• Home
  • »
  • News
  • »
  • jobs
  • »
  • NMPT Recruitment 2022: ಮಂಗಳೂರು ಪೋರ್ಟ್​ನಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಹಾಕಿ- ಸಂಬಳ 70,000

NMPT Recruitment 2022: ಮಂಗಳೂರು ಪೋರ್ಟ್​ನಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಹಾಕಿ- ಸಂಬಳ 70,000

ನವಮಂಗಳೂರು ಪೋರ್ಟ್

ನವಮಂಗಳೂರು ಪೋರ್ಟ್

ನವ ಮಂಗಳೂರು ಬಂದರು ಟ್ರಸ್ಟ್​ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ CA/ICMA ಪೂರ್ಣಗೊಳಿಸಿರಬೇಕು.

  • News18 Kannada
  • Last Updated :
  • Mangalore, India
  • Share this:

    NMPT Recruitment 2022: ನವ ಮಂಗಳೂರು ಬಂದರು ಟ್ರಸ್ಟ್(New Mangalore Port Trust )​ನಲ್ಲಿ 1 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆ ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಂಗಳೂರಿ(Mangalore)ನಲ್ಲಿ ಉದ್ಯೋಗ ಹುಡುಕುತ್ತಿರುವ ಆಸಕ್ತರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಅಭ್ಯರ್ಥಿಗಳು ತಡಮಾಡದೇ ಈ ಕೂಡಲೇ ಅರ್ಜಿ ಹಾಕಿ. ಜನವರಿ 15, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಫ್​ಲೈನ್(Offline)​ನಲ್ಲಿ ಮಾತ್ರ ಅರ್ಜಿ ಸ್ವೀಕಾರ ಮಾಡಲಾಗುತ್ತದೆ.


    ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆನವ ಮಂಗಳೂರು ಬಂದರು ಟ್ರಸ್ಟ್
    ಹುದ್ದೆಅಸಿಸ್ಟೆಂಟ್ ಮ್ಯಾನೇಜರ್
    ಒಟ್ಟು ಹುದ್ದೆ1
    ವೇತನಮಾಸಿಕ ₹ 70,000
    ಉದ್ಯೋಗದ ಸ್ಥಳಮಂಗಳೂರು


    ಶೈಕ್ಷಣಿಕ ಅರ್ಹತೆ:
    ನವ ಮಂಗಳೂರು ಬಂದರು ಟ್ರಸ್ಟ್​ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ CA/ICMA ಪೂರ್ಣಗೊಳಿಸಿರಬೇಕು.


    ಇದನ್ನೂ ಓದಿ: Jobs: ಹಿಂದೂಸ್ತಾನ್ ಕಾಪರ್ ಲಿಮಿಟೆಡ್​​ನಲ್ಲಿ ಕೆಲಸ ಖಾಲಿ ಇದೆ- 10th, PU, ITI ಆಗಿದ್ರೆ ಅರ್ಜಿ ಹಾಕಿ


    ವಯೋಮಿತಿ:
    ನವ ಮಂಗಳೂರು ಬಂದರು ಟ್ರಸ್ಟ್​ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 30 ವರ್ಷ ಮೀರಿರಬಾರದು.


    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ
    ಸಂದರ್ಶನ


    ಅರ್ಜಿ ಸಲ್ಲಿಸುವುದು ಹೇಗೆ?
    ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.


    ಫೈನಾನ್ಸಿಯಲ್ ಅಡ್ವೈಸರ್ & ಚೀಫ್ ಅಕೌಂಟ್ಸ್ ಆಫೀಸರ್
    ನವ ಮಂಗಳೂರು ಬಂದರು ಪ್ರಾಧಿಕಾರ
    ಪಣಂಬೂರು
    ಮಂಗಳೂರು-575010


    ಪ್ರಮುಖ ದಿನಾಂಕಗಳು:
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 12/12/2022
    ಅರ್ಜಿ ಸಲ್ಲಿಸಲು ಕೊನೆ ದಿನ: 15/01/2023

    Published by:Latha CG
    First published: