KARBWWB Recruitment 2023: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ (Karnataka Building and other Construction Workers Welfare Board) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 186 ಸೆಕೆಂಡ್ ಡಿವಿಶನ್ ಅಸಿಸ್ಟೆಂಟ್, ಫೀಲ್ಡ್ ಇನ್ಸ್ಪೆಕ್ಟರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮೇ 17, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಅಭ್ಯರ್ಥಿಗಳು ಆನ್ಲೈನ್ (Online) ಮೂಲಕ ಅರ್ಜಿ ಸಲ್ಲಿಸಬೇಕು. ಕರ್ನಾಟಕ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಇದನ್ನೂ ಓದಿ: HSBC is Hiring: ಸೀನಿಯರ್ ಸಾಫ್ಟ್ವೇರ್ ಎಂಜಿನಿಯರ್ ಹುದ್ದೆಗೆ ಅರ್ಜಿ ಹಾಕಿ- 9 ಲಕ್ಷ ಸಂಬಳ
ಸಂಸ್ಥೆ | ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ |
ಹುದ್ದೆ | ಸೆಕೆಂಡ್ ಡಿವಿಶನ್ ಅಸಿಸ್ಟೆಂಟ್, ಫೀಲ್ಡ್ ಇನ್ಸ್ಪೆಕ್ಟರ್ |
ಒಟ್ಟು ಹುದ್ದೆ | 186 |
ವೇತನ | ಮಾಸಿಕ ₹ 37,900-70,850 |
ಉದ್ಯೋಗದ ಸ್ಥಳ | ಕರ್ನಾಟಕ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಮೇ 17, 2023 |
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ವಿದ್ಯಾರ್ಹತೆ, ವಯೋಮಿತಿ, ವಯೋಮಿತಿ ಸಡಿಲಿಕೆ, ಅರ್ಜಿ ಶುಲ್ಕ ಇತ್ಯಾದಿ ವಿವರಗಳಿಗಾಗಿ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 17/04/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 17, 2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನ: ಮೇ 20, 2023
ಇದನ್ನೂ ಓದಿ: CFTRI Recruitment 2023: ಮೈಸೂರಿನಲ್ಲಿದೆ ಸರ್ಕಾರಿ ನೌಕರಿ- ಅಪ್ಲೈ ಮಾಡಲು ನಾಳೆಯೇ ಲಾಸ್ಟ್ ಡೇಟ್
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ