Hubballi Dharwad Smart City Recruitment 2023: ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ ಸಿಟಿ ಲಿಮಿಡೆಟ್(Hubballi Dharwad Smart City LImited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ(Apply) ಹಾಕಿ. ಜನವರಿ 10, 2023ಕ್ಕೆ ಮುನ್ನ ಆಸಕ್ತ ಅಭ್ಯರ್ಥಿಗಳು ತಮ್ಮ ರೆಸ್ಯೂಮ್ನ್ನು(Resume) ಇ-ಮೇಲ್ ಮಾಡಿ.
ಅನೇಕ ಜನರಲ್ ಮ್ಯಾನೇಜರ್(ಟೆಕ್ನಿಕಲ್) ಹುದ್ದೆಗಳ ಭರ್ತಿಗೆ ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ ಸಿಟಿ ಲಿಮಿಡೆಟ್ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಹುಬ್ಬಳ್ಳಿ, ಧಾರವಾಡದಲ್ಲಿ ಕೆಲಸ ಮಾಡುವ ಆಸಕ್ತಿ ಇರುವ ಸ್ಥಳೀಯ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಿ. ಕೊನೆಯ ದಿನಾಂಕ ಮುಗಿದ ಮೇಲೆ ಬಂದ ಅಪ್ಲಿಕೇಶನ್ಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ ಸಿಟಿ ಲಿಮಿಡೆಟ್ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿದೆ.
ಇದನ್ನೂ ಓದಿ: Job Alert: ಕೊಚ್ಚಿನ್ ಶಿಪ್ಯಾರ್ಡ್ ನೇಮಕಾತಿ- ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಹಾಕಿ
ಸಂಸ್ಥೆ | ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ ಸಿಟಿ ಲಿಮಿಡೆಟ್ |
ಹುದ್ದೆ | ಜನರಲ್ ಮ್ಯಾನೇಜರ್(ಟೆಕ್ನಿಕಲ್) |
ವೇತನ | ನಿಯಮಾನುಸಾರ |
ಅರ್ಜಿ ಸಲ್ಲಿಸುವ ಇ-ಮೇಲ್ | md.hdscl@gmail.com |
ಅರ್ಜಿ ಹಾಕಲು ಕೊನೆ ದಿನ | ಜನವರಿ 10, 2023 |
ಅರ್ಜಿ ಸಲ್ಲಿಕೆ ಬಗೆ | ಆನ್ಲೈನ್ |
ಇದನ್ನೂ ಓದಿ: KPSC Recruitment 2023: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ KPSC, ಜನವರಿ 11ರೊಳಗೆ ಅರ್ಜಿ ಸಲ್ಲಿಸಿ
ಅಭ್ಯರ್ಥಿಗಳಿಗೆ ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ ಸಿಟಿ ಲಿಮಿಡೆಟ್ ನಿಯಮಾನುಸಾರ ಸಂಬಳ ನಿಗದಿ ಮಾಡಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ದೂರವಾಣಿ ಸಂಖ್ಯೆ 8310213636 ಗೆ ಕರೆ ಮಾಡಬಹುದು. ಡಿಸೆಂಬರ್ 31, 2022 ರಿಂದಲೇ ಅರ್ಜಿ ಪ್ರಕ್ರಿಯೆ ಆರಂಭವಾಗಿದೆ. ಅಭ್ಯರ್ಥಿಗಳು ತಡಮಾಡದೇ ಈ ಕೂಡಲೇ ಅರ್ಜಿ ಹಾಕಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಹುಬ್ಬಳ್ಳಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ