• ಹೋಂ
  • »
  • ನ್ಯೂಸ್
  • »
  • Jobs
  • »
  • KPSC Recruitment 2023: ಕಾಮರ್ಸ್ ಪದವೀಧರರಿಗೆ ಉದ್ಯೋಗಾವಕಾಶ- ತಿಂಗಳಿಗೆ 52 ಸಾವಿರ ಸಂಬಳ

KPSC Recruitment 2023: ಕಾಮರ್ಸ್ ಪದವೀಧರರಿಗೆ ಉದ್ಯೋಗಾವಕಾಶ- ತಿಂಗಳಿಗೆ 52 ಸಾವಿರ ಸಂಬಳ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಉಳಿಕೆ ಮೂಲ ವೃಂದದ ಗ್ರೂಪ್ ಸಿ ಹುದ್ದೆಗಳನ್ನು ಭರ್ತಿ ಮಾಡಲು ಈ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಒಟ್ಟು 242 ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಲೆಕ್ಕ ಸಹಾಯಕ ಹುದ್ದೆಗಳು ಖಾಲಿ ಇವೆ.

  • News18 Kannada
  • 2-MIN READ
  • Last Updated :
  • Karnataka, India
  • Share this:

KPSC Recruitment 2023: ಕರ್ನಾಟಕ ಲೋಕ ಸೇವಾ ಆಯೋಗ(Karnataka Public Service Commission) ಬಹು ದಿನಗಳ ಬಳಿಕ ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇಮಕಾತಿ(Recruitment) ಪ್ರಕ್ರಿಯೆ ಆರಂಭಿಸಿದೆ. ಹೀಗಾಗಿ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಕರ್ನಾಟಕ ರಾಜ್ಯದ ಸರ್ಕಾರಿ ನೌಕರಿಯ(Government Job) ಹುಡುಕಾಟದಲ್ಲಿದ್ದರೆ ಈಗಲೇ ಅಪ್ಲೈ ಮಾಡಬಹುದು. ಒಟ್ಟು 242 ಅಕೌಂಟ್ಸ್​ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಏಪ್ರಿಲ್ 23, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಹಾಕಬೇಕು.


ಉಳಿಕೆ ಮೂಲ ವೃಂದದ ಗ್ರೂಪ್ ಸಿ ಹುದ್ದೆಗಳನ್ನು ಭರ್ತಿ ಮಾಡಲು ಈ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಒಟ್ಟು 242 ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಲೆಕ್ಕ ಸಹಾಯಕ ಹುದ್ದೆಗಳು ಖಾಲಿ ಇವೆ. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಕರ್ನಾಟಕ ಲೋಕ ಸೇವಾ ಆಯೋಗ
ಹುದ್ದೆಅಕೌಂಟ್ಸ್​ ಅಸಿಸ್ಟೆಂಟ್
ಒಟ್ಟು ಹುದ್ದೆ242
ವಿದ್ಯಾರ್ಹತೆಕಾಮರ್ಸ್ ಪದವಿ
ವೇತನಮಾಸಿಕ ₹ 27,650-52,650
ಉದ್ಯೋಗದ ಸ್ಥಳಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆಯ ದಿನಏಪ್ರಿಲ್ 23, 2023

ವಿದ್ಯಾರ್ಹತೆ:
ಕರ್ನಾಟಕ ಲೋಕ ಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಬಿ.ಕಾಂ, ಬಿಬಿಎಂ, ಬಿಬಿಎ ಪೂರ್ಣಗೊಳಿಸಿರಬೇಕು.


ಇದನ್ನೂ ಓದಿ: CPPRI Recruitment 2023: ತಿಂಗಳಿಗೆ 42 ಸಾವಿರ ಸಂಬಳ- ಡಿಗ್ರಿ ಆಗಿದ್ರೆ ಇವತ್ತೇ ಅರ್ಜಿ ಹಾಕಿ


ವಯೋಮಿತಿ:
ಕರ್ನಾಟಕ ಲೋಕ ಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 23, 2023ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.


ವಯೋಮಿತಿ ಸಡಿಲಿಕೆ:
2ಎ, 2ಬಿ, 3ಎ, 3ಬಿ, ಒಬಿಸಿ ಅಭ್ಯರ್ಥಿಗಳು- 3 ವರ್ಷ
SC/ST/ ಮಾಜಿ ಸೈನಿಕ ಅಭ್ಯರ್ಥಿಗಳು- 5 ವರ್ಷ
PWD ಅಭ್ಯರ್ಥಿಗಳು- 10 ವರ್ಷ


ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳು- 600 ರೂ.
2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು- 300 ರೂ.
SC/SC (A)/ST ಅಭ್ಯರ್ಥಿಗಳು- ಅರ್ಜಿ ಶುಲ್ಕ ಇಲ್ಲ
ಮಾಜಿ ಸೇವಾ ಅಭ್ಯರ್ಥಿಗಳು- 50 ರೂ.


ಇದನ್ನೂ ಓದಿ: Banking Jobs: ಕರ್ನಾಟಕದಲ್ಲಿ ಬ್ಯಾಂಕ್​ ಹುದ್ದೆ ಖಾಲಿ ಇದೆ- ಅರ್ಜಿ ಹಾಕಲು ಇವತ್ತೇ ಕೊನೆ ದಿನ


ವೇತನ:
ಮಾಸಿಕ ₹ 27,650-52,650


ಉದ್ಯೋಗದ ಸ್ಥಳ:
ಕರ್ನಾಟಕ




ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ


ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.


ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 23/03/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಏಪ್ರಿಲ್ 23, 2023
ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನ: ಏಪ್ರಿಲ್ 24, 2023


ಹೆಚ್ಚಿನ ವಿವರಗಳಿಗಾಗಿ ನೋಟಿಫಿಕೇಶನ್ ಪರಿಶೀಲಿಸಿ- KPSC- ನೋಟಿಫಿಕೇಶನ್


ಸಹಾಯವಾಣಿ ಸಂಖ್ಯೆಗಳು:
ಪ್ರಧಾನ ಕಛೇರಿ: 080-30574957/ 30574901
ಮೈಸೂರು: 0821-2545956
ಬೆಳಗಾವಿ: 0831-2475345
ಕಲಬುರ್ಗಿ: 08472-227944
ಶಿವಮೊಗ್ಗ: 08182-228099

Published by:Latha CG
First published: