• ಹೋಂ
  • »
  • ನ್ಯೂಸ್
  • »
  • Jobs
  • »
  • KFD Recruitment 2023: ಫಾರೆಸ್ಟ್ ಡಿಪಾರ್ಟ್​ಮೆಂಟ್​​ನಲ್ಲಿ ಕೆಲಸ ಸಿಗಬೇಕಾ? ನಾಳೆಯೊಳಗೆ ಅಪ್ಲೈ ಮಾಡಿ

KFD Recruitment 2023: ಫಾರೆಸ್ಟ್ ಡಿಪಾರ್ಟ್​ಮೆಂಟ್​​ನಲ್ಲಿ ಕೆಲಸ ಸಿಗಬೇಕಾ? ನಾಳೆಯೊಳಗೆ ಅಪ್ಲೈ ಮಾಡಿ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಅಭ್ಯರ್ಥಿಗಳಿಗೆ ಕನ್ನಡ ಮಾತನಾಡಲು ಮತ್ತು ಅರ್ಥ ಮಾಡಿಕೊಳ್ಳಲು ಬಂದರೆ ಸಾಕು. ಅಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಹಾಕಬಹುದು.

  • News18 Kannada
  • 2-MIN READ
  • Last Updated :
  • Karnataka, India
  • Share this:

KFD Recruitment 2023: ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯಲ್ಲಿ(Karnataka Forest Department) ಅನೇಕ ಹುದ್ದೆಗಳು ಖಾಲಿ ಇವೆ. ಆಸಕ್ತರು ಅರ್ಜಿ ಹಾಕುವ ಮೂಲಕ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಕನ್ನಡ ಮಾತನಾಡಲು (Kannada Speaking) ಮತ್ತು ಅರ್ಥ ಮಾಡಿಕೊಳ್ಳಲು ಬಂದರೆ ಸಾಕು. ಈ ಹುದ್ದೆಗಳಿಗೆ ಅರ್ಜಿ ಹಾಕಬಹುದು. ಕೊಡಗು, ಚಾಮರಾಜನಗರ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಒಟ್ಟು 19 ಆನೆ ಕಾವಾಡಿಗ (Ane Kavadiga) ಹುದ್ದೆಗಳು ಖಾಲಿ ಇವೆ. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಅರ್ಜಿ ಹಾಕಲು ಏಪ್ರಿಲ್ 29, 2023, ಅಂದರೆ ನಾಳೆ ಕೊನೆಯ ದಿನವಾಗಿದೆ (Last Date). ಅಭ್ಯರ್ಥಿಗಳು ಆಫ್​ಲೈನ್​/ ಪೋಸ್ಟ್​ ಮೂಲಕ ಅರ್ಜಿ ಸಲ್ಲಿಸಬೇಕು.


ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಕರ್ನಾಟಕ ಅರಣ್ಯ ಇಲಾಖೆ
ಹುದ್ದೆಆನೆ ಕಾವಾಡಿಗ
ಒಟ್ಟು ಹುದ್ದೆ19
ವಿದ್ಯಾರ್ಹತೆಕನ್ನಡ ಭಾಷೆ ಮಾತನಾಡಲು ಬರಬೇಕು
ವೇತನಮಾಸಿಕ ₹ 18,600-32,600
ಉದ್ಯೋಗದ ಸ್ಥಳಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆಯ ದಿನಏಪ್ರಿಲ್ 29, 2023 (ನಾಳೆ)

ಹುದ್ದೆಯ ಮಾಹಿತಿ:
ಕೊಡಗು- 4
ಚಾಮರಾಜನಗರ- 6
ಮೈಸೂರು - 5
ಶಿವಮೊಗ್ಗ- 4




ವಿದ್ಯಾರ್ಹತೆ:
ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳಿಗೆ ಕನ್ನಡ ಮಾತನಾಡಲು ಮತ್ತು ಅರ್ಥ ಮಾಡಿಕೊಳ್ಳಲು ಬಂದರೆ ಸಾಕು. ಅಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಹಾಕಬಹುದು.


ಇದನ್ನೂ ಓದಿ: India Post Recruitment 2023: ತಿಂಗಳಿಗೆ 63 ಸಾವಿರ ಸಂಬಳ- 10ನೇ ಕ್ಲಾಸ್ ಪಾಸಾದವ್ರಿಗೆ ಪೋಸ್ಟ್ ಆಫೀಸ್ ಜಾಬ್


ವಯೋಮಿತಿ:
ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು. 2ಎ, 2ಬಿ, 3ಎ, 3ಬಿ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ, SC/ST ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.


ವೇತನ:
ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 18,600-32,600 ಸಂಬಳ ಕೊಡಲಾಗುತ್ತದೆ.


KFD- ಅರ್ಜಿ


ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಆಯಾ ಅರಣ್ಯ ವಲಯ ಅಧಿಕಾರಿಗಳಿಗೆ (ಅಧಿಕೃತ ಅಧಿಸೂಚನೆಯ ಪ್ರಕಾರ) ಏಪ್ರಿಲ್ 29ಕ್ಕೆ ಮುನ್ನ ಕಳುಹಿಸಬೇಕು.


ಇದನ್ನೂ ಓದಿ: NIMHANS Recruitment 2023: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ನಿಮ್ಹಾನ್ಸ್​- ಆಸಕ್ತರು ಅಪ್ಲೈ ಮಾಡಿ


ಕೊಡಗು ಅಧಿಸೂಚನೆ


ಮೈಸೂರು ಅಧಿಸೂಚನೆ


ಶಿವಮೊಗ್ಗ ಅಧಿಸೂಚನೆ


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 15/03/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಏಪ್ರಿಲ್ 29, 2023 (ನಾಳೆ)

First published: