NMPT Recruitment 2023: ಮಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇಲ್ಲೊಂದು ಗುಡ್ ನ್ಯೂಸ್ ಇದೆ. ನವ ಮಂಗಳೂರು ಬಂದರು ಟ್ರಸ್ಟ್(New Mangalore Port Trust )ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಮೆಡಿಕಲ್ ಆಫೀಸರ್ (Medical Officer) ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಮಂಗಳೂರಿನಲ್ಲಿ (Mangalore) ಉದ್ಯೋಗ ಹುಡುಕುತ್ತಿರುವ ಆಸಕ್ತರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಅಭ್ಯರ್ಥಿಗಳು ತಡಮಾಡದೇ ಈ ಕೂಡಲೇ ಅರ್ಜಿ ಹಾಕಿ. ಏಪ್ರಿಲ್ 4, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಫ್ಲೈನ್ನಲ್ಲಿ(Offline) ಮಾತ್ರ ಅರ್ಜಿ ಸ್ವೀಕಾರ ಮಾಡಲಾಗುತ್ತದೆ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ನವ ಮಂಗಳೂರು ಬಂದರು ಟ್ರಸ್ಟ್ |
ಹುದ್ದೆ | ಮೆಡಿಕಲ್ ಆಫೀಸರ್ |
ಒಟ್ಟು ಹುದ್ದೆ | 2 |
ವಿದ್ಯಾರ್ಹತೆ | ಎಂಬಿಬಿಎಸ್ |
ವೇತನ | ಮಾಸಿಕ ₹ 60,000 |
ಉದ್ಯೋಗದ ಸ್ಥಳ | ಮಂಗಳೂರು |
ಅರ್ಜಿ ಸಲ್ಲಿಸಲು ಕೊನೆಯ ದಿನ | ಏಪ್ರಿಲ್ 4, 2023 |
ಇದನ್ನೂ ಓದಿ: KSP Recruitment 2023: ಪೊಲೀಸ್ ಹುದ್ದೆಗಳಿಗೆ ಅರ್ಜಿ ಹಾಕಲು ನಾಳೆಯೇ ಕೊನೆ ದಿನ- ಈಗಲೇ ಅಪ್ಲೈ ಮಾಡಿ
ವಯೋಮಿತಿ:
ನವ ಮಂಗಳೂರು ಬಂದರು ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 65 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಮಾಸಿಕ ₹ 60,000
ಉದ್ಯೋಗದ ಸ್ಥಳ:
ಮಂಗಳೂರು
ಆಯ್ಕೆ ಪಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಉಪ ಮುಖ್ಯ ವೈದ್ಯಾಧಿಕಾರಿ
ನವ ಮಂಗಳೂರು ಬಂದರು ಪ್ರಾಧಿಕಾರ ಆಸ್ಪತ್ರೆ
ಪಣಂಬೂರು
ಮಂಗಳೂರು
ಕರ್ನಾಟಕ-575010
ಇದನ್ನೂ ಓದಿ: Mysore Paints Recruitment 2023: ತಿಂಗಳಿಗೆ 80,000 ಸಂಬಳ- ಮೈಸೂರು ಪೇಯಿಂಟ್ಸ್ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 02/03/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಏಪ್ರಿಲ್ 4, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ