ಬೆಂಗಳೂರು(ಫೆ. 17): ಕರ್ನಾಟಕ ಬಜೆಟ್ 2023(Karnataka Budget 2023) ರಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಹಲವು ಮಹತ್ತರ ಘೋಷಣೆಗಳನ್ನು ಘೋಷಿಸಿದ್ದಾರೆ. ಶಿಕ್ಷಣ, ಕೃಷಿ, ನೀರಾವರಿ, ಉದ್ಯೋಗ ಹೀಗೆ ಎಲ್ಲಾ ಕ್ಷೇತ್ರಗಳಿಗೂ ವಿಶೇಷ ಅನುದಾನ ಮೀಸಲಿಟ್ಟಿದ್ದಾರೆ. ಅದೇ ರೀತಿ ಸಿಎಂ ನಿರುದ್ಯೋಗಿಗಳಿಗೂ ಗುಡ್ನ್ಯೂಸ್ ನೀಡಿದ್ದಾರೆ. ಈ ಬಾರಿಯ ಬಜೆಟ್ನಲ್ಲಿ ಒಂದು ಮಹತ್ವದ ಘೋಷಣೆ ಮಾಡಿದ್ದು, ಉದ್ಯೋಗಾಂಕ್ಷಿಗಳಿಗೆ(Job Seekers) ಖುಷಿ ನೀಡಿದೆ. ಶೀಘ್ರದಲ್ಲೇ ಒಂದು ಲಕ್ಷ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ(CM Basavaraj Bommai) ಅವರು ಬಜೆಟ್ನಲ್ಲಿ ಘೋಷಿಸಿದ್ದಾರೆ.
1 ಲಕ್ಷ ಹುದ್ದೆಗಳ ಭರ್ತಿ
ಹೌದು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಒಂದು ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಇದು ಆ ಭಾಗದ ನಿರುದ್ಯೋಗಿಗಳಿಗೆ ಖುಷಿ ಕೊಡುವ ವಿಚಾರವಾಗಿದೆ. 1 ಲಕ್ಷ ಹುದ್ದೆಗಳ ಆಯ್ಕೆ ಪ್ರಕ್ರಿಯೆಯನ್ನು 2023-24ನೇ ಸಾಲಿನಲ್ಲಿ ಪೂರ್ಣಗೊಳಿಸಲರು ನೇಮಕಾತಿ ಆದೇಶ ನೀಡಲಾಗುತ್ತದೆ ಎಂದು ಸಿಎಂ ಬಜೆಟ್ನಲ್ಲಿ ಹೇಳಿದ್ದಾರೆ.
ಇದನ್ನೂ ಓದಿ: Karnataka Budget 2023: ಬಜೆಟ್ನಲ್ಲಿ ಹೊಸ-ಹೊಸ ಯೋಜನೆಗಳ ಘೋಷಣೆ- ಇಲ್ಲಿದೆ ಸಂಪೂರ್ಣ ವಿವರ
ಈ ಹಿಂದೆ ಕಾಂಗ್ರೆಸ್ ಸರ್ಕಾರವು ಈ ಹುದ್ದೆಗಳ ಭರ್ತಿ ಮಾಡುವುದಾಗಿ ಭರವಸೆ ನೀಡಿತ್ತು. ತಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಕಾಂಗ್ರೆಸ್ ಸರ್ಕಾರ ಹೇಳಿತ್ತು. ಈಗ ಕಾಂಗ್ರೆಸ್ ಸರ್ಕಾರದ ಭರವಸೆಗೆ ಬಿಜೆಪಿ ಸರ್ಕಾರ ತಿರುಗೇಟು ನೀಡಿದೆ. ಈ ವರ್ಷದಲ್ಲೇ ಖಾಲಿ ಇರುವ 1 ಲಕ್ಷ ಹುದ್ದೆಗಳ ಭರ್ತಿಯನ್ನು ಮಾಡಲಾಗುವುದು ಎಂದು ಹೇಳಿದೆ.
ನಿರೋದ್ಯೊಗಿಗಳಿಗೆ ಗುಡ್ನ್ಯೂಸ್:
ಇನ್ನು, ಇದೇ ವೇಳೆ ಬಜೆಟ್ನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ನಿರುದ್ಯೋಗಿಗಳಿಗೆ ಮತ್ತೊಂದು ಗುಡ್ನ್ಯೂಸ್ ನೀಡಿದ್ದಾರೆ. ಪದವಿ ಶಿಕ್ಷಣವನ್ನು ಮುಗಿಸಿ, ಮೂರು ವರ್ಷಗಳ ನಂತರವೂ ಯಾವುದೇ ಉದ್ಯೋಗ ಸಿಗದೆ ಇದ್ದರೆ ಅಂತಹ ಯುವಕರಿಗೆ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹ ಧನ ನೀಡಲಾಗುತ್ತದೆ ಎಂದು ಸಿಎಂ ಹೇಳಿದ್ದಾರೆ. 'ಯುವಸ್ನೇಹಿ' ಎಂಬ ಹೊಸ ಯೋಜನೆಯಡಿ ತಲಾ 2,000 ರೂಪಾಯಿ ನೀಡಲಾಗುತ್ತದೆ. ಒಂದು ಬಾರಿಯ ಆರ್ಥಿಕ ನೆರವು ಕೊಡಲಾಗುತ್ತದೆ ಎಂದು ಹೇಳಿದ್ದಾರೆ.
ಬಜೆಟ್ ಕುರಿತದ ಲೈವ್ ಅಪ್ಡೇಟ್ಸ್ಗಾಗಿ ಇಲ್ಲಿ ಕ್ಲಿಕ್ ಮಾಡಿ.
ಪ್ರೋತ್ರಾಹ ಧನ ಹೆಚ್ಚಳ:
ಉನ್ನತ ಶಿಕ್ಷಣ ಪಡೆಯುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಬಜೆಟ್ನಲ್ಲಿ ಸಿಹಿ ಸುದ್ದಿ ನೀಡಲಾಗಿದೆ. IIT, IIM, IISc, NIT ಸಂಸ್ಥೆಗಳಲ್ಲಿ ಪ್ರವೇಶ ಪಡೆಯಲು ಪ್ರೊತ್ಸಾಹ ಧನವನ್ನು 2 ರಿಂದ 4 ಲಕ್ಷಕ್ಕೆ ಏರಿಕೆ ಮಾಡಲಾಗಿದೆ.
ಗೌರವಧನ ಹೆಚ್ಚಳ:
ಆಶಾ ಕಾರ್ಯಕರ್ತರೆಯರು, ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕರು, ಬಿಸಿಯೂಟ ತಯಾರಕರು, ಅತಿಥಿ ಉಪನ್ಯಾಸಕರು, ಅತಿಥಿ ಶಿಕ್ಷಕರು, ಗ್ರಾಮಸಹಾಯಕರು, ಗ್ರಾಮ ಪಂಚಾಯ್ತಿ ಗ್ರಂಥಾಲಯ ಮೇಲ್ವಿಚಾರಕರು, ಗ್ರಾಮ ಪಂಚಾಯ್ತಿ ಸದಸ್ಯರ ಗೌರವ ಧನ ಹೆಚ್ಚಳ ಮಾಡಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ