• ಹೋಂ
 • »
 • ನ್ಯೂಸ್
 • »
 • Jobs
 • »
 • KSFC Recruitment 2023: ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಲ್ಲಿ ಕೆಲಸಕ್ಕೆ ಅರ್ಜಿ ಹಾಕಿ- ತಿಂಗಳಿಗೆ ₹ 97,000 ಸಂಬಳ

KSFC Recruitment 2023: ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಲ್ಲಿ ಕೆಲಸಕ್ಕೆ ಅರ್ಜಿ ಹಾಕಿ- ತಿಂಗಳಿಗೆ ₹ 97,000 ಸಂಬಳ

ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

ಇದೇ ಮಾರ್ಚ್​ 18, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಅಭ್ಯರ್ಥಿಗಳು ಆಫ್​ಲೈನ್ (Offline) ಮೂಲಕ ಅರ್ಜಿ ಹಾಕಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

 • News18 Kannada
 • 5-MIN READ
 • Last Updated :
 • Bangalore [Bangalore], India
 • Share this:

KSFC Recruitment 2023: ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ (Karnataka State Financial Corporation) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 41 ಡೆಪ್ಯುಟಿ ಮ್ಯಾನೇಜರ್(ಟೆಕ್ನಿಕಲ್), ಡೆಪ್ಯುಟಿ ಮ್ಯಾನೇಜರ್ (ಲೀಗಲ್) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ರಾಜ್ಯ ಸರ್ಕಾರದ ಕೆಲಸ ಬೇಕು ಎಂದು ಹಂಬಲಿಸುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಇದೇ ಮಾರ್ಚ್​ 18, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಅಭ್ಯರ್ಥಿಗಳು ಆಫ್​ಲೈನ್ (Offline) ಮೂಲಕ ಅರ್ಜಿ ಹಾಕಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.


ಅಭ್ಯರ್ಥಿಗಳು ಅರ್ಜಿ ಹಾಕುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ
ಹುದ್ದೆಡೆಪ್ಯುಟಿ ಮ್ಯಾನೇಜರ್(ಟೆಕ್ನಿಕಲ್), ಡೆಪ್ಯುಟಿ ಮ್ಯಾನೇಜರ್ (ಲೀಗಲ್)
ಒಟ್ಟು ಹುದ್ದೆ41
ವಿದ್ಯಾರ್ಹತೆಪದವಿ, ಸ್ನಾತಕೋತ್ತರ ಪದವಿ
ವೇತನಮಾಸಿಕ ₹ 52,650-97,100
ಉದ್ಯೋಗದ ಸ್ಥಳ ಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನಮಾರ್ಚ್​ 18, 2023

ಹುದ್ದೆಯ ಮಾಹಿತಿ:
ಡೆಪ್ಯುಟಿ ಮ್ಯಾನೇಜರ್(ಟೆಕ್ನಿಕಲ್)-11
ಡೆಪ್ಯುಟಿ ಮ್ಯಾನೇಜರ್ (ಲೀಗಲ್) - 18
ಡೆಪ್ಯುಟಿ ಮ್ಯಾನೇಜರ್ (ಫೈನಾನ್ಸ್​ & ಅಕೌಂಟ್ಸ್​)- 12


ಇದನ್ನೂ ಓದಿ: Medical Jobs: ಬೆಂಗಳೂರಿನಲ್ಲಿ ವೆಟರಿನರಿ ಡಾಕ್ಟರ್ ಹುದ್ದೆಗಳಿಗೆ ಅರ್ಜಿ ಹಾಕಿ- ತಿಂಗಳಿಗೆ 75,000 ಸಂಬಳ


ವಿದ್ಯಾರ್ಹತೆ
ಡೆಪ್ಯುಟಿ ಮ್ಯಾನೇಜರ್(ಟೆಕ್ನಿಕಲ್)- ಪದವಿ
ಡೆಪ್ಯುಟಿ ಮ್ಯಾನೇಜರ್ (ಲೀಗಲ್) - ಕಾನೂನು ಪದವಿ
ಡೆಪ್ಯುಟಿ ಮ್ಯಾನೇಜರ್ (ಫೈನಾನ್ಸ್​ & ಅಕೌಂಟ್ಸ್​)- ACA/ ICWA/ MBA/ M.Com/ CFA/ PGDMA


ವಯೋಮಿತಿ:
ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 25 ವರ್ಷ ಮತ್ತು ಗರಿಷ್ಠ 40 ವರ್ಷ ಮೀರಿರಬಾರದು.


ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು- 3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ
PWD ಅಭ್ಯರ್ಥಿಗಳು- 10 ವರ್ಷ


ವೇತನ:
ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 52,650-97,100 ವೇತನ ಕೊಡಲಾಗುತ್ತದೆ.


ಇದನ್ನೂ ಓದಿ: Job Alert: ತಿಂಗಳಿಗೆ 1.77 ಲಕ್ಷ ಸಂಬಳ- ಪದವೀಧರರಿಗೆ ಇಲ್ಲಿದೆ ಸರ್ಕಾರಿ ಉದ್ಯೋಗ


ಉದ್ಯೋಗದ ಸ್ಥಳ:
ಕರ್ನಾಟಕ ರಾಜ್ಯ ಹಣಕಾಸು  ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಮಾರ್ಚ್​ 18, 2023ಕ್ಕೆ ಮುನ್ನ ಕಳುಹಿಸಬೇಕು.


ವ್ಯವಸ್ಥಾಪಕ ನಿರ್ದೇಶಕರು
ಕೆಎಸ್‌ಎಫ್‌ಸಿ ಕೇಂದ್ರ ಕಚೇರಿ
ಕೆಎಸ್‌ಎಫ್‌ಸಿ ಭವನ
ನಂ.1/1
ತಿಮ್ಮಯ್ಯ ರಸ್ತೆ
ಬೆಂಗಳೂರು 560052


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 13/02/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್​ 18, 2023

Published by:Latha CG
First published: