KPSC Recruitment 2023: ಕರ್ನಾಟಕ ಲೋಕ ಸೇವಾ ಆಯೋಗದಲ್ಲಿ(Karnataka Public Service Commission) ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಹಾಕಲು ನಾಳೆಯೇ ಕೊನೆಯ ದಿನವಾಗಿದೆ. ಮೇ 2, 2023 ಅಪ್ಲಿಕೇಶನ್ ಹಾಕಲು ಲಾಸ್ಟ್ ಡೇಟ್ ಎಂದು ಕರ್ನಾಟಕ ಲೋಕಸೇವಾ ಆಯೋಗ ನೋಟಿಫಿಕೇಶನ್ನಲ್ಲಿ ತಿಳಿಸಿದೆ. ಹೀಗಾಗಿ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಕರ್ನಾಟಕ ರಾಜ್ಯದ ಸರ್ಕಾರಿ ನೌಕರಿಯ(Government Job) ಹುಡುಕಾಟದಲ್ಲಿದ್ದರೆ ಈಗಲೇ ಅಪ್ಲೈ ಮಾಡಬಹುದು. ಒಟ್ಟು 53 ಸಹಕಾರ ಸಂಘಗಳ ನಿರೀಕ್ಷಕರು (HK) ಹುದ್ದೆಗಳು ಖಾಲಿ ಇವೆ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಹಾಕಬೇಕು.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಕರ್ನಾಟಕ ಲೋಕ ಸೇವಾ ಆಯೋಗ |
ಹುದ್ದೆ | ಸಹಕಾರ ಸಂಘಗಳ ನಿರೀಕ್ಷಕರು |
ಒಟ್ಟು ಹುದ್ದೆ | 53 |
ವಿದ್ಯಾರ್ಹತೆ | ಪದವಿ |
ವೇತನ | ಮಾಸಿಕ ₹ 27,650- 52,650 |
ಉದ್ಯೋಗದ ಸ್ಥಳ | ಬೆಂಗಳೂರು |
ಅರ್ಜಿ ಸಲ್ಲಿಸಲು ಕೊನೆಯ ದಿನ | ಮೇ 2, 2023 (ನಾಳೆ) |
ಇದನ್ನೂ ಓದಿ: KHPT Recruitment 2023: ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಸರ್ಕಾರಿ ಹುದ್ದೆ ಖಾಲಿ ಇವೆ- ನಾಳೆಯೊಳಗೆ ಅಪ್ಲೈ ಮಾಡಿ
ವಯೋಮಿತಿ:
ಕರ್ನಾಟಕ ಲೋಕ ಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಮೇ 2, 2023 ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ:
SC/ST/ ಪ್ರವರ್ಗ-1 & PH ಅಭ್ಯರ್ಥಿಗಳು- 35 ರೂ.
ಮಾಜಿ ಸೈನಿಕ ಅಭ್ಯರ್ಥಿಗಳು- 85 ರೂ.
ಪ್ರವರ್ಗ 2ಎ/ 2ಬಿ/ 3ಎ & 3ಬಿ ಅಭ್ಯರ್ಥಿಗಳು- 335 ರೂ.
ಸಾಮಾನ್ಯ ಅಭ್ಯರ್ಥಿಗಳು- 635 ರೂ.
ಪಾವತಿಸುವ ಬಗೆ- ಆನ್ಲೈನ್
ಇದನ್ನೂ ಓದಿ: Part Time Jobs: ವಿದ್ಯಾರ್ಥಿಗಳಿಗೆ ಬೆಸ್ಟ್ Part-Time ಜಾಬ್ಸ್ ಇಲ್ಲಿವೆ!
ವೇತನ:
ಮಾಸಿಕ ₹ 27,650- 52,650 ರೂ.
ಉದ್ಯೋಗದ ಸ್ಥಳ:
ಕರ್ನಾಟಕ
ಆಯ್ಕೆ ಪ್ರಕ್ರಿಯೆ:
ಕನ್ನಡ ಭಾಷಾ ಪರೀಕ್ಷೆ
ಸ್ಪರ್ಧಾತ್ಮಕ ಪರೀಕ್ಷೆ
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 02/04/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 2, 2023
ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನ: ಮೇ 3, 2023
ಸೂಚನೆ:
ಹೆಚ್ಚಿನ ವಿವರಗಳಿಗಾಗಿ ಕೆಳಗಿನ ಸಹಾಯವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ.
ಕೇಂದ್ರ ಕಚೇರಿ ಮಾಹಿತಿ ಕೇಂದ್ರ: 080-30574957/30574901
ಪ್ರಾಂತೀಯ ಕಛೇರಿ ಮೈಸೂರು: 0821-2545956
ಪ್ರಾಂತೀಯ ಕಛೇರಿ ಬೆಳಗಾವಿ: 0831-2475345
ಪ್ರಾಂತೀಯ ಕಛೇರಿ ಕಲಬುರಗಿ: 08472-227944
ಪ್ರಾಂತೀಯ ಕಛೇರಿ ಶಿವಮೊಗ್ಗ: 08182-228099
ಸಹಾಯವಾಣಿ ಸಂಖ್ಯೆ: 18005728707
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ