IIIT Raichur Recruitment 2023: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಇನ್ಫರ್ಮೇಶನ್ ಟೆಕ್ನಾಲಜಿ(Indian Institute of Information Technology) ರಾಯಚೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಅಸಿಸ್ಟೆಂಟ್ ರಿಜಿಸ್ಟ್ರಾರ್(Assistant Registrar) ಹುದ್ದೆ ಖಾಲಿ ಇದ್ದು, ಆಸಕ್ತರು ಈಗಲೇ ಅರ್ಜಿ ಸಲ್ಲಿಸಿ. ಫೆಬ್ರವರಿ 27,2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಇನ್ಫರ್ಮೇಶನ್ ಟೆಕ್ನಾಲಜಿ |
ಹುದ್ದೆ | ಅಸಿಸ್ಟೆಂಟ್ ರಿಜಿಸ್ಟ್ರಾರ್ |
ಒಟ್ಟು ಹುದ್ದೆ | 1 |
ವಿದ್ಯಾರ್ಹತೆ | ಸ್ನಾತಕೋತ್ತರ ಪದವಿ |
ವೇತನ | ಮಾಸಿಕ ₹ 56,100-1,77,500 |
ಉದ್ಯೋಗದ ಸ್ಥಳ | ರಾಯಚೂರು |
ಅರ್ಜಿ ಸಲ್ಲಿಸಲು ಕೊನೆಯ ದಿನ | ಫೆಬ್ರವರಿ 27,2023 |
ಇದನ್ನೂ ಓದಿ: ISRO Recruitment: 100 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಇಸ್ರೋ
ವಯೋಮಿತಿ:
ಅಭ್ಯರ್ಥಿಗಳ ವಯಸ್ಸು ಫೆಬ್ರವರಿ 27, 2023ಕ್ಕೆ ಗರಿಷ್ಠ 45 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಅಸಿಸ್ಟೆಂಟ್ ರಿಜಿಸ್ಟ್ರಾರ್ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗೆ ಮಾಸಿಕ ₹ 56,100-1,77,500 ರೂ. ವೇತನ ಕೊಡಲಾಗುತ್ತದೆ.
ಅರ್ಜಿ ಶುಲ್ಕ:
SC/ST/PWD/ EWS & ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇಲ್ಲ.
ಉಳಿದ ಎಲ್ಲಾ ಅಭ್ಯರ್ಥಿಗಳು-500 ರೂ. ಅರ್ಜಿ ಶುಲ್ಕ ಕಟ್ಟಬೇಕು.
ಪಾವತಿಸುವ ಬಗೆ- ಆನ್ಲೈನ್
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸ್ಕಿಲ್ ಟೆಸ್ಟ್
ಸಂದರ್ಶನ
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 21/01/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 27, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ