NWKRTC Recruitment 2023: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ (North Western Karnataka Road Transport Corporation ) ಖಾಲಿ ಇರುವ ಹುದ್ದೆಗಳಿಗೆ ನಾಳೆ ಸಂದರ್ಶನ ನಡೆಯಲಿದೆ. ಒಟ್ಟು 71 ಅಪ್ರೆಂಟಿಸ್ (Apprentice) ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು. ಮಾರ್ಚ್ 18, 2023 ಅಂದರೆ ನಾಳೆ ಬೆಳಗಾವಿಯಲ್ಲಿ ಸಂದರ್ಶನ (Walk-in-Interview) ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಳಗಾವಿಯಲ್ಲಿ (Belagavi) ಪೋಸ್ಟಿಂಗ್ ನೀಡಲಾಗುತ್ತದೆ.
ಸಂದರ್ಶನಕ್ಕೆ ಭಾಗಿಯಾಗುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ |
ಹುದ್ದೆ | ಅಪ್ರೆಂಟಿಸ್ |
ಒಟ್ಟು ಹುದ್ದೆ | 71 |
ವಿದ್ಯಾರ್ಹತೆ | ITI |
ವೇತನ | ನಿಗದಿಪಡಿಸಿಲ್ಲ |
ಉದ್ಯೋಗದ ಸ್ಥಳ | ಬೆಳಗಾವಿ |
ಸಂದರ್ಶನ ನಡೆಯುವ ದಿನ | ಮಾರ್ಚ್ 18, 2023 (ನಾಳೆ) |
ಇದನ್ನೂ ಓದಿ: Karnataka Jobs: ಅರಣ್ಯ ಇಲಾಖೆ ನೇಮಕಾತಿ - ಕನ್ನಡ ಮಾತನಾಡೋಕೆ ಬಂದ್ರೆ 32 ಸಾವಿರ ಸಂಬಳ
ವಿದ್ಯಾರ್ಹತೆ:
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ITI ಪೂರ್ಣಗೊಳಿಸಿರಬೇಕು.
ವಯೋಮಿತಿ:
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು. SC/ST ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ಕೊಡಲಾಗುತ್ತದೆ.
ಉದ್ಯೋಗದ ಸ್ಥಳ:
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಳಗಾವಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳನ್ನು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಮೊದಲಿಗೆ ರಿಜಿಸ್ಟರ್ ಆಗಬೇಕು. ಅದಕ್ಕಾಗಿ https://www.apprenticeshipindia.gov.in/ ಈ ಲಿಂಕ್ಗೆ ಭೇಟಿ ನೀಡಬೇಕು. ಬಳಿಕ ಸಂದರ್ಶನದಲ್ಲಿ ಭಾಗಿಯಾಗಬೇಕು.
ಸಂದರ್ಶನ ನಡೆಯುವ ಸ್ಥಳ:
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ
ಬೆಳಗಾವಿ ಶಾಖೆ ಕಛೇರಿ
ಬೆಳಗಾವಿ
ಕರ್ನಾಟಕ
ಇದನ್ನೂ ಓದಿ: Post Office Jobs: ಪೋಸ್ಟ್ ಆಫೀಸ್ ಹುದ್ದೆ ಖಾಲಿ ಇದೆ- 10th ಪಾಸಾಗಿದ್ರೆ 63 ಸಾವಿರ ಸಂಬಳ
ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 04/03/2023
ಸಂದರ್ಶನ ನಡೆಯುವ ದಿನಾಂಕ: ಮಾರ್ಚ್ 18, 2023 (ನಾಳೆ)
ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ 0831-2468130, 7760991603/7411002301 ಗೆ ಕರೆ ಮಾಡಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ