HESCOM Recruitment 2023: ಹುಬ್ಬಳ್ಳಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(Hubli Electric Supply Company Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 200 ಅಪ್ರೆಂಟಿಸ್ ಟ್ರೇನಿಂಗ್(Apprentice Training) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಿ. ಉದ್ಯೋಗ ಹುಡುಕುತ್ತಿರುವ ಸ್ಥಳೀಯ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಇದೇ ಜನವರಿ 30, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಹಾಕಬೇಕು.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಹುಬ್ಬಳ್ಳಿ ವಿದ್ಯುತ್ ಸರಬರಾಜು ನಿಗಮ ನಿಯಮಿತ |
ಹುದ್ದೆ | ಅಪ್ರೆಂಟಿಸ್ |
ಒಟ್ಟು ಹುದ್ದೆ | 200 |
ವಿದ್ಯಾರ್ಹತೆ | ಬಿಇ/ ಬಿ.ಟೆಕ್, ಡಿಪ್ಲೋಮಾ |
ವೇತನ | ಮಾಸಿಕ 8000-9000 ರೂ. |
ಉದ್ಯೋಗದ ಸ್ಥಳ | ಹುಬ್ಬಳ್ಳಿ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಜನವರಿ 30, 2023 |
ಇದನ್ನೂ ಓದಿ: ರಾಜ್ಯ ಸರ್ಕಾರದಲ್ಲಿ ಪ್ರಾಜೆಕ್ಟ್ ಲೀಡ್ ಹುದ್ದೆ ಖಾಲಿ ಇದೆ- ಆಸಕ್ತರು ಈಗಲೇ ಅಪ್ಲೈ ಮಾಡಿ
ವಿದ್ಯಾರ್ಹತೆ:
ಗ್ರಾಜುಯೇಟ್ ಅಪ್ರೆಂಟಿಸ್- ಬಿಇ/ ಬಿ.ಟೆಕ್
ಡಿಪ್ಲೋಮಾ ಅಪ್ರೆಂಟಿಸ್- ಡಿಪ್ಲೋಮಾ
ವಯೋಮಿತಿ:
ನಿಗದಿಪಡಿಸಿಲ್ಲ, ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಶುಲ್ಕ ವಿನಾಯಿತಿ ನೀಡಲಾಗಿದೆ.
ವೇತನ:
ಗ್ರಾಜುಯೇಟ್ ಅಪ್ರೆಂಟಿಸ್- ಮಾಸಿಕ 9,000 ರೂ.
ಡಿಪ್ಲೋಮಾ ಅಪ್ರೆಂಟಿಸ್- ಮಾಸಿಕ ₹ 8000 ರೂ.
ಆಯ್ಕೆ ಪ್ರಕ್ರಿಯೆ:
ಮೆರಿಟ್ ಲಿಸ್ಟ್
ದಾಖಲಾತಿ ಪರಿಶೀಲನೆ
ಸಂದರ್ಶನ
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: ಜನವರಿ 16, 2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಜನವರಿ 30, 2023
“ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್”ನ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು NATS ಪೋರ್ಟಲ್ನಲ್ಲಿ ನೋಂದಾಯಿಸಲು ಕೊನೆಯ ದಿನಾಂಕ: 25-ಜನವರಿ-2023
BOATS, ಚೆನ್ನೈನಿಂದ ಶಾರ್ಟ್ಲಿಸ್ಟ್ ಮಾಡಿದ ಅಭ್ಯರ್ಥಿಗಳ ಪಟ್ಟಿಯ ಘೋಷಣೆಯ ದಿನಾಂಕ: 03-ಫೆಬ್ರವರಿ-2023
O/o ಎಕ್ಸಿಕ್ಯೂಟಿವ್ ಇಂಜಿನಿಯರ್ (Ele.), ITI, ಹೆಸ್ಕಾಂ, ಕಾರವಾರ ರಸ್ತೆ, ವಿದ್ಯುತ್ ನಗರ, ಹುಬ್ಬಳ್ಳಿಯಲ್ಲಿ ಶಾರ್ಟ್ಲಿಸ್ಟ್ ಮಾಡಲಾದ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆಗಾಗಿ ಕರೆಯುವ ದಿನಾಂಕ: 16-ಫೆಬ್ರವರಿ-2023
ಯಾವುದೇ ಸ್ಪಷ್ಟೀಕರಣಕ್ಕಾಗಿ, ಅಭ್ಯರ್ಥಿಗಳು ಇಮೇಲ್ ಮೂಲಕ ಸಂಪರ್ಕಿಸಬಹುದು: knplacement@boat-srp.com, ದೂರವಾಣಿ ಸಂಖ್ಯೆ: 044-22542235, ಇಮೇಲ್: gmadmhr.hescom@gmail.com, ದೂರವಾಣಿ ಸಂಖ್ಯೆ: 0836-2956611
ವೆಬ್ ಪೋರ್ಟಲ್ನಲ್ಲಿ ಅಭ್ಯರ್ಥಿಗಳ ದಾಖಲಾತಿಗೆ ಸಂಬಂಧಿಸಿದ ಪ್ರಶ್ನೆಗಳಿಗಾಗಿ, ದಯವಿಟ್ಟು ಇಮೇಲ್ ಮೂಲಕ ಸಂಪರ್ಕಿಸಿ: studentquery@boat-srp.com ಅಥವಾ knplacement@boat-srp.com
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ