HGML Recruitment 2023: ರಾಯಚೂರಿನ ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತ(Raichur Hatti Gold Mines Limited-HGML)ದಲ್ಲಿ ಹಲವು ಹುದ್ದೆಗಳು ಖಾಲಿ ಇದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ರಾಯಚೂರಿನ ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿ ಒಟ್ಟು 29 ಸೆಕ್ಯುರಿಟಿ ಆಫೀಸರ್, ಟ್ರೈನಿ ಹುದ್ದೆಗಳು ಖಾಲಿ ಇವೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರಾಯಚೂರಿನಲ್ಲಿ(Raichur) ಪೋಸ್ಟಿಂಗ್ ನೀಡಲಾಗುತ್ತದೆ. ಅರ್ಜಿ ಹಾಕಲು ಮಾರ್ಚ್ 14, 2023 ಅಂದರೆ ಇವತ್ತೇ ಕೊನೆಯ ದಿನವಾಗಿದೆ. ಆಸಕ್ತರು ಆಫ್ಲೈನ್/ ಪೋಸ್ಟ್ ಮೂಲಕ ಅರ್ಜಿ ಹಾಕಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ರಾಯಚೂರಿನ ಹಟ್ಟಿ ಚಿನ್ನದ ಗಣಿ ಕಂಪನಿ |
ಹುದ್ದೆ | ಸೆಕ್ಯುರಿಟಿ ಆಫೀಸರ್, ಟ್ರೈನಿ |
ಒಟ್ಟು ಹುದ್ದೆ | 29 |
ವಿದ್ಯಾರ್ಹತೆ | ಬಿ.ಕಾಂ, ಬಿಇ/ ಬಿ.ಟೆಕ್, ಎಂ.ಕಾಂ, ಎಂಎಸ್ಸಿ, ಎಂಬಿಎ, ಎಂಎ, |
ವೇತನ | ಮಾಸಿಕ ₹ 47,300- 83,200 ರೂ. |
ಉದ್ಯೋಗದ ಸ್ಥಳ | ರಾಯಚೂರು |
ಅರ್ಜಿ ಸಲ್ಲಿಸಲು ಕೊನೆಯ ದಿನ | ಮಾರ್ಚ್ 14, 2023 (ಇಂದು) |
ವಿದ್ಯಾರ್ಹತೆ:
ರಾಯಚೂರಿನ ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿ.ಕಾಂ, ಬಿಇ/ ಬಿ.ಟೆಕ್, ಎಂ.ಕಾಂ, ಎಂಎಸ್ಸಿ, ಎಂಬಿಎ, ಎಂಎ, ಸ್ನಾತಕೋತ್ತರ ಪದವಿ/ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.
ವೇತನ:
ಸೆಕ್ಯುರಿಟಿ ಆಫೀಸರ್- ಮಾಸಿಕ ₹ 47,300- 83,200 ರೂ.
ಉಳಿದ ಹುದ್ದೆಗಳಿಗೆ- ಮಾಸಿಕ ₹ 45,000 ರೂ.
ಇದನ್ನೂ ಓದಿ: Banking Jobs: ಬ್ಯಾಂಕ್ ಆಫ್ ಬರೋಡಾದಲ್ಲಿ 5 ಲಕ್ಷ ಸಂಬಳದ ಉದ್ಯೋಗ- ಅಪ್ಲೈ ಮಾಡಲು ಇವತ್ತೇ ಕೊನೆ ದಿನ
ವಯೋಮಿತಿ:
ರಾಯಚೂರಿನ ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು. ಅಭ್ಯರ್ಥಿಗಳಿಗೆ ಮೀಸಲಾತಿ ಅನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಅರ್ಜಿ ಶುಲ್ಕ:
SC/ST/ ಪ್ರವರ್ಗ-1/ PH & ಮಾಜಿ ಸೈನಿಕ ಅಭ್ಯರ್ಥಿಗಳು- 300 ರೂ.
ಉಳಿದ ಎಲ್ಲಾ ಅಭ್ಯರ್ಥಿಗಳು- 500 ರೂ.
ಪಾವತಿಸುವ ಬಗೆ- ಡಿಮ್ಯಾಂಡ್ ಡ್ರಾಫ್ಟ್
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಕಾರ್ಯನಿರ್ವಾಹಕ ನಿರ್ದೇಶಕರು
ಹಟ್ಟಿ ಗೋಲ್ಡ್ ಮೈನ್ಸ್ ಕಂ. ಲಿಮಿಟೆಡ್
PO HUTTI-584 115
ರಾಯಚೂರು ಜಿಲ್ಲೆ
ಕರ್ನಾಟಕ ರಾಜ್ಯ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 13/02/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್ 14, 2023 (ಇಂದು)
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ