KOF Bangalore Recruitment 2023: ಕರ್ನಾಟಕ ತೈಲ ಒಕ್ಕೂಟ(Karnataka Oil Federation) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 20 ಎಕ್ಸಿಕ್ಯೂಟಿವ್, ಮಾರ್ಕೆಟಿಂಗ್ ಆಫೀಸರ್, ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದೇ ಮಾರ್ಚ್ 25, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಆಸಕ್ತರು ಆನ್ಲೈನ್/ ಆಫ್ಲೈನ್ (Online/ Offline) ಮೂಲಕ ಅರ್ಜಿ ಹಾಕಬೇಕು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಕೂಡಲೇ ಅರ್ಜಿ ಸಲ್ಲಿಸಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಕರ್ನಾಟಕ ತೈಲ ಒಕ್ಕೂಟ |
ಹುದ್ದೆ | ಎಕ್ಸಿಕ್ಯೂಟಿವ್, ಮಾರ್ಕೆಟಿಂಗ್ ಆಫೀಸರ್, ಮ್ಯಾನೇಜರ್ |
ಒಟ್ಟು ಹುದ್ದೆ | 20 |
ವಿದ್ಯಾರ್ಹತೆ | ಬಿಬಿಎ, ಬಿಬಿಎಂ, ಪದವಿ, ಬಿ.ಎಸ್ಸಿ, ಎಂ.ಎಸ್ಸಿ ಅಗ್ರಿ, ಎಂಬಿಎ |
ವೇತನ | ಮಾಸಿಕ ₹ 21,400-1,09,600 |
ಉದ್ಯೋಗದ ಸ್ಥಳ | ಬೆಂಗಳೂರು |
ಅರ್ಜಿ ಸಲ್ಲಿಸಲು ಕೊನೆಯ ದಿನ | ಮಾರ್ಚ್ 25, 2023 |
ಇದನ್ನೂ ಓದಿ: Job Alert: ಮೈಸೂರಿನಲ್ಲಿ ಕೆಲಸ ಖಾಲಿ ಇದೆ- ತಿಂಗಳಿಗೆ 80 ಸಾವಿರ ಸಂಬಳ, ಅರ್ಜಿ ಹಾಕಲು ಇವತ್ತೇ ಕೊನೆ ದಿನ
ವಿದ್ಯಾರ್ಹತೆ:
ಕರ್ನಾಟಕ ತೈಲ ಒಕ್ಕೂಟ ನೇಮಕಾತಿ ಅಧಿಸೂಚನೆ ಪ್ರಕಾರ, ವಿದ್ಯಾರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಬಿಎ, ಬಿಬಿಎಂ, ಪದವಿ, ಬಿ.ಎಸ್ಸಿ, ಎಂ.ಎಸ್ಸಿ ಅಗ್ರಿ, ಎಂಬಿಎ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಕರ್ನಾಟಕ ತೈಲ ಒಕ್ಕೂಟ ನೇಮಕಾತಿ ಅಧಿಸೂಚನೆ ಪ್ರಕಾರ, ವಿದ್ಯಾರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು- 3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ
ವೇತನ:
ಮಾಸಿಕ ₹ 21,400-1,09,600
ಉದ್ಯೋಗದ ಸ್ಥಳ:
ಬೆಂಗಳೂರು
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ವ್ಯವಸ್ಥಾಪಕ ನಿರ್ದೇಶಕರು
ಕರ್ನಾಟಕ ಸಹಕಾರಿ ಎಣ್ಣೆಬೀಜ ಬೆಳೆಗಾರರ ಮಹಾಮಂಡಲ ನಿಯಂತ್ರಣ
ಬೆಂಗಳೂರು (KOF) ನಂ. 11
4 ನೇ ಮಹಡಿ
ಬ್ಲೂ ಕ್ರಾಸ್ ಚೇಂಬರ್ಸ್
ಇನ್ವೆಂಟರಿ ಕ್ರಾಸ್ ರೋಡ್
ಬೆಂಗಳೂರು - 01
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 11/03/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್ 25, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ