Raichur District Court Recruitment 2023: ರಾಯಚೂರು ಜಿಲ್ಲಾ ಕೋರ್ಟ್ (Raichur District Court) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 33 ಸ್ಟೆನೋಗ್ರಾಫರ್ & ಟೈಪಿಸ್ಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಮಾರ್ಚ್ 10, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರಾಯಚೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅಭ್ಯರ್ಥಿಗಳು ಆನ್ಲೈನ್ (Online) ಮೂಲಕ ಅರ್ಜಿ ಸಲ್ಲಿಸಬೇಕು. ರಾಜ್ಯ ಸರ್ಕಾರದ ಹುದ್ದೆ ಹುಡುಕುತ್ತಿರುವವರು ಈ ಹುದ್ದೆಗಳಿಗೆ ಅರ್ಜಿ ಹಾಕಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ರಾಯಚೂರು ಜಿಲ್ಲಾ ಕೋರ್ಟ್ |
ಹುದ್ದೆ | ಸ್ಟೆನೋಗ್ರಾಫರ್ & ಟೈಪಿಸ್ಟ್ |
ಒಟ್ಟು ಹುದ್ದೆ | 33 |
ವಿದ್ಯಾರ್ಹತೆ | 10ನೇ ತರಗತಿ, ಡಿಪ್ಲೊಮಾ |
ವೇತನ | ಮಾಸಿಕ ₹27,650-52,650 |
ಉದ್ಯೋಗದ ಸ್ಥಳ | ರಾಯಚೂರು |
ಅರ್ಜಿ ಸಲ್ಲಿಸಲು ಕೊನೆಯ ದಿನ | ಮಾರ್ಚ್ 10, 2023 |
ವಿದ್ಯಾರ್ಹತೆ:
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ, ಡಿಪ್ಲೊಮಾ ಪೂರ್ಣಗೊಳಿಸಿರಬೇಕು.
ಇದನ್ನೂ ಓದಿ: Post Office Jobs: ಕರ್ನಾಟಕದಲ್ಲಿ ಖಾಲಿ ಇರುವ 3036 ಪೋಸ್ಟ್ ಆಫೀಸ್ ಹುದ್ದೆಗಳಿಗೆ ಇವತ್ತೇ ಅರ್ಜಿ ಹಾಕಿ- ನಾಳೆ ಲಾಸ್ಟ್ ಡೇಟ್
ಸ್ಟೆನೋಗ್ರಾಫರ್- ಡಿಪ್ಲೊಮಾ
ಟೈಪಿಸ್ಟ್- ಡಿಪ್ಲೊಮಾ
ಪ್ರೊಸೆಸ್ ಸರ್ವರ್- 10ನೇ ತರಗತಿ
ಪಿಯೋನ್- 10ನೇ ತರಗತಿ
ವೇತನ:
ಸ್ಟೆನೋಗ್ರಾಫರ್- ಮಾಸಿಕ ₹27,650-52,650
ಟೈಪಿಸ್ಟ್- ಮಾಸಿಕ ₹ 21,400-42,000
ಪ್ರೊಸೆಸ್ ಸರ್ವರ್- ಮಾಸಿಕ ₹19,950-37,900
ಪಿಯೋನ್- ಮಾಸಿಕ ₹17,000-28,950
ವಯೋಮಿತಿ:
ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 40 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಇದನ್ನೂ ಓದಿ: JOBS: ನಿಮ್ಮದು ಎಂಜಿನಿಯರಿಂಗ್ ಆಗಿದೆಯಾ? ಬೆಂಗಳೂರಿನಲ್ಲಿದೆ 42,000 ಸಂಬಳದ ಉದ್ಯೋಗ-ಈಗಲೇ ಅಪ್ಲೈ ಮಾಡಿ
ಅರ್ಜಿ ಶುಲ್ಕ:
ಸಾಮಾನ್ಯ/2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು- 200 ರೂ.
SC/ST/PWD ಅಭ್ಯರ್ಥಿಗಳು- 100 ರೂ.
ಪಾವತಿಸುವ ಬಗೆ- ಆನ್ಲೈನ್
ಆಯ್ಕೆ ಪ್ರಕ್ರಿಯೆ:
ಸಂದರ್ಶನ
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 09/02/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್ 10, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ