• ಹೋಂ
  • »
  • ನ್ಯೂಸ್
  • »
  • Jobs
  • »
  • Karnataka Jobs: ಅರಣ್ಯ ಇಲಾಖೆಯಲ್ಲಿ ಅನೇಕ ಹುದ್ದೆಗಳಿಗೆ ಅರ್ಜಿ ಆಹ್ವಾನ- ತಿಂಗಳಿಗೆ 50,000 ಸಂಬಳ

Karnataka Jobs: ಅರಣ್ಯ ಇಲಾಖೆಯಲ್ಲಿ ಅನೇಕ ಹುದ್ದೆಗಳಿಗೆ ಅರ್ಜಿ ಆಹ್ವಾನ- ತಿಂಗಳಿಗೆ 50,000 ಸಂಬಳ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಮಾರ್ಚ್​ 15, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಇ-ಮೇಲ್ (E-Mail) ಮಾಡುವ ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ (Bengaluru) ಪೋಸ್ಟಿಂಗ್ ನೀಡಲಾಗುತ್ತದೆ.

  • News18 Kannada
  • 3-MIN READ
  • Last Updated :
  • Karnataka, India
  • Share this:

KFD Recruitment 2023: ಕರ್ನಾಟಕ ಅರಣ್ಯ ಇಲಾಖೆ (Karnataka Forest Department) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ರಾಜ್ಯ ಮಟ್ಟದ ಸಲಹೆಗಾರರು/ತಾಂತ್ರಿಕ ಸಲಹೆಗಾರ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾರ್ಚ್​ 15, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಇ-ಮೇಲ್ (E-Mail) ಮಾಡುವ ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ (Bengaluru) ಪೋಸ್ಟಿಂಗ್ ನೀಡಲಾಗುತ್ತದೆ. ಅರಣ್ಯ ಇಲಾಖೆಯಲ್ಲಿ ಕೆಲಸ ಮಾಡಲು ಇಚ್ಛಿಸುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.


ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಕರ್ನಾಟಕ ಅರಣ್ಯ ಇಲಾಖೆ
ಹುದ್ದೆರಾಜ್ಯ ಮಟ್ಟದ ಸಲಹೆಗಾರರು/ತಾಂತ್ರಿಕ ಸಲಹೆಗಾರ
ವಿದ್ಯಾರ್ಹತೆಎಂ.ಎಸ್ಸಿ, ಸ್ನಾತಕೋತ್ತರ ಪದವಿ
ವೇತನಮಾಸಿಕ ₹ 50,000
ಉದ್ಯೋಗದ ಸ್ಥಳಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನಮಾರ್ಚ್​ 15, 2023

ವಿದ್ಯಾರ್ಹತೆ:
ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂ.ಎಸ್ಸಿ (ಫಾರೆಸ್ಟ್ರಿ), ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.


ಇದನ್ನೂ ಓದಿ: SDM ಕಾಲೇಜಿನಲ್ಲಿ 8 ಟೀಚಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ- ಈಗಲೇ ಅಪ್ಲೈ ಮಾಡಿ


ಅನುಭವ:
ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಅಗ್ರೋಫಾರೆಸ್ಟ್ರಿಯಲ್ಲಿ ಕನಿಷ್ಠ 05 ವರ್ಷಗಳ ಅನುಭವವನ್ನು ಹೊಂದಿರಬೇಕು ಅಥವಾ ನಿವೃತ್ತ ಅರಣ್ಯಾಧಿಕಾರಿಗಳು (30 ವರ್ಷಗಳ ಸೇವೆ ಸಲ್ಲಿಸಿರಬೇಕು)


ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ


ವೇತನ:
ಮಾಸಿಕ ₹ 50,000


ಇದನ್ನೂ ಓದಿ: BOB Recruitment 2023: ಹಾಸನ, ಚಿಕ್ಕಮಗಳೂರು ಬ್ಯಾಂಕ್ ಆಫ್ ಬರೋಡಾದಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನ


ಉದ್ಯೋಗದ ಸ್ಥಳ:
ಬೆಂಗಳೂರು


ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ apccfsf@gmail.com ಗೆ ಮಾರ್ಚ್​ 15 ರೊಳಗೆ ಕಳುಹಿಸಬೇಕು.



ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 04/03/2023
ಇ-ಮೇಲ್ ಐಡಿ ಕಳುಹಿಸಲು ಕೊನೆಯ ದಿನ: ಮಾರ್ಚ್​ 15, 2023

Published by:Latha CG
First published: