RCUB Recruitment 2023: ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ, ಬೆಳಗಾವಿ(Rani Chennamma University, Belagavi) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಉಳಿಕೆ ವೃಂದದ ಅಡಿಯಲ್ಲಿ ಲಭ್ಯವಿರುವ ವಿವಿಧ ವೃಂದದ ಬೋಧಕೇತರ (Non-Teaching) ಹುದ್ದೆಗಳ ನೇರ ನೇಮಕಾತಿಗಾಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 2, 2023 ಅಂದರೆ ಇವತ್ತೇ ಕೊನೆಯ ದಿನವಾಗಿದೆ (Last Date). ಅಭ್ಯರ್ಥಿಗಳು ಆಫ್ಲೈನ್ / ಪೋಸ್ಟ್ ಮೂಲಕ ಅರ್ಜಿ ಹಾಕಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಳಗಾವಿಯಲ್ಲಿ (Belagavi) ಪೋಸ್ಟಿಂಗ್ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ, ಬೆಳಗಾವಿ |
ಹುದ್ದೆ | ಬೋಧಕೇತರ ಹುದ್ದೆ |
ಅರ್ಜಿ ಶುಲ್ಕ | 1000 ರೂ. |
ಅರ್ಜಿ ಸಲ್ಲಿಕೆ ಬಗೆ | ಆಫ್ಲೈನ್ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಮಾರ್ಚ್ 2, 2023 |
ಇದನ್ನೂ ಓದಿ: BOB Recruitment 2023: ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಈಗಲೇ ಅರ್ಜಿ ಹಾಕಿ- ನಾಳೆಯೇ ಲಾಸ್ಟ್ ಡೇಟ್
ಅರ್ಜಿ ಶುಲ್ಕ:
SC/ST/ ಪ್ರವರ್ಗ-1- 500ರೂ.ಗಳು
ಇತರೆ ಸಾಮಾನ್ಯ ಅಭ್ಯರ್ಥಿಗಳು- 1000 ರೂ.
ಪಾವತಿಸುವ ಬಗೆ- ಡಿಮ್ಯಾಂಡ್ ಡ್ರಾಫ್ಟ್
ರಾಷ್ಟ್ರೀಕೃತ ಬ್ಯಾಂಕಿನ ಡಿ.ಡಿಯನ್ನು ಹಣಕಾಸು ಅಧಿಕಾರಿಗಳು, ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ, ಬೆಳಗಾವಿ- ಇವರ ಹೆಸರಿನಲ್ಲಿ ತೆಗೆಯಬೇಕು.
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳು ಹಾಗೂ ಅರ್ಜಿ ಶುಲ್ಕ ಕಟ್ಟಿದ ಡಿ.ಡಿಯೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಕುಲಸಚಿವರು
ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ
ಭೂತರಾಮನಹಟ್ಟಿ
ಬೆಳಗಾವಿ -591156
ಅರ್ಜಿಯು ಮಾರ್ಚ್ 2, 2023 ಅಂದರೆ ಇಂದು ಸಂಜೆ 5 ಗಂಟೆಯೊಳಗೆ ಕುಲಸಚಿವರ ಕಚೇರಿಗೆ ತಲುಪಬೇಕು.
ಇದನ್ನೂ ಓದಿ: Kanara College Society Kumta Recruitment 2023: ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಇವತ್ತೇ ಅರ್ಜಿ ಹಾಕಿ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: ಫೆಬ್ರವರಿ 10, 2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್ 2, 2023 (ಇಂದು)
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ