KIOCL Recruitment 2022 : ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್(Kudremukh Iron Ore Company Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಕನ್ಸಲ್ಟೆಂಟ್(Consultant) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಕೂಡಲೇ ಅರ್ಜಿ ಹಾಕಿ. ಜನವರಿ 12, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ(Last Date)ವಾಗಿದೆ. ಆಸಕ್ತರು ಆಫ್ಲೈನ್(Offline) ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ |
ಹುದ್ದೆ | ಕನ್ಸಲ್ಟೆಂಟ್ |
ಒಟ್ಟು ಹುದ್ದೆ | 2 |
ವೇತನ | ಮಾಸಿಕ ₹ 60,000 |
ಉದ್ಯೋಗದ ಸ್ಥಳ | ಬೆಂಗಳೂರು |
ಇದನ್ನೂ ಓದಿ: ISRO ನೇಮಕಾತಿ- 526 ಹುದ್ದೆಗಳಿಗೆ ಅರ್ಜಿ ಆಹ್ವಾನ, ಪದವೀಧರರು ಅಪ್ಲೈ ಮಾಡಿ
ವಯೋಮಿತಿ:
ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಡಿಸೆಂಬರ್ 31, 2022ಕ್ಕೆ ಗರಿಷ್ಠ 62 ವರ್ಷ ಮೀರಿರಬಾರದು. ಮೀಸಲಾತಿಗೆ ಅನುಗುಣವಾಗಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಜನರಲ್ ಮ್ಯಾನೇಜರ್ (ಎಚ್ಆರ್)
ಮಾನವ ಸಂಪನ್ಮೂಲ ಇಲಾಖೆ
2ನೇ ಬ್ಲಾಕ್
ಸರ್ಜಾಪುರ ರಸ್ತೆ
ಕೋರಮಂಗಲ
ಬೆಂಗಳೂರು-560034
ಇದನ್ನೂ ಓದಿ: ಅರಣ್ಯ ಸಂಶೋಧನಾ ಸಂಸ್ಥೆಯಲ್ಲಿ 10th, PU ಪಾಸಾದವರಿಗೆ ಬಂಪರ್ ಉದ್ಯೋಗ- ಈಗಲೇ Apply ಮಾಡಿ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 02/01/2023
ಅರ್ಜಿ ಹಾಕಲು ಕೊನೆ ದಿನ: 12/01/2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ