RGUHS Recruitment 2023: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (Rajiv Gandhi University of Health Sciences) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಹಾಕಲು ಇವತ್ತೇ ಕೊನೆಯ ದಿನವಾಗಿದೆ(Last Date). ಒಟ್ಟು 88 ಜೂನಿಯರ್ ಅಸಿಸ್ಟೆಂಟ್, ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ (Bengaluru) ಪೋಸ್ಟಿಂಗ್ ನೀಡಲಾಗುತ್ತದೆ. ಅಭ್ಯರ್ಥಿಗಳು ಮೇ 17ರೊಳಗೆ ಅಂದರೆ ಇವತ್ತೇ ಅರ್ಜಿ ಹಾಕಬೇಕು. ಆನ್ಲೈನ್ (Online) ಮೂಲಕ ಮಾತ್ರ ಅರ್ಜಿ ಸ್ವೀಕಾರ ಮಾಡಲಾಗುತ್ತದೆ. ಹೀಗಾಗಿ ಅಭ್ಯರ್ಥಿಗಳು ತಡಮಾಡದೇ ಈಗಲೇ ಅಪ್ಲಿಕೇಶನ್ (Application) ಹಾಕಿ.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ |
ಹುದ್ದೆ | ಜೂನಿಯರ್ ಅಸಿಸ್ಟೆಂಟ್, ಅಸಿಸ್ಟೆಂಟ್ |
ಒಟ್ಟು ಹುದ್ದೆ | 88 |
ವೇತನ | ಮಾಸಿಕ ₹ 43,100-83,900 |
ಉದ್ಯೋಗದ ಸ್ಥಳ | ಬೆಂಗಳೂರು |
ಅರ್ಜಿ ಸಲ್ಲಿಸಲು ಕೊನೆಯ ದಿನ | ಮೇ 17, 2023 |
ವಯೋಮಿತಿ ಸಡಿಲಿಕೆ:
ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಜೂನಿಯರ್ ಪ್ರೋಗ್ರಾಮರ್ (ಗ್ರೂಪ್-ಬಿ)- ಮಾಸಿಕ ₹ 43,100-83,900
ಅಸಿಸ್ಟೆಂಟ್ ಎಂಜಿನಿಯರ್ (ಸಿವಿಲ್) (ಗ್ರೂಪ್-ಬಿ)- ಮಾಸಿಕ ₹ 43,100-83,900
ಅಸಿಸ್ಟೆಂಟ್ ಲೈಬ್ರರಿಯನ್ (ಗ್ರೂಪ್-ಸಿ)- ಮಾಸಿಕ ₹ 30,350-58,250
ಅಸಿಸ್ಟೆಂಟ್ (ಗ್ರೂಪ್-ಸಿ)- ಮಾಸಿಕ ₹37,900-70,850
ಜೂನಿಯರ್ ಅಸಿಸ್ಟೆಂಟ್ (ಗ್ರೂಪ್-ಸಿ)- ಮಾಸಿಕ ₹21,400-42,000
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 17/04/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 17, 2023 (ನಾಳೆ)
ಇ-ಪೋಸ್ಟ್ ಆಫೀಸ್ ಮೂಲಕ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನ: ಮೇ 20, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ