RDPR Karnataka Recruitment 2023: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕರ್ನಾಟಕ (Rural Development and Panchayat Raj Department Karnataka ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 6 ಓಂಬುಡ್ಸ್ಪರ್ಸನ್ (Ombudsperson) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 13, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಅಭ್ಯರ್ಥಿಗಳು ಆಫ್ಲೈನ್(Offline) ಮೂಲಕ ಅರ್ಜಿ ಸಲ್ಲಿಸಬೇಕು. ಕರ್ನಾಟಕ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅನುಷ್ಠಾನದ ಸಂದರ್ಭದಲ್ಲಿ ಸ್ವೀಕೃತವಾಗುವ ದೂರುಗಳ ವಿಲೇವಾರಿ ಮತ್ತು ಕುಂದುಕೊರತೆಗಳ ನಿವಾರಣೆಗಾಗಿ ಓಂಬುಡ್ಸ್ಪರ್ಸನ್ ಹುದ್ದೆಗಳನ್ನು ರಚಿಸಲಾಗಿದೆ. ಚಾಮರಾಜನಗರ, ಮಂಡ್ಯ, ಚಿಕ್ಕಮಗಳೂರು, ಗದಗ, ತುಮಕೂರು ಮತ್ತು ವಿಜಯಪುರದಲ್ಲಿ ಓಂಬುಡ್ಸ್ಪರ್ಸನ್ ಹುದ್ದೆಗಳು ಖಾಲಿ ಇವೆ. ಈ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕರ್ನಾಟಕ |
ಹುದ್ದೆ | ಓಂಬುಡ್ಸ್ಪರ್ಸನ್ |
ಒಟ್ಟು ಹುದ್ದೆ | 6 |
ವಿದ್ಯಾರ್ಹತೆ | ಅಧಿಸೂಚನೆ ಪರಿಶೀಲಿಸಿ |
ವೇತನ | ನಿಗದಿಪಡಿಸಿಲ್ಲ |
ಉದ್ಯೋಗದ ಸ್ಥಳ | ಕರ್ನಾಟಕ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಏಪ್ರಿಲ್ 13, 2023 |
ಇದನ್ನೂ ಓದಿ: Post Office Jobs: ಪೋಸ್ಟ್ ಆಫೀಸ್ ಹುದ್ದೆ ಖಾಲಿ ಇದೆ- 10th ಪಾಸಾಗಿದ್ರೆ 63 ಸಾವಿರ ಸಂಬಳ
ವಿದ್ಯಾರ್ಹತೆ & ವಯೋಮಿತಿ:
ಅಭ್ಯರ್ಥಿಗಳು ಅಧಿಸೂಚನೆಯನ್ನು ಪರಿಶೀಲಿಸಿ
ಅನುಭವ:
ಅಭ್ಯರ್ಥಿಗಳು ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕು.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ವೇತನ:
ನಿಗದಿಪಡಿಸಿಲ್ಲ.
ಇದನ್ನೂ ಓದಿ: KPSC Recruitment 2023: ಕಾಮರ್ಸ್ ಪದವೀಧರರಿಗೆ ಉದ್ಯೋಗಾವಕಾಶ- ತಿಂಗಳಿಗೆ 52 ಸಾವಿರ ಸಂಬಳ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಶೈಕ್ಷಣಿಕ ದಾಖಲೆಗಳು, ಅನುಭವ ಪತ್ರ ಮತ್ತು ರೆಸ್ಯೂಮ್ ಜೊತೆಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿಯನ್ನು ಪಡೆದುಕೊಳ್ಳಲು ಅಧಿಕೃತ ವೆಬ್ಸೈಟ್ www.rdpr.karnataka.gov.in ಗೆ ಭೇಟಿ ನೀಡಿ.
ಆಯುಕ್ತರು
ಗ್ರಾಮೀಣಾಭಿವೃದ್ಧಿ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
5ನೇ ಮಹಡಿ
ಫ್ಲಾಟ್ ನಂ. 1243
ಕೆಎಸ್‌ಐಐಡಿಸಿ ಕಟ್ಟಡ
ಐಟಿ ಪಾರ್ಕ್
ಸೌತ್ ಬ್ಲಾಕ್
ರಾಜಾಜಿನಗರ ಇಂಡಸ್ಟ್ರಿಯಲ್ ಎಸ್ಟೇಟ್
ಬೆಂಗಳೂರು-560044
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 14/03/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಏಪ್ರಿಲ್ 13, 2023
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-22342163 ಗೆ ಕರೆ ಮಾಡಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ