• ಹೋಂ
  • »
  • ನ್ಯೂಸ್
  • »
  • Jobs
  • »
  • KHPT Recruitment 2023: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್​​ನಲ್ಲಿ ಕೆಲಸ ಖಾಲಿ ಇದೆ- ಈಗಲೇ ಅರ್ಜಿ ಹಾಕಿ

KHPT Recruitment 2023: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್​​ನಲ್ಲಿ ಕೆಲಸ ಖಾಲಿ ಇದೆ- ಈಗಲೇ ಅರ್ಜಿ ಹಾಕಿ

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್

ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ(Bengaluru) ಪೋಸ್ಟಿಂಗ್ ನೀಡಲಾಗುತ್ತದೆ. ಇದೇ ಮಾರ್ಚ್ 15, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

  • Share this:

KHPT Recruitment 2023: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್(Karnataka Health Promotion Trust) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಅಕೌಂಟ್​ ಅಸೋಸಿಯೇಟ್ (Account Associate) ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈಗಲೇ ಅರ್ಜಿ ಹಾಕಿ. ಇ-ಮೇಲ್ ಮಾಡುವ ಮೂಲಕ ಅಭ್ಯರ್ಥಿಗಳು ಅಪ್ಲಿಕೇಶನ್(Application) ಹಾಕಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ(Bengaluru) ಪೋಸ್ಟಿಂಗ್ ನೀಡಲಾಗುತ್ತದೆ. ಇದೇ ಮಾರ್ಚ್ 15, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್
ಹುದ್ದೆಅಕೌಂಟ್​ ಅಸೋಸಿಯೇಟ್
ಒಟ್ಟು ಹುದ್ದೆ1
ವಿದ್ಯಾರ್ಹತೆಪದವಿ, ಸ್ನಾತಕೋತ್ತರ ಪದವಿ
ವೇತನನಿಗದಿಪಡಿಸಿಲ್ಲ
ಉದ್ಯೋಗದ ಸ್ಥಳಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನಮಾರ್ಚ್​ 15, 2023

ವಿದ್ಯಾರ್ಹತೆ:
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಪ್ರಾಜೆಕ್ಟ್​ ಲೀಡ್ ಹುದ್ದೆಗೆ ಅರ್ಜಿ ಹಾಕುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.


ಇದನ್ನೂ ಓದಿ: BOB Recruitment 2023: ಬ್ಯಾಂಕ್ ಆಫ್​ ಬರೋಡಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಈಗಲೇ ಅರ್ಜಿ ಹಾಕಿ- ನಾಳೆಯೇ ಲಾಸ್ಟ್ ಡೇಟ್


ವಯೋಮಿತಿ:
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆಯಲ್ಲಿ ಪ್ರಾಜೆಕ್ಟ್​​​ ಲೀಡ್ ಹುದ್ದೆಗೆ ಅರ್ಜಿ ಹಾಕುವ ಅಭ್ಯರ್ಥಿಗಳ ವಯಸ್ಸನ್ನು ನಿಗದಿಪಡಿಸಿಲ್ಲ. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ವೇತನ:
ನಿಗದಿಪಡಿಸಿಲ್ಲ.


ಇದನ್ನೂ ಓದಿ:SBI Recruitment: ಸ್ಟೇಟ್ ಬ್ಯಾಂಕ್​​ನಲ್ಲಿ ಕೆಲಸ ಖಾಲಿ ಇದೆ- 40 ಲಕ್ಷದವರೆಗೆ ಸಂಬಳ


ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ


ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್​ ಐಡಿ jobs@khpt.org ಗೆ ಮಾರ್ಚ್​ 15ರೊಳಗೆ ಕಳುಹಿಸಬೇಕು.




ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 27/02/2023
ಇ-ಮೇಲ್ ಕಳುಹಿಸಲು ಕೊನೆ ದಿನ: ಮಾರ್ಚ್​ 15, 2023

Published by:Latha CG
First published: