KEA Recruitment 2023: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ(Karnataka Examinations Authority) ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಹಾಕಲು ಇವತ್ತೇ ಕೊನೆಯ ದಿನವಾಗಿದೆ. ಒಟ್ಟು 2 ಪ್ರೋಗ್ರಾಮರ್(Programmer) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಕರ್ನಾಟಕ ಸರ್ಕಾರದ ಉದ್ಯೋಗ(Government Job) ಮಾಡಬಯಸುವವರಿಗೆ ಹಾಗೂ ಬೆಂಗಳೂರಿನಲ್ಲಿ ವೃತ್ತಿ ಜೀವನ ನಡೆಸಲು ಮುಂದಾಗಿರುವ ಅಭ್ಯರ್ಥಿಗಳಿಗೆ ಇದು ಒಳ್ಳೆಯ ಅವಕಾಶವಾಗಿದೆ. ಅರ್ಜಿ ಸಲ್ಲಿಸಲು ಜನವರಿ 14, 2023 ಅಂದರೆ ಇಂದು ಕೊನೆಯ ದಿನವಾಗಿದ್ದು (Last Date), ಅಭ್ಯರ್ಥಿಗಳು ಕೂಡಲೇ ಇ-ಮೇಲ್ ಮಾಡಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಕರ್ನಾಟಕ ಪರೀಕ್ಷಾ ಪ್ರಾಧಿಕಾರ |
ಹುದ್ದೆ | ಪ್ರೋಗ್ರಾಮರ್ |
ಒಟ್ಟು ಹುದ್ದೆ | 2 |
ವಿದ್ಯಾರ್ಹತೆ | ಬಿಇ/ಬಿ.ಟೆಕ್, ಬಿಸಿಎ, ಎಂಸಿಎ |
ವೇತನ | ಮಾಸಿಕ ₹ 25,000-50,000 |
ಉದ್ಯೋಗದ ಸ್ಥಳ | ಬೆಂಗಳೂರು |
ಅರ್ಜಿ ಸಲ್ಲಿಸಲು ಕೊನೆಯ ದಿನ | ಜನವರಿ 14, 2023 (ಇಂದು) |
ವಿದ್ಯಾರ್ಹತೆ:
ಪ್ರೋಗ್ರಾಮರ್ -ಬಿಇ/ಬಿ.ಟೆಕ್, CSE/ITಯಲ್ಲಿ ಎಂಟೆಕ್, ಎಂಎಸ್ಸಿ, ಎಂಸಿಎ
ಪ್ರೋಗ್ರಾಮರ್ (ಫ್ರೆಶರ್)- ಬಿಸಿಎ
ಇದನ್ನೂ ಓದಿ: Job Alert: ಕರ್ನಾಟಕ ಸಿಟಿ ಕಾರ್ಪೊರೇಷನ್ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಇವತ್ತೇ ಅರ್ಜಿ ಹಾಕಿ
ಅನುಭವ:
ಅಭ್ಯರ್ಥಿಗಳು ವೆಬ್ಲಾಜಿಕ್ ಸರ್ವರ್‌ನಲ್ಲಿ ನಮೂನೆಗಳು ಮತ್ತು ವರದಿಗಳೊಂದಿಗೆ Oracle 12 C ನಲ್ಲಿ 02 ವರ್ಷಗಳಿಗಿಂತ ಹೆಚ್ಚಿನ ಅನುಭವವನ್ನು ಹೊಂದಿರಬೇಕು.
ವಯಸ್ಸು ಎಷ್ಟಿರಬೇಕು?
ಅಭ್ಯರ್ಥಿಗಳ ವಯಸ್ಸು ಎಷ್ಟಿರಬೇಕು ಎಂಬುದನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಿಗದಿಪಡಿಸಿಲ್ಲ.
ವೇತನ:
ಪ್ರೋಗ್ರಾಮರ್ -ಮಾಸಿಕ ₹ 50,000
ಪ್ರೋಗ್ರಾಮರ್ (ಫ್ರೆಶರ್)- ಮಾಸಿಕ ₹ 25,000
ಇದನ್ನೂ ಓದಿ: KMFನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಹಾಕಲು ನಾಳೆಯೇ ಕೊನೆ ದಿನ- ಇಲ್ಲಿ ಅಪ್ಲೈ ಮಾಡಿ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ keaopportunities@gmail.com ಗೆ ಜನವರಿ 14 ಅಂದರೆ ಇವತ್ತೇ ಕಳುಹಿಸಿ.
ಪ್ರಮುಖ ದಿನಾಂಕಗಳು
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 05/01/2023
ಇ-ಮೇಲ್ ಕಳುಹಿಸಲು ಕೊನೆಯ ದಿನ: 14/01/2023
ಪ್ರಾಯೋಗಿಕ ಪರೀಕ್ಷೆ ನಡೆಯುವ ದಿನಾಂಕ: ಜನವರಿ 17, 2023
ಪ್ರಾಯೋಗಿಕ ಪರೀಕ್ಷೆಯ ಅವಧಿ- 3 ಗಂಟೆಗಳು
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ