KSDA Recruitment 2023: ಕರ್ನಾಟಕ ರಾಜ್ಯ ಕೃಷಿ ಇಲಾಖೆಯು(Karnataka State Department of Agriculture -KSDA) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಒಟ್ಟು 300 ಸಹಾಯಕ ಕೃಷಿ ಅಧಿಕಾರಿ(Assistant Agriculture Officer) ಹುದ್ದೆಗಳು ಖಾಲಿ ಇವೆ. ಆಸಕ್ತ ಅಭ್ಯರ್ಥಿಗಳು ಈಗಲೇ ಅರ್ಜಿ ಹಾಕಿ. ರಾಜ್ಯ ಸರ್ಕಾರದ ನೌಕರಿ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.
ಸ್ಪರ್ಧಾತ್ಮಕ ಪರೀಕ್ಷೆಯ ಆಯ್ಕೆ ವಿಧಾನ ಅನುಸರಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಸಹಾಯಕ ಕೃಷಿ ಅಧಿಕಾರಿಗಳ ವೃಂದದಲ್ಲಿ ಬ್ಯಾಕ್ಲಾಗ್ ಹುದ್ದೆಗಳೂ ಸಹ ಇದ್ದು, ಅವುಗಳನ್ನೂ ಭರ್ತಿ ಮಾಡಲಾಗುತ್ತದೆ.
ಇದನ್ನೂ ಓದಿ: Job Alert: ವಿಜಯಪುರ ಜಿಲ್ಲಾ ಪಂಚಾಯತ್ ನೇಮಕಾತಿ- ಇಂದು ಸಂಜೆ 5 ಗಂಟೆಯೊಳಗೆ ಅಪ್ಲೈ ಮಾಡಿ
ಸಂಸ್ಥೆ | ಕರ್ನಾಟಕ ರಾಜ್ಯ ಕೃಷಿ ಇಲಾಖೆ |
ಹುದ್ದೆ | ಸಹಾಯಕ ಕೃಷಿ ಅಧಿಕಾರಿ |
ಒಟ್ಟು ಹುದ್ದೆ | 300 |
ವೇತನ | 40,900-78,200 ರೂ. |
ಉದ್ಯೋಗದ ಸ್ಥಳ | ಕರ್ನಾಟಕ |
ಕೃಷಿ ಪದವೀಧರರು ಮತ್ತು ಬಿ.ಟೆಕ್ ಕೃಷಿ ಎಂಜಿನಿಯರಿಂಗ್/ ಬಯೋಟೆಕ್ನಾಲಜಿ ಪದವೀಧರರು ಈ ಹುದ್ದೆಗಳಿಗೆ ಅರ್ಜಿ ಹಾಕಲು ಅರ್ಹರು.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ raitamitra.karnataka.gov.in ಗೆ ಭೇಟಿ ನೀಡಿ.
ಆನ್ಲೈನ್ ಮೂಲಕ ಅರ್ಜಿ ಹಾಕಲು ಇಲ್ಲಿ ಕ್ಲಿಕ್ ಮಾಡಿ.
ವೇತನ:
ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ ₹ 40,900-78,200 ರೂ. ವರೆಗೆ ಸಂಬಳ ಕೊಡಲಾಗುತ್ತದೆ.
ಇದನ್ನೂ ಓದಿ: KPSC Recruitment 2023: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ KPSC, ಜನವರಿ 11ರೊಳಗೆ ಅರ್ಜಿ ಸಲ್ಲಿಸಿ
ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಹಾಕಿ. ಸರ್ಕಾರಿ ನೌಕರಿ ಪಡೆದುಕೊಳ್ಳಿ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ ಎಂಬುದು ಪ್ರಕಟವಾಗಿಲ್ಲ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ