರ್ಶನ(Interview) ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಿ.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ
ಹುದ್ದೆಸೀನಿಯರ್ ರೆಸಿಡೆಂಟ್
ಒಟ್ಟು ಹುದ್ದೆ3
ವೇತನನಿಯಮಾನುಸಾರ
ಉದ್ಯೋಗದ ಸ್ಥಳಬೆಂಗಳೂರು


ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 07/01/2023
ಸಂದರ್ಶನ ನಡೆಯುವ ದಿನ: ಜನವರಿ 13, 2023


ಇದನ್ನೂ ಓದಿ: ಕರ್ನಾಟಕದಲ್ಲಿ 2,500 ಪ್ರೌಢಶಾಲಾ ಶಿಕ್ಷಕರ ನೇಮಕ- ಆಸಕ್ತರು ಈಗಲೇ ಅಪ್ಲೈ ಮಾಡಿ


ಶೈಕ್ಷಣಿಕ ಅರ್ಹತೆ:


ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಬಿಬಿಎಸ್, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.


ವಯೋಮಿತಿ:
ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜನವರಿ13, 2023ಕ್ಕೆ ಗರಿಷ್ಠ 45 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ಆಯ್ಕೆ ಪ್ರಕ್ರಿಯೆ ಹೇಗೆ ನಡೆಯುತ್ತೆ?
ಲಿಖಿತ ಪರೀಕ್ಷೆ
ಸಂದರ್ಶನ


ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ಜನವರಿ 13, 2023 ರಂದು ನಡೆಯಲಿರುವ ಸಂದರ್ಶನದಲ್ಲಿ ಪಾಲ್ಗೊಳ್ಳಬೇಕು.


ಇದನ್ನೂ ಓದಿ: KPSC Recruitment 2023: ಕೆಪಿಎಸ್​ಸಿ ನೇಮಕಾತಿಯ ಹುದ್ದೆಗಳಿಗೆ ಅರ್ಜಿ ಹಾಕಲು ಇವತ್ತೇ ಕೊನೆ ದಿನ


ಸಂದರ್ಶನ ನಡೆಯುವ ಸ್ಥಳ:


ESIC ಆಸ್ಪತ್ರೆ
ಪೀಣ್ಯ
55-1-11
ಪ್ಲಾಟ್ ನಂ-1
5ನೇ ಮುಖ್ಯ ರಸ್ತೆ
ಸರ್ವೆ ಎನ್-11
ಯಶವಂತಪುರ
ಬೆಂಗಳೂರು-22

Published by:Latha CG
First published: