• ಹೋಂ
  • »
  • ನ್ಯೂಸ್
  • »
  • Jobs
  • »
  • Shivamogga: ಕುವೆಂಪು ವಿವಿ ನೇಮಕಾತಿ- JRF ಹುದ್ದೆಗೆ ಅರ್ಜಿ ಹಾಕಲು ಇವತ್ತೇ ಕೊನೆ ದಿನ

Shivamogga: ಕುವೆಂಪು ವಿವಿ ನೇಮಕಾತಿ- JRF ಹುದ್ದೆಗೆ ಅರ್ಜಿ ಹಾಕಲು ಇವತ್ತೇ ಕೊನೆ ದಿನ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಅಭ್ಯರ್ಥಿಗಳು ಆಫ್​ಲೈನ್​ / ಪೋಸ್ಟ್​ ಮೂಲಕ ಅರ್ಜಿ ಸಲ್ಲಿಸಬೇಕು. ಶಿವಮೊಗ್ಗದ (Shivamogga) ಸ್ಥಳೀಯ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.

  • News18 Kannada
  • 5-MIN READ
  • Last Updated :
  • Shimoga, India
  • Share this:

Kuvempu University Recruitment 2023: ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯವು(Kuvempu University) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಜೂನಿಯರ್ ರಿಸರ್ಚ್ ಫೆಲೋ(Junior Research Fellow) ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾರ್ಚ್​ 19, 2023 ಅಂದರೆ ಇಂದು ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆಫ್​ಲೈನ್​ / ಪೋಸ್ಟ್​ ಮೂಲಕ ಅರ್ಜಿ ಸಲ್ಲಿಸಬೇಕು. ಶಿವಮೊಗ್ಗದ (Shivamogga) ಸ್ಥಳೀಯ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.


ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.  ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಅಧಿಕೃತ ವೆಬ್​ಸೈಟ್ kuvempu.ac.in ಗೆ ಭೇಟಿ ನೀಡಿ.

ಸಂಸ್ಥೆಕುವೆಂಪು ವಿಶ್ವವಿದ್ಯಾಲಯ
ಹುದ್ದೆಜೂನಿಯರ್ ರಿಸರ್ಚ್ ಫೆಲೋ
ಒಟ್ಟು ಹುದ್ದೆ1
ವಿದ್ಯಾರ್ಹತೆಸ್ನಾತಕೋತ್ತರ ಪದವಿ
ವೇತನಮಾಸಿಕ ₹ 31,000
ಉದ್ಯೋಗದ ಸ್ಥಳಶಿವಮೊಗ್ಗ
ಅರ್ಜಿ ಸಲ್ಲಿಸಲು ಕೊನೆಯ ದಿನಮಾರ್ಚ್​ 19, 2023 (ಇಂದು)

ವಿದ್ಯಾರ್ಹತೆ:
ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.


ಇದನ್ನೂ ಓದಿ: KPSC Recruitment 2023: ಕಾಮರ್ಸ್ ಪದವೀಧರರಿಗೆ ಉದ್ಯೋಗಾವಕಾಶ- ತಿಂಗಳಿಗೆ 52 ಸಾವಿರ ಸಂಬಳ


ವೇತನ:
ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 31,000 ಸಂಬಳ ಕೊಡಲಾಗುತ್ತದೆ.


ಕುವೆಂಪು ವಿಶ್ವವಿದ್ಯಾಲಯದ ಸೂಕ್ಷ್ಮ ಜೀವಶಾಸ್ತ್ರ ಅಧ್ಯಯನ ವಿಭಾಗದ ಪ್ರೊ. ಬಿ. ತಿಪ್ಪೇಸ್ವಾಮಿ ಅವರ ಸಂಶೋಧನಾ ಯೋಜನೆಗೆ ಈ ಸಂಶೋಧನಾ ಫೆಲೋವನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಶಿವಮೊಗ್ಗದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.


ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ




ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತ ಅಭ್ಯರ್ಥಿಗಳು ಈ ಜಾಹೀರಾತು ಪ್ರಕಟಗೊಂಡ 15 ದಿನಗಳೊಳಗೆ ಸ್ವವಿವರಗಳನ್ನೊಳಗೊಂಡ ಅರ್ಜಿಯನ್ನು ಸಲ್ಲಿಸಬೇಕು.


ವಿಳಾಸ ಹೀಗಿದೆ:
ಪ್ರೊ.ಬಿ. ತಿಪ್ಪೇಸ್ವಾಮಿ
ಪ್ರಧಾನ ಸಂಶೋಧಕರು
ಸ್ನಾತಕೋತ್ತರ ಸೂಕ್ಷ್ಮ ಜೀವಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗ
ಕುವೆಂಪು ವಿಶ್ವವಿದ್ಯಾಲಯ
ಜ್ಞಾನಸಹ್ಯಾದ್ರಿ
ಶಂಕರಘಟ್ಟ- 577451
ಶಿವಮೊಗ್ಗ


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 04/03/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್​ 19, 2023 (ಇಂದು)

Published by:Latha CG
First published:

ಸುದ್ದಿ 18ಕನ್ನಡ ಟ್ರೆಂಡಿಂಗ್

ಮತ್ತಷ್ಟು ಓದು