KSDA Recruitment 2023: ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿದ್ದರೆ ಇಲ್ಲಿದೆ ಗುಡ್ನ್ಯೂಸ್. ಜೊತೆಗೆ ನೀವು ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ್ದರೆ ನಿಮಗೆ ಸರ್ಕಾರಿ ನೌಕರಿ ಸಿಕ್ಕಂತೆ. ಹೌದು ಕರ್ನಾಟಕ ರಾಜ್ಯ ಕೃಷಿ ಇಲಾಖೆ (Karnataka State Department of Agriculture) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 3 ಟೆಕ್ನಿಕಲ್ ಅಸಿಸ್ಟೆಂಟ್ (Technical Assistant) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದೇ ಮಾರ್ಚ್ 20, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್ಲೈನ್ ಮೂಲಕ ಅರ್ಜಿ ಹಾಕಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ (Bengaluru) ಪೋಸ್ಟಿಂಗ್ ನೀಡಲಾಗುತ್ತದೆ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಕರ್ನಾಟಕ ರಾಜ್ಯ ಕೃಷಿ ಇಲಾಖೆ |
ಹುದ್ದೆ | ಟೆಕ್ನಿಕಲ್ ಅಸಿಸ್ಟೆಂಟ್ |
ಒಟ್ಟು ಹುದ್ದೆ | 3 |
ವಿದ್ಯಾರ್ಹತೆ | ಸ್ನಾತಕೋತ್ತರ ಪದವಿ |
ವೇತನ | ಮಾಸಿಕ ₹ 40,000 |
ಉದ್ಯೋಗದ ಸ್ಥಳ | ಬೆಂಗಳೂರು |
ಅರ್ಜಿ ಸಲ್ಲಿಸಲು ಕೊನೆಯ ದಿನ | ಮಾರ್ಚ್ 20, 2023 |
ವೇತನ:
ಮಾಸಿಕ ₹ 40,000
ಉದ್ಯೋಗದ ಸ್ಥಳ:
ಬೆಂಗಳೂರು
ಅನುಭವ:
ಕರ್ನಾಟಕ ರಾಜ್ಯ ಕೃಷಿ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಕನಿಷ್ಠ 5 ವರ್ಷ ಅನುಭವ ಹೊಂದಿರಬೇಕು.
ಇದನ್ನೂ ಓದಿ: Banking Jobs: ಕರ್ನಾಟಕದಲ್ಲಿ ಬ್ಯಾಂಕ್ ಹುದ್ದೆ ಖಾಲಿ ಇದೆ- ಅರ್ಜಿ ಹಾಕಲು ಇವತ್ತೇ ಕೊನೆ ದಿನ
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಕೃಷಿ ನಿರ್ದೇಶಕರು
ಕೃಷಿ ಕಮಿಷನರೇಟ್
ಶೇಷಾದ್ರಿ ರಸ್ತೆ
ಬೆಂಗಳೂರು-01
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 03/03/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್ 20, 2023
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ದೂರವಾಣಿ ಸಂಖ್ಯೆ 080-22074161 ಗೆ ಕರೆ ಮಾಡಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ