KEA Recruitment 2023: ರಾಜ್ಯದಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಪ್ರಾಂಶುಪಾಲರು ಗ್ರೇಡ್-1 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಫೆಬ್ರವರಿ 6, 2023 ನಾಳೆಯೇ ಕೊನೆಯ ದಿನವಾಗಿದೆ. ಕರ್ನಾಟಕ ಸರ್ಕಾರದ ಉದ್ಯೋಗ(Government Job) ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು(Karnataka Examinations Authority) ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ.
ಒಟ್ಟು 310 ಪ್ರಿನ್ಸಿಪಾಲ್ ಗ್ರೇಡ್-I ಹುದ್ದೆಗಳು ಖಾಲಿ ಇದ್ದು, ಆಸಕ್ತರು ತಡಮಾಡದೇ ಈ ಕೂಡಲೇ ಅರ್ಜಿ ಹಾಕಿ. ಫೆಬ್ರವರಿ 6, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್(Online) ಮೂಲಕ ಅರ್ಜಿ ಹಾಕಬೇಕು. ಅರ್ಹ ಅಭ್ಯರ್ಥಿಗಳು ಪ್ರಾಧಿಕಾರ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗೆ(Competitive Exam) ಹಾಜರಾಗಬೇಕು.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಕರ್ನಾಟಕ ಪರೀಕ್ಷಾ ಪ್ರಾಧಿಕಾರ |
ಹುದ್ದೆ | ಪ್ರಾಂಶುಪಾಲರು ಗ್ರೇಡ್-1 |
ಒಟ್ಟು ಹುದ್ದೆ | 310 |
ವೇತನ | ನಿಯಮಾನುಸಾರ |
ಉದ್ಯೋಗದ ಸ್ಥಳ | ಕರ್ನಾಟಕ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಫೆಬ್ರವರಿ 6, 2023 |
ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನ | ಫೆಬ್ರವರಿ 8, 2023 |
ಅರ್ಜಿ ಶುಲ್ಕ ಎಷ್ಟು?
ಸಾಮಾನ್ಯ/ ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ- 5000 ರೂ.
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ ಪ್ರವರ್ಗ-1 & ಅಂಗವಿಕಲ ಅಭ್ಯರ್ಥಿಗಳು 2,500 ಪ್ರಕ್ರಿಯೆ ಶುಲ್ಕವನ್ನು ಪಾವತಿಸಬೇಕು.
ಅರ್ಜಿ ಶುಲ್ಕ ಪಾವತಿಸುವ ಬಗೆ- ಕಂಪ್ಯೂಟರೈಸ್ಡ್ ಅಂಚೆ ಕಚೇರಿಗಳಲ್ಲಿ ಮಾತ್ರ ಪಾವತಿಸಬೇಕು.
ಇದನ್ನೂ ಓದಿ: Bengaluru: ಇನ್ಸ್ಟೆಮ್ ಸಂಸ್ಥೆಯಲ್ಲಿ ಬಂಪರ್ ಉದ್ಯೋಗಾವಕಾಶ- ಈಗಲೇ ಅರ್ಜಿ ಸಲ್ಲಿಸಿ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 16/12/2022
ಅರ್ಜಿ ಸಲ್ಲಿಸಲು ಕೊನೆ ದಿನ: ಫೆಬ್ರವರಿ 6, 2023
ಇ-ಪೋಸ್ಟ್ ಆಫೀಸ್ನಲ್ಲಿ ಶುಲ್ಕ ಪಾವತಿ ಮಾಡಲು ಕೊನೆ ದಿನ: ಫೆಬ್ರವರಿ 8, 2023
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಸ್ಪರ್ಧಾತ್ಮಕ ಪರೀಕ್ಷೆಯ ಮಾಹಿತಿ:
ಪ್ರಾಧಿಕಾರವು ಪರೀಕ್ಷೆಯ ದಿನಾಂಕ ಮತ್ತು ಸ್ಥಳವನ್ನು ಅಧಿಸೂಚಿಸಿದಾಗ ಅಭ್ಯರ್ಥಿಗಳು ಪ್ರವೇಶ ಪತ್ರಗಳನ್ನು ಪ್ರಾಧಿಕಾರದ ಅಂತರ್ಜಾಲದಿಂದ ಡೌನ್ಲೋಡ್ ಮಾಡಿಕೊಳ್ಳಬೇಕು.
ಸ್ಪರ್ಧಾತ್ಮಕ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಾಧಿಕಾರದ ವೆಬ್ಸೈಟ್ನಲ್ಲಿ ನಂತರ ಪ್ರಕಟಿಸಲಾಗುತ್ತದೆ.
ಪ್ರಾಂಶುಪಾಲರು ಗ್ರೇಡ್-1 ಹುದ್ದೆಗಳಿಗೆ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಯು 100 ಅಂಕಗಳನ್ನು ಒಳಗೊಂಡಿರುತ್ತದೆ. ಪರೀಕ್ಷೆಯ ಅವಧಿ 2 ಗಂಟೆಗಳ ಕಾಲ. ಪ್ರಶ್ನೆ ಪತ್ರಿಕೆ ಮಾದರಿ- ವಸ್ತುನಿಷ್ಠ ಬಹು ಆಯ್ಕೆ (ಆಬ್ಜೆಕ್ಟಿವ್ ಮಲ್ಟಿಪಲ್ ಚಾಯ್ಸ್)
ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ- 150 ಅಂಕಗಳು. ಅಭ್ಯರ್ಥಿಗಳು ಈ ಪತ್ರಿಕೆಯಲ್ಲಿ ಅರ್ಹತೆ ಹೊಂದಲು ಕನಿಷ್ಠ 50 ಅಂಕಗಳನ್ನು ಗಳಿಸಬೇಕು. ಪ್ರಶ್ನೆ ಪತ್ರಿಕೆಯನ್ನು SSLC ಹಂತದಲ್ಲಿನ ಮಾನದಂಡವನ್ನಾಗಿಟ್ಟುಕೊಂಡು ಸಿದ್ಧಪಡಿಸಲಾಗುತ್ತದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ