Vijayapura Zilla Panchayat Recruitment 2023: ವಿಜಯಪುರ ಜಿಲ್ಲಾ ಪಂಚಾಯತ್ನಲ್ಲಿ ಖಾಲಿ ಇರುವ 26 ಟೆಕ್ನಿಕಲ್ ಅಸಿಸ್ಟೆಂಟ್(Technical Assistant), ತಾಲೂಕ್ ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್(Taluk Administrative Assistant) ಹುದ್ದೆಗಳಿಗೆ ಅರ್ಜಿ ಹಾಕಲು ಇವತ್ತೇ ಕೊನೆಯ ದಿನವಾಗಿದೆ(Last Date). ಆಸಕ್ತರು ಈ ಕೂಡಲೇ ಅಪ್ಲೈ ಮಾಡಿ. ಡಿಸೆಂಬರ್ 22 ರಿಂದಲೇ ಅರ್ಜಿ ಪ್ರಕ್ರಿಯೆ ಆರಂಭವಾಗಿತ್ತು. ಇವತ್ತು ಸಂಜೆ 5 ಗಂಟೆಯೊಳಗೆ ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಹಾಕಿ.
ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ವಿಜಯಪುರ ಜಿಲ್ಲಾ ಪಂಚಾಯತ್ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ. ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಸ್ವೀಕರಿಸಿ ಮೆರಿಟ್ ಲಿಸ್ಟ್ನ್ನು ಪ್ರಕಟಿಸಲಾಗುತ್ತದೆ.
ಅರ್ಜಿ ಸಲ್ಲಿಸುವ ಲಿಂಕ್ - vijayapura.nic.in
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು 9972076343, 08472-2301153 ಗೆ ಕರೆ ಮಾಡಿ.
ನೇಮಕಾತಿಯ ತಾತ್ಕಾಲಿಕ ಪಟ್ಟಿಯನ್ನು ಅಧಿಕೃತ ವೆಬ್ಸೈಟ್ vijayapura.nic.in ನಲ್ಲಿ ಪ್ರಕಟಿಸಲಾಗುತ್ತದೆ.
ಸಂಸ್ಥೆ | ವಿಜಯಪುರ ಜಿಲ್ಲಾ ಪಂಚಾಯತ್ |
ಹುದ್ದೆ | ಟೆಕ್ನಿಕಲ್ ಅಸಿಸ್ಟೆಂಟ್, ತಾಲೂಕ್ ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ |
ಒಟ್ಟು ಹುದ್ದೆ | 26 |
ವೇತನ | ನಿಯಮಾನುಸಾರ |
ಉದ್ಯೋಗದ ಸ್ಥಳ | ವಿಜಯಪುರ |
ಹುದ್ದೆಯ ಕುರಿತಾದ ಮಾಹಿತಿ ಇಲ್ಲಿದೆ:
ತಾಲೂಕ್ ಟೆಕ್ನಿಕಲ್ ಕೋ-ಆರ್ಡಿನೇಟರ್- 1
ಟೆಕ್ನಿಕಲ್ ಅಸಿಸ್ಟೆಂಟ್ (ಫಾರೆಸ್ಟ್)- 10
ಟೆಕ್ನಿಕಲ್ ಅಸಿಸ್ಟೆಂಟ್ (ಅಗ್ರಿಕಲ್ಚರ್)-2
ಟೆಕ್ನಿಕಲ್ ಅಸಿಸ್ಟೆಂಟ್ (ಹಾರ್ಟಿಕಲ್ಚರ್)-8
ಟೆಕ್ನಿಕಲ್ ಅಸಿಸ್ಟೆಂಟ್ (ಸಿವಿಲ್)- 1
ತಾಲೂಕ್ MIS ಕೋ-ಆರ್ಡಿನೇಟರ್-1
ತಾಲೂಕ್ IEC ಕೋ-ಆರ್ಡಿನೇಟರ್-1
ತಾಲೂಕ್ ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್-2
ಶೈಕ್ಷಣಿಕ ಅರ್ಹತೆ ಏನಿರಬೇಕು?
ತಾಲೂಕ್ ಟೆಕ್ನಿಕಲ್ ಕೋ-ಆರ್ಡಿನೇಟರ್- ಸಿವಿಲ್ ಎಂಜಿನಿಯರಿಂಗ್ನಲ್ಲಿ ಬಿಇ/ಬಿ.ಟೆಕ್
ಟೆಕ್ನಿಕಲ್ ಅಸಿಸ್ಟೆಂಟ್ (ಫಾರೆಸ್ಟ್)- ಬಿಎಸ್ಸಿ, ಫಾರೆಸ್ಟ್ನಲ್ಲಿ ಎಂಎಸ್ಸಿ
ಟೆಕ್ನಿಕಲ್ ಅಸಿಸ್ಟೆಂಟ್ (ಅಗ್ರಿಕಲ್ಚರ್)-ಬಿಎಸ್ಸಿ, ಅಗ್ರಿಕಲ್ಚರ್ನಲ್ಲಿ ಎಂಎಸ್ಸಿ
ಟೆಕ್ನಿಕಲ್ ಅಸಿಸ್ಟೆಂಟ್ (ಹಾರ್ಟಿಕಲ್ಚರ್)-ಬಿಎಸ್ಸಿ, ಹಾರ್ಟಿಕಲ್ಚರ್ನಲ್ಲಿ ಎಂಎಸ್ಸಿ
ಟೆಕ್ನಿಕಲ್ ಅಸಿಸ್ಟೆಂಟ್ (ಸಿವಿಲ್)- ಡಿಪ್ಲೋಮಾ, ಸಿವಿಲ್ನಲ್ಲಿ ಬಿಇ
ತಾಲೂಕ್ MIS ಕೋ-ಆರ್ಡಿನೇಟರ್-ಡಿಪ್ಲೋಮಾ, ಬಿಸಿಎ, ಕಂಪ್ಯೂಟರ್ ಸೈನ್ಸ್ನಲ್ಲಿ ಬಿಎಸ್ಸಿ
ತಾಲೂಕ್ IEC ಕೋ-ಆರ್ಡಿನೇಟರ್-ಸೋಷಿಯಲ್ ವರ್ಕ್ನಲ್ಲಿ ಸ್ನಾತಕೋತ್ತರ ಪದವಿ, MSW, ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಎಂಎ
ತಾಲೂಕ್ ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್-ಬಿಕಾಂ
ಅನುಭವ ಎಷ್ಟು ವರ್ಷ?
ತಾಲೂಕ್ ಟೆಕ್ನಿಕಲ್ ಕೋ-ಆರ್ಡಿನೇಟರ್-ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ 2 ವರ್ಷ ಕೆಲಸ ಮಾಡಿದ ಅನುಭವ
ತಾಲೂಕ್ IEC ಕೋ-ಆರ್ಡಿನೇಟರ್- ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ 2-3 ವರ್ಷ ಕೆಲಸ ಮಾಡಿದ ಅನುಭವ
ಇದನ್ನೂ ಓದಿ: Banking Jobs: ಕರ್ನಾಟಕ ಬ್ಯಾಂಕ್ನಲ್ಲಿ ಈ ಹುದ್ದೆಗೆ ಅರ್ಜಿ ಹಾಕಿ- 84,000 ಸಂಬಳ ಸಿಗುತ್ತೆ
ಅಭ್ಯರ್ಥಿಗಳ ವಯಸ್ಸು ಎಷ್ಟಿರಬೇಕು?
ವಿಜಯಪುರ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 21 ವರ್ಷ ಮತ್ತು ಗರಿಷ್ಠ 40 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ